ಆರೋಗ್ಯದ ಬಗ್ಗೆ ಶಾಲೆಗಳಲ್ಲಿ ಜಾಗೃತಿ ಅಭಿನಂದನಾರ್ಹ: ದಿನಕರ ಬಾಬು

Source: so news | Published on 14th December 2019, 12:32 AM | Coastal News | Don't Miss |


ಉಡುಪಿ: ವಿದ್ಯಾಭ್ಯಾಸ ಮತ್ತು ವೃತ್ತಿ ಜೀವನದಲ್ಲಿ ಏಳಿಗೆಯನ್ನು ಸಾಧಿಸಲು ಉತ್ತಮ ಆರೋಗ್ಯ ಅತ್ಯವಶ್ಯಕ. ಮಕ್ಕಳ ಆರೋಗ್ಯ ಚೆನ್ನಾಗಿದ್ದಾಗ ಕಲಿಯುವುದರಲ್ಲಿ ಹುಮ್ಮಸ್ಸು ಹೆಚ್ಚಾಗಿ ಜೀವನದಲ್ಲಿ ಸಾಧಿಸಲು ಸಹಾಯಕವಾಗುತ್ತದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಜಾಗೃತಿ ಮೂಡುತ್ತಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ಶಾಲಾ ಮಕ್ಕಳ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯ ರಕ್ಷಣೆ ಬಗ್ಗೆ ಶಾಲೆಗಳಲ್ಲಿ ಮಾಹಿತಿ ನೀಡುತ್ತಿರುವುದು ಉತ್ತಮ ವಿಚಾರ. ಆರೋಗ್ಯದ ದೃಷ್ಟಿಯಿಂದ ನೋಡಿದರೆ ಜಿಲ್ಲೆಯ ಎಲ್ಲಾ ಶಾಲೆಗಳು ಉತ್ತಮ ಸಾಧನೆ ಮಾಡಿವೆ. ಈ ಸಾಧನೆಗೆ ಕಾರಣಕರ್ತರಾದ ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಭಿನಂದನೆಗೆ ಅರ್ಹರು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ.ಕೆ. ಶೆಟ್ಟಿ ಮಾತನಾಡಿ ಎಲ್ಲಾ ಶಾಲೆಗಳಲ್ಲಿಯೂ ಲಸಿಕಾ ಕಾರ್ಯಕ್ರಮ ನಡೆಸಿದಾಗ ಯಾವುದೇ ತೆರನಾದ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ. ಜನಸಾಂದ್ರತೆ ಹೆಚ್ಚಿರುವ ದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯೂ ಹೆಚ್ಚಿರುತ್ತದೆ. ಹಿಂದೆಲ್ಲಾ ಮಾರಣಾಂತಿಕ ರೋಗಗಳಿಂದಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದರು, ಆದರೆ ಈಗ ದೇಶವು ವಿಜ್ಞಾನದ ವಿಷಯದಲ್ಲಿ ಮುಂದುವರಿದಿರುವುದರಿAದ ಎಲ್ಲಾ ರೋಗಗಳ ವಿರುದ್ದವೂ ಜಯ ಸಾಧಿಸಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯ, ಸ್ವಚ್ಛತೆ ಇಲ್ಲದಲ್ಲಿ ಖಾಯಿಲೆಗಳೂ ಹೆಚ್ಚಿರುತ್ತವೆ. ಆರೋಗ್ಯಯುಕ್ತ ರೋಗ ಮುಕ್ತ ಸಮಾಜ ಸ್ಥಾಪಿಸುವುದು ನಮ್ಮ ಗುರಿಯಾಗಿರಬೇಕು. ಈ ನಿಟ್ಟಿನಲ್ಲಿ ಅಧ್ಯಾಪಕರು ಗಮನ ಹರಿಸಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಆರೋಗ್ಯವಂತ ಸಮಾಜವನ್ನು ರೂಪಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಡಿಫ್ತೀರಿಯಾ, ಟೆಟನಸ್ ಮತ್ತು ನಾಯಿ ಕೆಮ್ಮಿನಂತಹ ಸಾಂಕ್ರಾಮಿಕ ರೋಗಗಳ ಮೇಲೆ ಪೂರ್ಣ ಪ್ರಮಾಣದ ಹತೋಟಿ ಸಾಧ್ಯವಾಗಿಲ್ಲ. ಇವು ಸಾಂಕ್ರಾಮಿಕ ರೋಗಗಳಾಗಿರುವುದರಿಂದ ಶಾಲಾ ಮಕ್ಕಳಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ರೋಗಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ೫ ರಿಂದ ೬ ವರ್ಷ ವಯಸ್ಸಿನ ೪೭೦೦ ಮಕ್ಕಳಿಗೆ ಡಿಫ್ತೀರಿಯಾ ಲಸಿಕೆ, ೧೦ ರಿಂದ ೧೧ ವಯಸ್ಸಿನ ೪೭೦೦ ಮಕ್ಕಳಿಗೆ ಟಿ.ಡಿ ಲಸಿಕೆ ಮತ್ತು ೧೫ ರಿಂದ ೧೬ ವಯಸ್ಸಿನ ೪೮೦೦ ಮಕ್ಕಳಿಗೆ ಟಿ.ಡಿ ಬೂಸ್ಟರ್ ಲಸಿಕೆಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಮ್.ಜಿ.ರಾಮ, ಆದಿ ಉಡುಪಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಉಷಾ, ರೋಟರಿ ಕ್ಲಬ್ ಸದಸ್ಯರಾದ ರಾಮಚಂದ್ರ ಐತಾಳ್ ಮತ್ತು ಜಯಚಂದ್ರ ರಾವ್ ಉಪಸ್ಥಿತರಿದ್ದರು.
ಹಿರಿಯ ಆರೋಗ್ಯ ಸಹಾಯಕ ಸತೀಶ್ ರಾವ್ ಸ್ವಾಗತಿಸಿ, ನಿರೂಪಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಜನಾರ್ಧನ್ ಭಟ್ ವಂದಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...