ಸಾರ್ವಜನಿಕರಿಗೆ ಪ್ಲಾಸ್ಟಿಕ್ ಕುರಿತು ಜಾಗೃತಿ

Source: so news | Published on 26th September 2019, 11:52 PM | State News | Don't Miss |


ಹುಬ್ಬಳ್ಳಿ: ಪ್ಲಾಸ್ಟಿಕ್ ಮುಕ್ತ ಹುಬ್ಬಳ್ಳಿ ನಗರ ಅಭಿಯಾನ ಆರಂಭಿಸಿರುವ ತಹಶೀಲದಾರರ ಕಾರ್ಯಾಲಯದಿಂದ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸಲಾಯಿತು.
ಮಿನಿವಿಧಾನ ಸೌಧದಲ್ಲಿನ ಕಚೇರಿಗಳಿಗೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‍ಗಳನ್ನು ಹಿಡಿದು ಆಗಮಿಸುವ ಸಾರ್ವಜನಿಕರನ್ನು ಮುಖ್ಯ ಬಾಗಿಲ ಬಳಿಯೇ ತಡೆದು, ಮಹಿಳಾ ಸಿಬ್ಬಂದಿ ಅವರಿಂದ ಪ್ಲಾಸ್ಟಿಕ್ ಬ್ಯಾಗ್‍ಗಳನ್ನು ಪಡೆದು ಬಟ್ಟೆ ಚೀಲಗಳನ್ನು ನೀಡಿದರು. ಸಾರ್ವಜನಿಕರಿಗೆ ಪ್ಲಾಸ್ಟಿಕ್‍ನಿಂದ ಆಗುವ ಹಾನಿ ಕುರಿತು ಮಾಹಿತಿ ನೀಡಿ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ಕರೆ ನೀಡಿದರು. 
ಮುಂಜಾನೆಯಿಂದ 4 ತಂಡಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿ, ಸಮಾರು 500  ಜನರಿಂದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗುಗಳನ್ನು ಪಡೆದು ಬಟ್ಟೆ ಚೀಲಗಳನ್ನು ವಿತರಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...