ಅಯೋಧ್ಯೆ: ರಾಮ ಮಂದಿರ ಪ್ರಾಣಪ್ರತಿಷ್ಠಾಪನೆ; ಶೃಂಗೇರಿ ಸ್ವಾಮೀಜಿ ಭಾಗವಹಿಸುವುದಿಲ್ಲ: ಮಠದಿಂದ ಪ್ರಕಟನೆ

Source: Vb | By I.G. Bhatkali | Published on 19th January 2024, 8:40 AM | State News | National News |

ಚಿಕ್ಕಮಗಳೂರು: ಅಯೋಧ್ಯೆ ಯಲ್ಲಿ ಜ.22ರಂದು ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶೃಂಗೇರಿ ಶಂಕರಾಚಾರ್ಯ ಮಠದ ಜಗದ್ಗುರುಗಳು ಭಾಗವಹಿಸುವುದಿಲ್ಲ. ಕಾರ್ಯಕ್ರಮದಲ್ಲಿ ಮಠದ ಪ್ರತಿನಿಧಿಯಾಗಿ ಆಡಳಿತಾಧಿಕಾರಿ ಮಾತ್ರ ಭಾಗವಹಿಸಲಿದ್ದಾರೆ ಎಂದು ಶೃಂಗೇರಿ ಮಠದ ಪ್ರಕಟನೆ ತಿಳಿಸಿದೆ.

ಆಯೋದ್ಯಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನಾ ಕಾರ್ಯ ಕ್ರಮದಲ್ಲಿ ಶೃಂಗೇರಿ ಶಂಕರಾಚಾರ್ಯರ ಭಾವಚಿತ್ರ ಬಳಸಿಕೊಂಡು ಶೃಂಗೇರಿ ಮಠದ ಜಗದ್ಗುರುಗಳು ಭಾಗವಹಿಸಲಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ. ಈ ಸುದ್ದಿಯಲ್ಲಿ ಶಿವಮೊಗ್ಗ ನಗರ ಸಮೀಪದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ಕುದಳಿ ಮಠವನ್ನೇ ಶೃಂಗೇರಿ ಮಠ ಎಂದು ಬಿಂಬಿಸಲಾಗಿದೆ.

ಇದು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಕುದಳಿ ಮಠ ಶೃಂಗೇರಿ ಮಠದ ಶಾಖೆಯಾಗಿದ್ದರೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ಮಠವಾಗಿದೆ. ಕುದಳಿ ಮಠ ದಕ್ಷಿಣಮ್ನಾಯ ಶಾರದ ಮಠವೂ ಅಲ್ಲ, ಶೃಂಗೇರಿ ಮಠವೂ ಅಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಜ.22ರಂದು ಅಯೋಧ್ಯೆ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭಾಗವಹಿಸುತ್ತಿಲ್ಲ. ಶೃಂಗೇರಿ ಮಠದ ಪ್ರತಿನಿಧಿಯಾಗಿ ಮಠದ ಆಡಳಿತಾಧಿಕಾರಿಯಾಗಿ ರುವ ವಿ.ಆ‌ರ್.ಗೌರಿಶಂಕ‌ರ್ ಅವರು ಮಾತ್ರ ಭಾಗವಹಿಸಲಿದ್ದಾರೆಂದು ಪ್ರಕಟನೆಯಲ್ಲಿ ತಿಳಿಸಿದ್ದು, ಮಠದ ಭಕ್ತರು, ಸಾರ್ವಜನಿಕರು ಸುಳ್ಳು - ಸುದ್ದಿಗಳಿಗೆ ಕಿವಿಗೊಡಬಾರದು ಎಂದು ತಿಳಿಸಲಾಗಿದೆ.

ಅಯೋಧ್ಯೆ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆ ಹಿನ್ನೆಯಲ್ಲಿ ಜಗದ್ಗುರು ಶಂಕರಾಚಾರ್ಯ ಅವರು ರಚಿಸಿರುವ ಶ್ರೀರಾಮ ತಾರಕ ಮಂತ್ರ ಹಾಗೂ ರಾಮ ಭುಜಂಗ ಸ್ತೋತ್ರವನ್ನು ಭಕ್ತರು ಪಠಿಸುವ ಮೂಲಕ ಶ್ರೀರಾಮನ ಅನುಗ್ರಹ ಪಡೆಯಬೇಕೆಂಬ ಪ್ರಕಟನೆಯನ್ನು ಮಾತ್ರ ಈ ಹಿಂದೆ ಮಠದ ವತಿಯಿಂದ ಹೊರಡಿಸಲಾಗಿದೆ ಎಂದು ಮಠದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...