ಆಜಾದಿ ಕಾ ಅಮೃತ ಮಹೋತ್ಸವ ಫಿಟ್ ಇಂಡಿಯಾ ಫ್ರೀಡಂ ರನ್ 2.0

Source: SO News | By Laxmi Tanaya | Published on 15th September 2021, 8:13 AM | State News | Don't Miss |

ಧಾರವಾಡ : ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಫಿಟ್ ಇಂಡಿಯಾ ಫ್ರೀಡಂ ರನ್ 2.0 ಕಾರ್ಯಕ್ರಮ ಇಂದು ಧಾರವಾಡ ನಗರದಲ್ಲಿ ಯಶಸ್ವಿಯಾಗಿ ಜರುಗಿತು.

 ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಜಿಗಳೂರ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇಂದು ಬೆಳಿಗ್ಗೆ ಆಯೋಜಿಸಿದ್ದ ಫಿಟ್ ಇಂಡಿಯಾ ರನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹಸಿರು ನಿಶಾನೆ ತೋರಿಸಿ ,ಚಾಲನೆ ನೀಡಿ ಮಾತನಾಡಿ, 

 ಆರೋಗ್ಯವೇ ಭಾಗ್ಯ ಎನ್ನುವುದು ಸರ್ವಕಾಲಿಕವಾದುದು.ವಿದ್ಯಾರ್ಥಿ,ಯುವಜನರು ಪ್ರತಿನಿತ್ಯ ಕನಿಷ್ಠ ಅರ್ಧ ಗಂಟೆ ವ್ಯಾಯಾಮ,ದೈಹಿಕ ಚಟುವಟಿಕೆಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಶಿಕ್ಷಣ ಮತ್ತು ದೈಹಿಕ ಚಟುವಟಿಕೆಗೆ  ಪರಸ್ಪರ ಪೂರಕವಾಗಿ ಸಮಾನ ಪ್ರಾಶಸ್ತ್ಯ ನೀಡಬೇಕು.ಇತ್ತೀಚೆಗೆ ನಡೆದ ಓಲಂಪಿಕ್ ಮತ್ತು ಪ್ಯಾರಾಲಂಪಿಕ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದಾರೆ ಅವರಿಂದ ಸ್ಫೂರ್ತಿ ಪಡೆಯಬೇಕು ಎಂದರು.

 ಕಾಲೇಜು ರಸ್ತೆ, ಆಲೂರು ವೆಂಕಟರಾವ್ (ಜ್ಯುಬಿಲಿ)ವೃತ್ತ, ಹಳೆಯ ಎಸ್.ಪಿ.ವೃತ್ತ, ಬೇಂದ್ರೆ ಭವನ  ಮಾರ್ಗವಾಗಿ ಸಾಧನಕೇರಿ ಉದ್ಯಾನವನದವರೆಗೆ ವಿದ್ಯಾರ್ಥಿಗಳೊಂದಿಗೆ ಓಟದ ಮೂಲಕ ಜಾಥಾ ತಲುಪಿತು. ಈ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

 ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ,ಪ್ರೊಬೆಷನರಿ ಐಎಎಸ್ ಅಧಿಕಾರಿ ಮಾಧವ ಗಿತ್ತೆ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಎಂ.ಗೌತಮರೆಡ್ಡಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡಿ.ಡೊಳ್ಳಿನ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಪ್ರೋ.ಬಿ.ಎಸ್.ಪಾಟೀಲ,ಜಿಗಳೂರ ಮಹಿಳಾ ಕಾಲೇಜು ಪ್ರಾಚಾರ್ಯೆ ಪ್ರೋ.ಗಿರಿಜಾ ಯಾಬಣ್ಣವರ, ಎನ್.ಎಸ್.ಎಸ್.ಅಧಿಕಾರಿ ಶಕುಂತಲಾ ಬಿರಾದಾರ, ಡಾ.ಬಸವರಾಜ ತಲ್ಲೂರ ಸೇರಿದಂತೆ ಎನ್.ಎಸ್.ಎಸ್ . ಸ್ವಯಂ ಸೇವಕರು ಮತ್ತಿತರರು ಭಾಗವಹಿಸಿದ್ದರು.

Read These Next

ಬೆಂಗಳೂರು: 2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಸಚಿವ ಬಿ. ಶ್ರೀರಾಮುಲು

2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ...

ಬೆಂಗಳೂರು: ಅಕ್ಟೋಬರ್ 24ರಿಂದ ಒಂದು ವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಅಭಿಯಾನ - ಸಚಿವ ಸುನೀಲ್ ಕುಮಾರ್

ರಾಜ್ಯಾದಾದ್ಯಂತ 66ನೆ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...