ಮೋದಿ,ಯೋಗಿ ವಿರುದ್ಧ ದ್ವೇಷಭಾಷಣ; ಆಝಮ್ ಖಾನ್‌ ಗೆ 3 ವರ್ಷ ಜೈಲುಶಿಕ್ಷೆ

Source: Vb | By I.G. Bhatkali | Published on 29th October 2022, 1:48 AM | National News |

ಲಕ್ನೋ: ಮೂರು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ಎಸ್ಟಿ ನಾಯಕ ಆಝಮ್ ಖಾನ್(74) ಅವರಿಗೆ ರಾಮಪುರ ನ್ಯಾಯಾಲಯವು ಗುರುವಾರ ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಖಾನ್‌ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯವು,ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಒಂದು ವಾರದ ಕಾಲಾವಕಾಶ ನೀಡಿದೆ. 'ನಾನು ನಂಬಿಕೆಯನ್ನು ಕಳೆದುಕೊಂಡಿಲ್ಲ. ಎಲ್ಲ ಬಾಗಿಲುಗಳೂ ಮುಚ್ಚಿಲ್ಲ, ನಾನು ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದು ತೀರ್ಪಿನ ಬಳಿಕ ಎಸ್‌ಪಿ ಶಾಸಕ ಖಾನ್ ಹೇಳಿದರು.

ಉಚ್ಚ ನ್ಯಾಯಾಲಯದಲ್ಲಿ ಶಿಕ್ಷೆಯನ್ನು ತಕ್ಷಣವೇ ಪ್ರಶ್ನಿಸದಿದ್ದರೆ ಖಾನ್ ಅವರು ಶಾಸಕ ಸ್ಥಾನದಿಂದ ಅನರ್ಹತೆಯನ್ನು ಎದುರಿಸಬೇಕಾಗುತ್ತದೆ. ನಿಯಮದಂತೆ ಎರಡು ವರ್ಷಗಳಿಗೂ ಹೆಚ್ಚಿನ ಜೈಲುಶಿಕ್ಷೆಗೆ ಗುರಿಯಾಗುವ ಶಾಸಕ ಅನರ್ಹಗೊಳ್ಳುವುದರಿಂದ ಉ.ಪ್ರ. ವಿಧಾನಸಭೆಯೂ ಅವರನ್ನು ಅನರ್ಹಗೊಳಿ ಸಲು ತ್ವರಿತ ಕ್ರಮ ಕೈಗೊಳ್ಳಬಹುದು. ಬೆಳಗ್ಗೆ ನ್ಯಾಯಾಲಯವು 2019ರ ಚುನಾವಣಾ ಪ್ರಚಾರದ ಸಂದರ್ಭ ಮೋದಿ, ಯೋಗಿ ಮತ್ತು ಆಗಿನ ಜಿಲ್ಲಾಧಿಕಾರಿ ಆಂಜನೇಯ ಕುಮಾರ ಸಿಂಗ್ ಅವರ ವಿರುದ್ಧ ದ್ವೇಷ ಭಾಷಣ ಪ್ರಕರಣದಲ್ಲಿ ಖಾನ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿತ್ತು. ನ್ಯಾಯಾಲಯವು ಅವರಿಗೆ 6,000 ರೂ.ಗಳ ದಂಡವನ್ನೂ ವಿಧಿಸಿದೆ.

ಮೋದಿಯವರು ದೇಶದಲ್ಲಿ ಮುಸ್ಲಿಮರ ಅಸ್ತಿತ್ವಕ್ಕೆ ಕಠಿಣ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆಂದು ಖಾನ್ ಆರೋಪಿಸಿದ್ದರು. ಅಖಿಲೇಶ್ ಯಾದವರ ಎಸ್ ಪಿಯಲ್ಲಿ ನಂ.2 ನಾಯಕನೆಂದು ಪರಿಗಣಿಸಲಾಗಿರುವ ಖಾನ್ ರಾಮಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಭಾರೀ ಸಂಖ್ಯೆಯಲ್ಲಿ ಬೆಂಬಲಿಗರನ್ನು ಹೊಂದಿದ್ದಾರೆ.

ಸರ್ವೋಚ್ಚ ನ್ಯಾಯಾಲಯವು ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಖಾನ್ ಅವರನ್ನು ಮೇ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಗೊಳಿಸಲಾಗಿತ್ತು. ಭೂ ಕಬಳಿಕೆ ಪ್ರಕರಣದಲ್ಲಿ ಸುಮಾರು ಎರಡು ವರ್ಷಗಳ ಕಾಲ ಅವರು ಜೈಲಿನಲ್ಲಿದ್ದರು.

ತಾನು ಜೈಲಿನಲ್ಲಿಯೇ ಉಳಿಯುವಂತಾಗಲು ಉ.ಪ್ರ.ಸರಕಾರವು ನಿರಂತರವಾಗಿ ತನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಖಾನ್ ತನ್ನ ಜಾಮೀನು ಅರ್ಜಿಯಲ್ಲಿ ವಾದಿಸಿದ್ದರು.

2017ರಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಖಾನ್ ವಿರುದ್ಧ ಭ್ರಷ್ಟಾಚಾರ, ಕಳ್ಳತನ ಮತ್ತು ಭೂ ಕಬಳಿಕೆ ಸೇರಿದಂತೆ 87 ಪ್ರಕರಣಗಳು ದಾಖಲಾಗಿವೆ.

ದ್ವೇಷ ಭಾಷಣಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ದಿಲ್ಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರಕಾರಗಳಿಗೆ ಸೂಚಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಕ್ರಮ ಕೈಗೊಳ್ಳುವಲ್ಲಿ ವಿಳಂಬವು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು. ಇದಾದ ಒಂದು ವಾರದಲ್ಲಿ ಖಾನ್ ವಿರುದ್ಧ ತೀರ್ಪು ಹೊರಬಿದ್ದಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...