ನಾಮಧಾರಿ ಸಮಾಜದ ಹಿರಿಯರಾದ ಬಾಬು ಮಾಸ್ತರ್ ನಿಧನ.

Source: SO News | By Laxmi Tanaya | Published on 14th October 2020, 8:45 PM | Coastal News | Don't Miss |

ಭಟ್ಕಳ : ನಾಮಧಾರಿ ಸಮಾಜದ ಹಿರಿಯರಾದ ಜೆ ಎನ್ ನಾಯ್ಕ (ಬಾಬು ಮಾಸ್ತರ್) ಅವರು ಮುಂಡಳ್ಳಿಯ ಸ್ವಗೃಹದಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ.

ಅವರಿಗೆ 84 ವರ್ಷ ವಯಸ್ಸಾಗಿತ್ತು. ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ಮಾಜಿ ಅಧ್ಯಕ್ಷರು,  ಧರ್ಮಸ್ಥಳದ ಶ್ರೀರಾಮ ಕ್ಷೇತ್ರದ ಟ್ರಸ್ಟಿಯಾಗಿದ್ದರು. ಕೆಲ ದಿನಗಳಿಂದ ಅವರು ಅನಾರೋಗ್ಯಕ್ಕೊಳಗಾಗಿದ್ದ ಅವರು ಮುಂಡಳ್ಳಿ ಯ ಸ್ವಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. 

ಭಟ್ಕಳ ನಾಮಧಾರಿ ಸಮಾಜದ ಭೀಷ್ಮರೆಂದೇ ಪ್ರಖ್ಯಾತರಾಗಿದ್ದ  ಇವರು ಸಮಾಜದ ಸಂಘಟನೆಯಲ್ಲಿ ಹಲವಾರು ಸೇವಾ ಸಂಸ್ಥೆಗಳಲ್ಲಿ , ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು  ಪತ್ನಿ, ಇಬ್ಬರು ಪುತ್ತರು, ಐವರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

 ಬಾಬು ಮಾಸ್ತರ್ ಅವರ ನಿಧನಕ್ಕೆ  ನಾಮಧಾರಿ  ಸಮಾಜದ ಗುರುಮಠ ಶ್ರೀ ನಿಚ್ಚಲಮಕ್ಕಿ ದೇವಸ್ಥಾನದ ಆಡಳಿತ ಮಂಡಳಿ ,ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಗುರುದೇವ ಮಠ, ಭಟ್ಕಳ  ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಶೋಕ ವ್ಯಕ್ತಪಡಿಸಿವೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...