ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ. ಧಾರ್ಮಿಕ ಕಟ್ಟಡ, ಧಾರ್ಮಿಕ ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ: ಆಯುಕ್ತೆ ಪ್ರೀತಿ ಗೆಹ್ಲೋಟ್

Source: SO News | By Laxmi Tanaya | Published on 20th April 2021, 7:59 AM | State News | Don't Miss |

ಬಳ್ಳಾರಿ : ಧಾರ್ಮಿಕ ಕಟ್ಟಡಗಳನ್ನು ಮತ್ತು ಧಾರ್ಮಿಕ ಚಿಹ್ನೆಗಳನ್ನು ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವಂತಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರಿತಿ ಗೆಹ್ಲೋಟ್ ಅವರು ತಿಳಿಸಿದರು.

ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆ-2021ರ ಚುನಾವಣಾ ಪ್ರಕ್ರಿಯೆಯು ಏ.08ರಿಂದ ಪ್ರಾರಂಭವಾಗಿದ್ದು, ಶನಿವಾರ ಪಾಲಿಕೆಯ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮತದಾರರನ್ನು ಮತಗಟ್ಟೆಗಳಿಗೆ ವಾಹನದ ಮೂಲಕ ಕರೆತರುವಂತಿಲ್ಲ, ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವ ವಾಹನಗಳಿಗೆ ಕಡ್ಡಾಯವಾಗಿ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಚುನಾವಣಾಧಿಕಾರಗಳ ಪರವಾನಿಗೆಯಿಲ್ಲದೆ ಪೋಸ್ಟರ್‍ಗಳು, ಕರಪತ್ರಗಳು, ಪತ್ರಿಕಾ ಪ್ರಕಟಣೆ, ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸತಕ್ಕದ್ದಲ್ಲ. ಮತದಾರರನ್ನು ಆಕರ್ಷಿಸಲು ಹಣ, ಮದ್ಯ, ಸಾಮಾಗ್ರಿ ಇತ್ಯಾದಿ ವಸ್ತುಗಳನ್ನು ನೀಡುವಂತಿಲ್ಲ ಎಂದು ಸೂಚನೆ ನೀಡಿದ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಕಟ್ಟಡ ಮಾಲಿಕರ ಮತ್ತು ಚುನಾವಣಾಧಿಕಾರಿ ಲಿಖಿತ ಅನುಮತಿ ಇಲ್ಲದೆ ಬಾವುಟ, ಪತಾಕೆ, ಭಿತ್ತಿಪತ್ರ, ಗೋಡೆ ಬರಹಗಳ ಮೂಲಕ ಪ್ರಚುರಪಡಿಸುವಂತಿಲ್ಲ. ಕೋವಿಡ್-19ರ ನಿಯಮಾನುಸಾರ 50 ಜನರಿಗಿಂತ ಮೆಲ್ಪಟ್ಟು ಸಭೆ, ಮೆರವಣಿಗೆ, ಪ್ರಚಾರ ಏರ್ಪಡಿಸುವಂತಿಲ್ಲ ಎಂದು ಹೇಳಿದರು.
ಪ್ರಚಾರದಲ್ಲಿ ತೊಡಗಿದವರಿಗೆ ನೀರು ಹೊರತುಪಡಿಸಿ ಊಟ-ಉಪಚಾರ ಮಾಡತಕ್ಕದಲ್ಲ. ಧ್ವನಿ ವರ್ಧಕ, ಸಭೆ, ಮೆರವಣಿಗೆಗಳಿಗೆ ಪೊಲೀಸ್ ಪ್ರಾಧಿಕಾರ ಮತ್ತು ಚುನಾವಣಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು.

 ಅಧಿಕಾರದಲ್ಲಿರುವ ಪಕ್ಷವು ತನ್ನ ಚುನಾವಣಾ ಪ್ರಚಾರಕ್ಕಾಗಿ ಅಧಿಕಾರವನ್ನು ಉಪಯೋಗಿಸುವಂತಿಲ್ಲ. ಸಚಿವರುಗಳು ತಮ್ಮ ಅಧಿಕೃತ ಭೇಟಿಯನ್ನು ಚುನಾವಣಾ ಕಾರ್ಯಗಳೊಂದಿಗೆ ಸೇರಿಸುವಂತಿಲ್ಲ. ಪ್ರತಿ ಅಭ್ಯರ್ಥಿಯು ಗರಿಷ್ಠ 3 ಲಕ್ಷದವರೆಗೆ ಮಾತ್ರ ಚುನಾವಣಾ ಪ್ರಚಾರಕ್ಕಾಗಿ ಖರ್ಚು ಮಾಡಲು ಅವಕಾಶವಿದ್ದು, ಖರ್ಚಿನ ಬಗ್ಗೆ ಸೂಕ್ತ ದಾಖಲೆಗಳನ್ನು ಚುನಾವಣಾಧಿಕಾರಿಗೆ ಸಲ್ಲಿಸತಕ್ಕದ್ದು. ಪ್ರಚಾರದ ಸಮಯದಲ್ಲಿ ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನಿಡುವಂತಿಲ್ಲ ಮತ್ತು ಸಾರ್ವಜನಿಕರ ಶಾಂತಿಗೆ ಭಂಗ ತರುವಂತಹ ಹೇಳಿಕೆ ಮತ್ತು ಯಾವುದೇ ರೀತಿಯ ಪ್ರದರ್ಶನ ನೀಡುವಂತಿಲ್ಲ ಎಂದು ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಚುನಾವಣಾ ಸಿಬ್ಬಂದಿ ಇದ್ದರು.

Read These Next

ಕೋವಿಡ್ ನಿಯಂತ್ರಣ ಕುರಿತು ತಜ್ಞ ವೈದ್ಯರ ಸಲಹೆ ಕೇಳಿದ ಸಿಎಂ. ಬಳ್ಳಾರಿ ತಜ್ಞ ವೈದ್ಯ ಡಾ.ಶ್ರೀನಿವಾಸಲು ಭಾಗಿ. ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ: ಸಿಎಂ ಬಿಎಸ್‍ವೈ

ಬಳ್ಳಾರಿ : ಕೋವಿಡ್ ಕರ್ತವ್ಯ ನಿರತ ವೈದ್ಯರು ಹಾಗೂ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ...

ರಾಜ್ಯದಲ್ಲಿ ಕೊರೊನಾ, ಲಸಿಕೆ ಪೂರೈಕೆ ಸಂಕಟದ ನಡುವೆ ಡಯಾಲಿಸೀಸ್ ರೋಗಿಗಳಿಗೂ ಆತಂಕ ತಂದ ಸರಕಾರ; ಸೇವೆಯಿಂದ ಹಿಂದೆ ಸರಿಯಲು ಬಿ.ಆರ್.ಶೆಟ್ಟಿ ಫೌಂಡೇಶನ್ ನಿರ್ಧಾರ

ಸರಿಯಾದ ಪೂರ್ವ ತಯಾರಿ, ವ್ಯವಸ್ಥಿತ ಕಾರ್ಯಯೋಜನೆ ಇಲ್ಲದೇ ಕೊರೊನಾ ಸೋಂಕು ನಿಯಂತ್ರಣ, ಲಸಿಕೆ ಪೂರೈಕೆ ಕೆಲಸ ಕಾರ್ಯಗಳ ನಡುವೆ ಬಿದ್ದು ...

ಕುಂದಾಪುರ: ಕುಂದಾಪುರ, ಉಳ್ಳಾಲ, ಕಾಪುವಿನಲ್ಲಿ ಕಡಲ್ಕೊರೆತ, ಮರವಂತೆಯಲ್ಲಿ ತೆಂಗಿನಮರ, ಮೀನುಗಾರಿಕಾ ಶೆಡ್‌ಗಳು ಸಮುದ್ರಪಾಲು, ಸೋಮೇಶ್ವರದಲ್ಲಿ ಆವರಣ ಗೋಡೆ ಕುಸಿತ

ವಾಯುಭಾರ ಕುಸಿತದಿಂದ ಪಶ್ಚಿಮದ ಅರಬಿ ಸಮುದ್ರದಲ್ಲಿ ಉಂಟಾದ ತೌಕ್ತೆ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳಲಾರಂಭಿಸಿದ್ದು

*ಕಲ್ಲಡ್ಕದಲ್ಲಿ ಬಿಜೆಪಿ ಕರ‍್ಯರ‍್ತರಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಅರೋಪಿಗಳ ಮೇಲೆ ಇಲಾಖೆ ಯಾಕಾಗಿ ಕ್ರಮ ಕೈಗೊಳ್ಳತ್ತಿಲ್ಲ : ಎಸ್ ಡಿ ಪಿ ಐ*

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಇಂದು ಲಾಕ್ಡೌನ್ ಅವದಿ ಮುಗಿದ ನಂತರ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸುತ್ತಿದ್ದ ಬಂಟ್ವಾಳ ನಗರ ...

ಉಡುಪಿ: ಕರಾವಳಿಯಲ್ಲಿ ಇಂದು, ನಾಳೆ ರೆಡ್ ಅಲರ್ಟ್, ಅರಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಭೀತಿ

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 'ತೌಕ್ತೆ' ಹೆಸರಿನ ಚಂಡಮಾರುತ ಉಂಟಾಗಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ...

ಕೋವಿಡ್ ನಿಯಂತ್ರಣ ಕುರಿತು ತಜ್ಞ ವೈದ್ಯರ ಸಲಹೆ ಕೇಳಿದ ಸಿಎಂ. ಬಳ್ಳಾರಿ ತಜ್ಞ ವೈದ್ಯ ಡಾ.ಶ್ರೀನಿವಾಸಲು ಭಾಗಿ. ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ: ಸಿಎಂ ಬಿಎಸ್‍ವೈ

ಬಳ್ಳಾರಿ : ಕೋವಿಡ್ ಕರ್ತವ್ಯ ನಿರತ ವೈದ್ಯರು ಹಾಗೂ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ...

ತೌಕ್ತೆ ಚಂಡಮಾರುತ ದ ಎಫೆಕ್ಟ್ ಗೆ ತತ್ತರಿಸಿದ ಉತ್ತರಕನ್ನಡ ಕರಾವಳಿ. ಮನೆಗಳಿಗೆ ನುಗ್ಗಿದ ನೀರು, ಆಸ್ತಿಪಾಸ್ತಿಗೆ ಹಾನಿ.

ಕಾರವಾರ : ತೌಕ್ತೆ ಚಂಡಮಾರುತದ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ತಟ್ಟಿದೆ. ಪರಿಣಾಮವಾಗಿ ಜಿಲ್ಲೆಯ ಕಡಲಂಚಿನಲ್ಲಿ ...

ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಬಳಕೆಯ ಬಗ್ಗೆ ನೌಕಾದಳದ ಅಧಿಕಾರಿಗಳಿಂದ ಮಾಹಿತಿ

ಪ್ರಸಕ್ತವಾಗಿ ಕೋವಿಡ್ ಕೇಂದ್ರಗಳಿಗೆ ಆಮ್ಲಜನಕ ಬೇಡಿಕೆ ಹೆಚ್ಚುತ್ತಿದ್ದು, ಆಮ್ಲಜನಕ ಬಳಕೆಯ ಸಂದರ್ಭದಲ್ಲಿ ಯಾವುದೇ ಅನಾಹುತ ...