ಬೆಂಗಳೂರು: ನಿರ್ಮಾಣ ಹಂತದ ಟ್ಯಾಂಕ್ ಕುಸಿದು ಮೂವರ ಸಾವು: ಅವಶೇಷಗಳಡಿ ಹಲವರು

Source: so news | By MV Bhatkal | Published on 17th June 2019, 5:14 PM | State News | Don't Miss |

ಬೆಂಗಳೂರು: ನಿರ್ಮಾಣ ಹಂತದಲ್ಲಿ ನೀರಿನ ಟ್ಯಾಂಕರ್ ಸೆಂಟ್ರಿಂಗ್ ಕುಸಿದು ಬಿದ್ದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲುಂಬಿನಿ ಗಾರ್ಡನ್ ಬಳಿಯ ಜೋಗಪ್ಪ ಲೇಔಟ್ ನಲ್ಲಿ ನಡೆದಿದೆ,
ಕಾಮಗಾರಿ ವೇಳೆ ನೀರು ಶುದ್ದೀಕರಣ ಘಟಕದ ಟ್ಯಾಂಕರ್ ನ ಸೆಂಟ್ರಿಂಗ್ ಗೆ ಅಳವಡಿಸಿದ್ದ ಕಂಬ ಕುಸಿದು ಅವಘಡ ಸಂಭವಿಸಿದೆ,  110 ಎಂಎಲ್ ಡಿ ಸಾಮರ್ಥ್ಯದ ಟ್ಯಾಂಕ್ ಇದಾಗಿದ್ದು, ಒಳಗಡೆ 8-12 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಶೇಷಗಳಡಿ ಇನ್ನೂ 10 ಮಂದಿ ಸಿಲುಕಿರೋ ಶಂಕೆ ವ್ಯಕ್ತ ವಾಗಿದೆ.
ಘಟನೆ ನಡೆಯುತ್ತಿದಂತೆ ಮಾಹಿತಿ ಪಡೆದ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳೀಯ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ಘಟನೆಯಲ್ಲಿ 20 ಜನರನ್ನು ರಕ್ಷಣೆ ಮಾಡಿದ್ದು, ಇನ್ನು ಹಲವು ಮಂದಿ ಸೆಂಟ್ರಿಂಗ್ ಕೆಳಗೆ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯ ಮುಂದುವರಿದಿದ್ದು, ಈಗಾಗಲೇ ರಕ್ಷಣೆ ಮಾಡಿರುವ ಮಂದಿಯಲ್ಲಿ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಬಹುತೇಕ ಮಂದಿ ಉತ್ತರ ಕರ್ನಾಟಕ ಮೂಲದವರು ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಕೆಲ ಉತ್ತರ ಭಾರತದ ಕಾರ್ಮಿಕರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಕೊಲಂಬಿಯ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಿರ್ಮಾಣ ಹಂತದಲ್ಲಿದ್ದ ವಾಟರ್ ಟ್ಯಾಂಕ್ ಬಿಡಬ್ಲೂಎಸ್‍ಎಸ್‍ಬಿ ಕಚೇರಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ.
 ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡಲು ಬೃಹತ್ 8 ವಾಟರ್ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿತ್ತು. ಸುಮಾರು 30 ಎಕರೆ ಪ್ರದೇಶದಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಎನ್ ಡಿಆರ್ ಎಫ್ ತಂಡ ಕೂಡ ಆಗಮಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...