ಬೆಂಗಳೂರು: ಪ್ರಾಥಮಿಕ ಪ್ರೌಢ ಪದವಿ ಪೂರ್ವ ವಿದ್ಯಾರ್ಥಿಗಳಿಗೆ  ಗಾಂಧೀ ವಿಚಾರ ಸಂಸ್ಕಾರ ಪರೀಕ್ಷೆ-2016-17

Source: varthabhavan | By Arshad Koppa | Published on 4th December 2016, 1:11 PM | State News | Interview |

ಜೀವನದ ಮೌಲ್ಯಗಳು ಕುಸಿಯುತ್ತಿರುವ ಇಂದಿನ ಆಧುನಿಕ ಜಗತ್ತಿನಲ್ಲಿ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ, ಯುವಜನರಲ್ಲಿ ಹಾಗೂ ಸಾರ್ವಜನಿಕರಲ್ಲಿ ಬಿತ್ತುವ ಉದ್ದೇಶದಿಂದ ಗಾಂಧೀ ರಿಸರ್ವ ಫೌಂಡೇಶನ್ ಜಲಗಾಂವ್ ಇವರು “ಗಾಂಧೀ ವಿಚಾರ ಸಂಸ್ಕಾರ ಪರೀಕ್ಷೆ”ಯನ್ನು ದೇಶದಾದ್ಯಂತ ನಡೆಸುತ್ತಿದ್ದಾರೆ, ಕರ್ನಾಟಕದಲ್ಲಿ ಇದರ ಸಂಯೋಜನೆಯನ್ನು ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ , ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಹಾಗೂ ಅಪ್ನಾದೇಶ ಅಸೋಸೊಯೇಶನ್ ಸಂಸ್ಥೆಗಳು ವಹಿಸಿಕೊಂಡಿವೆ.
     
ಹಿರಿಯ ಪ್ರಾಥಮಿಕ ಪ್ರೌಡ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಒಂದು ಹಂತದಲ್ಲಿ ಹಾಗೂ ಡಿಪ್ಲೊಮಾ , ಪದವಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಹಂತದಲ್ಲಿ ಈ ಪರೀಕ್ಷೆಯನ್ನು ನಡೆಸಲಾಗುವುದು.
     
 ಈ ಪರೀಕ್ಷೆಯು ತಾಲ್ಲೂಕು ಜಿಲ್ಲೆ, ರಾಜ್ಯ ಮಟ್ಟದ ಹಂತದಲ್ಲಿ ನಡೆಯಲಿದೆ, ಮೊದಲಿಗೆ ತಾಲೂಕಾ ಹಂತದಲ್ಲಿ ಹಿರಿಯ ಪ್ರಾಥಮಿಕ 5 ನೇ ತರಗತಿಯಿಂದ 7 ನೇ ತರಗತಿಯವರಿಗೆ “ನಮ್ಮ ಗಾಂಧಿ ತಾತ ” ಪುಸ್ತಕವನ್ನು ರೂ.20/-ನೋಂದಣಿ  ಶುಲ್ಕದೊಂದಿಗೆ ನೀಡಲಾಗುವುದು.
8 ನೇ ತರಗತಿಯಿಂದ 12 ನೇ ತರಗತಿಯವರಿಗೆ “ನನ್ನ ಜೀವನ ಕತೆ”ಪುಸ್ತಕವನ್ನು ರೂ.30/- ನೋಂದಣಿ  ಶುಲ್ಕದೊಂದಿಗೆ ನೀಡಲಾಗುವುದು.
       ಈ ಪರೀಕ್ಷೆಗಾಗಿ ನೊಂದಾಯಿಸಿಕೊಳ್ಳಲು  ಶಾಲೆ, ಕಾಲೇಜುಗಳಿಂದ ಮುಖ್ಯೋಪಾದ್ಯಾಯರು, ಪ್ರಾಚಾರ್ಯರ ಮೂಲಕ ಆಸಕ್ತಿ ಇರುವ ವಿದ್ಯಾರ್ಥಿಗಳು  ನೊಂದಣ  ಫಿಯನ್ನು ದಿನಾಂಕ :-10/12/2016 ಶನಿವಾರದೊಳಗೆ ಸಲ್ಲಿಸಿದರೆ ಪರೀಕ್ಷೆಗೆ ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಅವರ ಮಟ್ಟಕ್ಕೆ ಹೊಂದುವ ಗಾಂಧೀಜಿಯವರನ್ನು ಕುರಿತ ಪುಸ್ತಕ ಒದಗಿಸಲಾಗುವುದು. ಪುಸ್ತಕದ ಬೆಲೆಯನ್ನು ಮಾತ್ರ ನೊಂದಣ  ಶುಲ್ಕವಾಗಿ ಸಂಗ್ರಹಿಸಲಾಗುತ್ತದೆ. ಭಟ್ಕಳ ತಾಲೂಕಿನಲ್ಲಿ ಕನಿಷ್ಠ ನೂರು ವಿದ್ಯಾರ್ಥಿಗಳಿಗೆ ಒಂದು ಪರೀಕ್ಷೆ ಕೇಂದ್ರ ತೆರೆಯಲಾಗುವುದು. ವಿದ್ಯಾರ್ಥಿಗಳು ಆ ಪುಸ್ತಕವನ್ನು ಓದಿ ನಿಗದಿಪಡಿಸಿದ 21 ಜನವರಿ 2017 ರಂದು ಪರೀಕ್ಷೆಯನ್ನು ನಡೆಸಲಾಗುವುದು. 
ಪರೀಕ್ಷೆಯಲ್ಲಿ ಪಾಸಾದವರಿಗೆ ಪ್ರಮಾಣ ಪತ್ರ ಜೊತೆಗೆ ಕೇಂದ್ರಕ್ಕೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ , ದ್ವಿತೀಯ , ತೃತೀಯ  ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಹಾಗೂ ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಪರೀಕ್ಷೆಯು ಕನ್ನಡ, ಇಂಗ್ಲೀಷ ಹಾಗೂ ಹಿಂದಿ ಭಾಷೆಗಳಲ್ಲಿ ಬರೆಯಬಹುದು.
ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಅಹ್ವಾನಿಸಿ ಗೌರವಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಹಾಗೂ ಜಿಲ್ಲಾ ಸಂಚಾಲಕರಾದ ಕೆ.ಮರಿಸ್ವಾಮಿ (9448235284) ಇವರನ್ನು ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Read These Next

ಫೆಂಗಲ್ ಪ್ರಭಾವ: ರಾಜ್ಯದ ವಿವಿಧೆಡೆ ವ್ಯಾಪಕ ಮಳೆ; ಇನ್ನೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ

ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಮುಂದಿನ ಎರಡು ದಿನ ಕಾಲ ನಿರಂತರ ಮಳೆ ...

ಸಿಎಂ ಸಿದ್ದರಾಮಯ್ಯರಿಂದ ಪ್ರಧಾನಿ ಮೋದಿ ಭೇಟಿ; ನೀರಾವರಿ ಯೋಜನೆಗಳಿಗೆ ನೆರವು ಕೋರಿ ಮನವಿ; ನಬಾರ್ಡ್ ಸಾಲದ ಪ್ರಮಾಣ ಕಡಿತಕ್ಕೆ ಆಕ್ಷೇಪ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಭದ್ರಾ ಮೇಲ್ದಂಡೆ, ಮಹಾದಾಯಿ, ಮೇಕೆದಾಟು ನೀರಾವರಿ ...

ರಾಜ್ಯದ ಮೂರೂ ಕ್ಷೇತ್ರಗಳು ಕೈವಶ; ಉಪಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಎನ್‌ಡಿಎ

ರಾಜ್ಯದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಗೆ ಕಾರಣವಾಗಿದ್ದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ...

ನ.21 ರಿಂದ ಮುರ್ಡೇಶ್ವರದಲ್ಲಿ ಮತ್ಸ ಮೇಳ; ಪ್ರಥಮ ಬಾರಿಗೆ ಉತ್ತರಕನ್ನಡದಲ್ಲಿ ಆಯೋಜನೆ; ಮೂರು ದಿನಗಳ ಕಾಲ ಮೀನು ಖಾದ್ಯ ಪ್ರಿಯರಿಗೆ ಹಬ್ಬ

ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ನ.21ರಿಂದ ನ.23ರವರೆಗೆ ...

ರಾಜ್ಯ ವಿಧಾನಸಭಾ ಚುನಾವಣೆ: ಮತದಾರರ ಪಟ್ಟಿಯಿಂದ ಶೇ.20ರಷ್ಟು ಮುಸ್ಲಿಮರ ಹೆಸರು ನಾಪತ್ತೆ!

ಅಬುಸಲೇಹ್ ಶರೀಫ್ ಭಾರತದಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ಅಧ್ಯಯನ ನಡೆಸಲು 2005ರಲ್ಲಿ ...

ಕೈಗೆ ರಕ್ತದ ಕಲೆಯೂ ಆಗಿಲ್ಲ, ಕತ್ತಿ ರಕ್ತದಿಂದ ತೊಯ್ದೂ ಇಲ್ಲ… ಈ ಅಪಾಯಕಾರಿ ರಾಜಕಾರಣದ ಕುತಂತ್ರವನ್ನು ಅರಿತು ಮತದಾರರು ಮತ ಚಲಾಯಿಸಬೇಕು..

ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷ ಮುಹಮ್ಮದ್ ಅತ್ಹರುಲ್ಲಾ ಶರೀಫ್ ಅವರೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ...

ವಿವೇಕಾನಂದರ ಹಿಂದೂ ಧರ್ಮಕ್ಕೂ, ಗೋಡ್ಸೆ ಹಿಂದೂ ಧರ್ಮಕ್ಕೂ ಅಜಗಜಾಂತರ ವ್ಯತ್ಯಾಸ -ಡಾ.ರಾಮ್ ಪುನಿಯಾನಿ

ಓದು, ತಲೆ ಬುಡ ಯಾವುದೂ ಇಲ್ಲದೇ ಅಂಗಡಿ ಮುಂಗಟ್ಟಿನಲ್ಲಿ ನಿಂತು ಇತರರನ್ನು ಹೀಯಾಳಿಸಿ ಸುಖ ಪಡುವ, ಕನಸುಗಳಲ್ಲಿಯೇ ತೇಲಾಡಿ ...