ಬೆಂಗಳೂರು: ರೈಲ್ವೆ ಪ್ಲಾಟ್‌ ಫಾರಂ ಟಿಕೆಟ್‌ ದರ 10 ರಿಂದ 50 ರೂ.ಗೆ ಏರಿಕೆ!

Source: The New Indian Express | Published on 12th September 2020, 12:42 AM | State News | Don't Miss |

 

ನವದೆಹಲಿ: ಕೊರೋನಾ ವೈರಸ್ ಹಿನ್ನಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೆಂಗಳೂರು ಸೇರಿದಂತೆ ದೇಶದ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ.
ಕೆಎಸ್ ಆರ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರಿಂದ 50 ರೂಪಾಯಿಗೆ ಹೆಚ್ಚಿಸಲಾಗಿದೆ. ಈ ದರ ಏರಿಕೆ ಇಂದಿನಿಂದ ಜಾರಿಗೆ ಬಂದಿದ್ದು, ಇದು ತಾತ್ಕಾಲಿಕ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ರೈಲ್ವೆ ವಲಯದ ಆರು ವಿಭಾಗಗಳಾದ ಮುಂಬೈ, ವಡೋದರಾ, ಅಹಮದಾಬಾದ್, ರತ್ನಂ, ರಾಜ್ಕೋಟ್, ಭಾವನಗರ ಸೇರಿದಂತೆ ದೇಶದ ಸುಮಾರು 250 ರೈಲ್ವೆ ನಿಲ್ದಾಣಗಳಲ್ಲಿ ಈ ಶುಲ್ಕ ನಾಳೆಯಿಂದ ಅನ್ವಯವಾಗಲಿ.
ಕೇಂದ್ರ ವಲಯದಲ್ಲಿ ಮುಂಬೈ (ಸಿಎಸ್‌ಟಿ), ಭೂಸಾವಲ್, ನಾಗ್ಪುರ, ಸೋಲಾಪುರ, ಪುಣೆ – ಐದು ವಿಭಾಗಗಳನ್ನು ಒಳಗೊಂಡ – ಎಲ್ಲಾ ನಿಲ್ದಾಣಗಳಲ್ಲಿ ಬೆಲೆಗಳನ್ನು ಹೆಚ್ಚಿಸಲಾಗಿದೆ. ದಕ್ಷಿಣ ರೈಲ್ವೆ ವಲಯದಲ್ಲಿ, ಚೆನ್ನೈನಲ್ಲಿ ಮಾತ್ರ ಪ್ಲಾಟ್‌ಫಾರ್ಮ್ ಟಿಕೆಟ್‌ನ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

Read These Next

ನಾಳೆ‌ ಸೋಮವಾರ ಸಾರಿಗೆ ಸಂಚಾರ ಎಂದಿನಂತೆ. ಬಸ್ ಮತ್ತು ಸರ್ಕಾರಿ ಆಸ್ತಿ‌ಪಾಸ್ತಿ ಹಾನಿ ಮಾಡಿದರೆ ಎಚ್ಚರಿಕೆ : ಲಕ್ಷ್ಮಣ ಸವದಿ

ಬೆಂಗಳೂರು:  ನಾಳೆ ಸೋಮವಾರದಂದು ರಾಜ್ಯದಲ್ಲಿ ಸಾರಿಗೆ ಸಂಚಾರ ಎಂದಿನಂತೆ ನಡೆಯಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಾಳೆ‌ ಸೋಮವಾರ ಸಾರಿಗೆ ಸಂಚಾರ ಎಂದಿನಂತೆ. ಬಸ್ ಮತ್ತು ಸರ್ಕಾರಿ ಆಸ್ತಿ‌ಪಾಸ್ತಿ ಹಾನಿ ಮಾಡಿದರೆ ಎಚ್ಚರಿಕೆ : ಲಕ್ಷ್ಮಣ ಸವದಿ

ಬೆಂಗಳೂರು:  ನಾಳೆ ಸೋಮವಾರದಂದು ರಾಜ್ಯದಲ್ಲಿ ಸಾರಿಗೆ ಸಂಚಾರ ಎಂದಿನಂತೆ ನಡೆಯಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ಹುಬ್ಬಳ್ಳಿ; ಮಾಜಿ ಸಿಎಂ ಶೆಟ್ಟರ್ ಫೋಟೊ ರಸ್ತೆಗುಂಡಿಗೆ ಇಟ್ಟು ವಿನೋತನ ರೀತಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಅವರ ಭಾವಚಿತ್ರವನ್ನು ...