ಮುರುಢೇಶ್ವರ ಸಮುದ್ರದಲ್ಲಿ ಓರ್ವ ಪ್ರವಾಸಿ ನೀರು ಪಾಲು; ನಾಲ್ವರ ರಕ್ಷಣೆ

Source: sonews | By Staff Correspondent | Published on 22nd September 2019, 4:11 PM | Coastal News | Don't Miss |

ಭಟ್ಕಳ: ಮುರುಢೇಶ್ವರಕ್ಕೆ ಬಂದೆ ಪ್ರವಾಸಿಗರಲ್ಲಿ ಓರ್ವ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವನಪ್ಪಿದ್ದು ನಾಲ್ವರನ್ನು ರಕ್ಷಿಸಿದ ಘಟನೆ ರವಿವಾರ ಬೆಳಿಗ್ಗೆ ಜರಗಿದೆ. 

ಸಮುದ್ರ ಪಾಲಾದ ವ್ಯಕ್ತಿಯನ್ನು ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ರಾಜೀವ್ ನಟರಾಜ್(27) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ 11 ಜನರ ಪ್ರವಾಸಿಗರ ತಂಡವು ರವಿವಾರ ಬೆಳಿಗ್ಗೆ ಮುರುಢೇಶ್ವರಕ್ಕೆ ತಲುಪಿದ್ದು ಸಮುದ್ರದಲ್ಲಿ ಈಜಲು ಇಳಿದಿದ್ದಾರೆ. ಸಮುದ್ರದಲ್ಲಿ ಭಾರಿ ಅಲೆಗಳೊಂದಿಗೆ ಈಜಾಡುತ್ತ ಓರ್ವ ವ್ಯಕ್ತಿ ಸಾವನ್ನಪ್ಪಿದರೆ ನಾಲ್ವರನ್ನು  ಸ್ಥಳೀಯ ಮೀನುಗಾರರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. 

ಕೂಡಲೇ ಸ್ಥಳೀಯ ಆರ್.ಎನ್.ಎಸ್. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಅವರು ಸುರಕ್ಷಿತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. 

ಇಂದು ರವಿವಾರ ಇದ್ದ ಕಾರಣ ಮುರುಡೇಶ್ವರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಸಮುದ್ರಲ್ಲಿ ಈಜುವುದು ಜೀವಕ್ಕೆ ಅಪಾಯ ಎಂಬ ಎಚ್ಚರಿಕೆಯ ಸೂಚನಾ ಫಲಕ ಇದ್ದರೂ ಅದನ್ನು ಲೆಕ್ಕಿಸದೆ ಪ್ರವಾಸಿಗರು ಸಮುದ್ರದಲ್ಲಿ ಈಜಲು ಇಳಿಯುತ್ತಾರೆ. ಪ್ರತಿ ತಿಂಗಳು ಒಂದು ಜೀವವಾದರೂ ಈ ಸಮುದ್ರ ಬಲಿ ತೆಗೆದುಕೊಳ್ಳುತ್ತದೆ ಎಂದು ಸ್ಥಳಿಯರು ಅಭಿಪ್ರಯಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...