ಬೆಂಗಳೂರು: ರಾಜ್ಯಾದ್ಯಂತ ಮೋಡ ಬಿತ್ತನೆಗೆ ಭರ್ಜರಿ ಸಿದ್ಧತೆ 

Source: varthabhavan | By Arshad Koppa | Published on 21st August 2017, 8:21 AM | State News | Guest Editorial |

ಬೆಂಗಳೂರು, ಆ ೨೦:ರಾಜ್ಯಾದ್ಯಂತ ಮೋಡ ಬಿತ್ತನೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅದಕ್ಕೆ ಪೂರಕವೆಂಬಂತೆ ನಗರದ ಏರ್‌ಪೋರ್ಟ್‌ನಲ್ಲೂ ಮೂರು ವಿಮಾನ(2 ಪ್ಲಸ್‌ 1)ಗಳ ಮೂಲಕ ಮೋಡ ಬಿತ್ತನೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಾಧಿಕಾರ ಅನುಮೋದನೆ ನೀಡಿದೆ.

ರಾಜ್ಯ ಸರ್ಕಾರ ವಿದೇಶದಿಂದ ತರಿಸಿದ ಮೋಡ ಬಿತ್ತನೆ ತಂತ್ರಜ್ಞಾನ ಹೊಂದಿರುವ ವಿಮಾನಗಳು ಈಗಾಗಲೇ ಬೆಂಗಳೂರಿಗೆ ಬಂದಿಳಿದಿವೆ. ಹಾಗಾಗಿ ಈ ಭಾಗದಲ್ಲೂ ಮೋಡ ಬಿತ್ತನೆ ವಿಮಾನಗಳಿಗೆ ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ ಗ್ರೀನ್‌ ಸಿಗ್ನಲ್‌ ನೀಡಿದ್ದು, ಒಂದೆರಡು ದಿನಗಳಲ್ಲೇ ನಗರಕ್ಕೆ ವಿಶೇಷ ತಂತ್ರಜ್ಞಾನ ಒಳಗೊಂಡ ವಿಮಾನಗಳ ಆಗಮನಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

2008ರ ಜುಲೈ 19, 20 ಮತ್ತು 21ರಂದು ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಎಚ್‌.ಕೆ.ಪಾಟೀಲ ಅವರು ಖಾಸಗಿಯಾಗಿ ಹುಲಕೋಟಿಯ ಕೃಷಿ ವಿಜ್ಞಾನ ಕೇಂದ್ರದ ಮೂಲಕ ಮೋಡ ಬಿತ್ತನೆ ಮಾಡಿಸಿದ್ದರು. ಬರಗಾಲದ ಹಿನ್ನೆಲೆಯಲ್ಲಿ ಅದಾದ ಬಳಿಕ ಇದೀಗ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವತಿಯಿಂದ ಮತ್ತೆ ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ ಮೋಡ ಬಿತ್ತನೆ ಕೈಗೊಳ್ಳಲಾಗುತ್ತಿದೆ.

ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ 16 ದಿನಗಳ ಕಾಲ ಮೋಡ ಬಿತ್ತನೆಗೆ ಸಮಯ ನಿಗದಿ ಮಾಡಲಾಗಿದೆ. ಆ.18ರಿಂದ ಮೋಡ ಬಿತ್ತನೆ ಆರಂಭಗೊಳ್ಳಬೇಕಿತ್ತು. ಆದರೆ ಸರ್ಕಾರದಿಂದ ಅಧಿಕೃತ ಆದೇಶ ಇನ್ನೂ ಕೈಸೇರಿಲ್ಲ. ಒಂದೆರಡು ದಿನಗಳಲ್ಲಿ ಸಿಗಬಹುದು. ಈ ನಿಟ್ಟಿನಲ್ಲಿ ಮೂರು ವಿಮಾನ(ಎರಡು ವಿಮಾನಗಳಿಂದ ಮೋಡ ಬಿತ್ತನೆ, ಒಂದು ಹೆಚ್ಚುವರಿ ಕಾಯ್ದಿರಿಸಲಾಗಿದೆ)ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ಶಿವಾನಂದ ಬೇನಾಳ ತಿಳಿಸಿದ್ದಾರೆ.
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...