ಸುಳ್ಳು ಸುದ್ದಿ ಖ್ಯಾತಿಯ ’ಪೋಸ್ಟ್ ಕಾರ್ಡ್’ ಸಂಪಾದಕನ ಬಂಧನ

Source: sonews | By Staff Correspondent | Published on 29th March 2018, 10:07 PM | State News | Don't Miss |

ಬೆಂಗಳೂರು: ಸದಾ ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದರಲ್ಲೇ ಕುಖ್ಯಾತಿ ಗಳಿಸಿರುವ ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ ನ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಪೊಲೀಸರು ಬಂಧಿಸಿದ್ದು, ಈತನ ವಿರುದ್ಧ 153ಎ, 295ಎ ಹಾಗು 120 ಬಿ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ “ಇಂದು ಬೆಳಗ್ಗೆ ಹೇಡಿ ಕಾಂಗ್ರೆಸ್ ಸರಕಾರ ಸಿಸಿಬಿಯನ್ನು ಬಳಸಿಕೊಂಡು ಐಟಿ ಕಾಯ್ದೆಯಡಿ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಬಂಧಿಸಿದೆ" ಎಂದಿದ್ದಾರೆ.

ಮಹೇಶ್ ವಿಕ್ರಂ ಹೆಗ್ಡೆ ಪೋಸ್ಟ್ ಕಾರ್ಡ್ ನ್ಯೂಸ್ ನ ಸ್ಥಾಪಕನಾಗಿದ್ದು, ಈ ವೆಬ್ ಸೈಟ್ ಸಮುದಾಯಗಳ ನಡುವೆ ದ್ವೇಷ ಬಿತ್ತಲು ಸುಳ್ಳು ಸುದ್ದಿಗಳನ್ನು ಪ್ರಕಟಿಸುವುದರಲ್ಲೇ ಕುಖ್ಯಾತಿ ಗಳಿಸಿದೆ. ಅವಹೇಳನಕಾರಿ ಪೋಸ್ಟ್ ಒಂದಕ್ಕೆ ಸಂಬಂಧಿಸಿ 2017ರ ನವೆಂಬರ್ ನಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ನ ಅಡ್ಮಿನ್ ಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ವಿಪರ್ಯಾಸವೆಂದರೆ ಟ್ವಿಟರ್ ನಲ್ಲಿ ಈತನನ್ನು ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿದ್ದಾರೆ.

Read These Next

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ | ಹುಬ್ಬಳ್ಳಿಯಲ್ಲಿ ನಡೆದ ಎರಡನೇ ಬರ್ಬರ ಕೃತ್ಯ

ಹುಬ್ಬಳ್ಳಿಯ ನೇಹಾ ಹಿರೇಮಠ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮೀನಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...