ಬ್ಯಾಂಕ್‍ಗಳು ಕನ್ನಡದಲ್ಲೇ ವ್ಯವಹರಿಸಬೇಕು: ಡಿಸಿ ಸೂಚನೆ

Source: S.O. News Service | Published on 18th July 2019, 8:15 PM | Coastal News | Don't Miss |

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಬ್ಯಾಂಕ್‍ಗಳು ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಕೆ. ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಅವರು, ಬ್ಯಾಂಕ್‍ಗಳೂ ಸೇರಿದಂತೆ ರಾಜ್ಯದಲ್ಲಿ ಅಸ್ತಿತ್ವವಿರುವ ಎಲ್ಲ ಸಾರ್ವಜನಿಕ ಸೇವೆಯ ಸಂಸ್ಥೆಗಳು ಕನ್ನಡದಲ್ಲಿಯೇ ವ್ಯವಹರಿಸಬೇಕೆಂಬ ಆದೇಶವಿದೆ. ಅಂತೆಯೇ ಬ್ಯಾಂಕ್‍ಗಳ ವ್ಯವಹಾರ ಕಡ್ಡಾಯವಾಗಿ ಕನ್ನಡದಲ್ಲೇ ಇರಬೇಕು ಎಂದು ಅವರು ಹೇಳಿದರು.

ಅಂತರ್ಜಾಲ ಬ್ಯಾಂಕ್ ಪದ್ಧತಿ ಅನುಷ್ಠಾನಕ್ಕೆ ಬಂದಮೇಲೆ ಬ್ಯಾಂಕ್ ಸಿಬ್ಬಂದಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಕರ್ನಾಟಕಕ್ಕೆ ವರ್ಗಾವಣೆಗೊಂಡು ಬಂದ ಬ್ಯಾಂಕ್ ಸಿಬ್ಬಂದಿ ಎರಡು ಮೂರು ವರ್ಷಗಳ ನಂತರ ವಾಪಸು ಹೋಗುವ ಇಚ್ಚೆಯಲ್ಲಿ ಕನ್ನಡ ಕಲಿಯುವ ಗೋಜಿಗೆ ಹೋಗುವುದಿಲ್ಲ. ಆದರೆ ಬ್ಯಾಂಕ್‍ನಲ್ಲಿ ವ್ಯವಹರಿಸುವ ಸಾರ್ವಜನಿಕರಿಗೆ ಕಷ್ಟವಾಗುತ್ತದೆ. ಲೀಡ್‍ಬ್ಯಾಂಕ್ ಮ್ಯಾನೇಜರ್ ಮೂಲಕ ಎಲ್ಲ ಬ್ಯಾಂಕ್‍ಗಳಿಗೆ ಈ ಬಗ್ಗೆ ಪತ್ರ ಕಳಿಸಲಾಗಿದೆ. ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದರು.

ಗಡಿ ತಾಲೂಕು ಜೋಯಿಡಾ ಸೇರಿದಂತೆ ಕೆಲವೆಡೆ ರಸ್ತೆ ನಾಮಫಲಕಗಳು ಕನ್ನಡದಲ್ಲಿ ಇಲ್ಲದಿರುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿ ರಸ್ತೆ ನಿರ್ಮಾಣ ಮಾಡುವ ಎಲ್ಲ ಅನುಷ್ಠಾನ ಸಂಸ್ಥೆಗಳಿಗೆ ಕನ್ನಡದಲ್ಲೇ ಸ್ಥಳ, ಮಾರ್ಗಗಳ ನಾಮಫಲಕ ಅಳವಡಿಸಲು ಕ್ರಮ ವಹಿಸುವಂತೆ ಪತ್ರ ಬರೆಯಲಾಗುವುದು ಎಂದರು.

ಅಲ್ಲದೆ, ಜೋಯಿಡಾ ಪ್ರದೇಶದ ಶಾಲೆಗಳಲ್ಲಿ ಮಕ್ಕಳಿಗೆ ಕನ್ನಡ ಬೋಧಿಸಲು ಶಿಕ್ಷಕರಿಲ್ಲ ಎಂಬ ಬಗ್ಗೆ ಶಿರಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ನೇತೃತ್ವದಲ್ಲಿ ಒಂದು ಸಮಿತಿ ಮಾಡಿ ಈ ಬಗ್ಗೆ ಸಮಿತಿಗೆ ವರದಿ ಸಲ್ಲಿಸುವಂತೆ ಕ್ರಮ ವಹಿಸಲು ಸೂಚಿಸಲಾಯಿತು.

ನಗರ ಪ್ರದೇಶಗಳಲ್ಲಿ ಖಾಸಗಿ ಸಂಸ್ಥೆಗಳು, ಹೋಟೆಲ್, ಅಂಗಡಿ ಮುಂಗಟ್ಟುಗಳ ನಾಮಫಲಕ ನಿಯಮಾನುಸಾರ ಕನ್ನಡದಲ್ಲೇ ಇರಬೇಕು. ಆದರೆ ಕೆಲವೆಡೆ ಇಂಗ್ಲಿಷ್ ಭಾಷೆಯಲ್ಲಿ ಇದ್ದು ಕನ್ನಡದಲ್ಲಿ ಚಿಕ್ಕದಾಗಿ ಯಾವುದೋ ಒಂದೊ ಮೂಲೆಯಲ್ಲಿ ಬರೆಯಲಾಗಿದೆ. ಇದನ್ನು ನಿಯಮಾನುಸಾ ಕನ್ನಡದಲ್ಲಿ ನಾಮಫಕಗಳನ್ನು ಅಳವಡಿಸಲು ಕ್ರಮ ವಹಿಸುವಂತೆ ಹಾಗೂ ನಗರ ಪ್ರದೇಶದ ಉದ್ಯಾನಗಳಲ್ಲಿ ಕನ್ನಡದ ಕವಿಗಳ ಪದ್ಯ ಸಾಲುಗಳು, ಕವಿಗಳ ಪರಿಚಯದ ಫಲಕಗಳನ್ನು ಅಳವಡಿಸಲು ಕ್ರಮ ವಹಿಸಲು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಸರ್ಕಾರೇತರ ಸದಸ್ಯರಾದ ಶ್ರೀದೇವಿ ಕೆರೆಮನೆ, ವಿಠಲ್ ಭಂಡಾರಿ, ಟಿ.ಬಿ.ಹರಿಕಾಂತ್ ಮತ್ತಿತರರು ಉಪಸ್ಥಿತರಿದ್ದರು.

Read These Next

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂ. ಕಾಲೇಜಿನ ಸಹಯೋಗದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸಂಪನ್ನ 

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂರ್ವ ಕಾಲೇಜಿನ ಸಹಯೋಗದಲ್ಲಿ ಭಟ್ಕಳ ತಾಲೂಕಿನ ಹೈಸ್ಕೂಲಿನ ಪ್ರೌಢಶಾಲಾ ...

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂ. ಕಾಲೇಜಿನ ಸಹಯೋಗದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಸಂಪನ್ನ 

ಪ್ರಾರ್ಥನಾ ಪ್ರತಿಷ್ಠಾನ ಹಾಗೂ ಆನಂದಾಶ್ರಮ ಪ.ಪೂರ್ವ ಕಾಲೇಜಿನ ಸಹಯೋಗದಲ್ಲಿ ಭಟ್ಕಳ ತಾಲೂಕಿನ ಹೈಸ್ಕೂಲಿನ ಪ್ರೌಢಶಾಲಾ ...

ನದಿಗೆ ಕೊಳಚೆ ನೀರು ಸೇರ್ಪಡೆ: ಮಣ್ಕುಳಿ ಮತ್ತು ಮಾರುತಿ ನಗರ ಅಭಿವೃದ್ಧಿ ಸಮಿತಿಯಿಂದ ಪಂಚಾಯತಗೆ ಮನವಿ ಸಲ್ಲಿಕೆ’

ನದಿಗೆ ಕೊಳಚೆ ನೀರು ಸೇರ್ಪಡೆ: ಮಣ್ಕುಳಿ ಮತ್ತು ಮಾರುತಿ ನಗರ ಅಭಿವೃದ್ಧಿ ಸಮಿತಿಯಿಂದ ಪಂಚಾಯತಗೆ ಮನವಿ ಸಲ್ಲಿಕೆ’