ಮಂಗಳೂರಿನಲ್ಲಿ ಬಾರೀ ಮಳೆ. ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ

Source: SO News | By Laxmi Tanaya | Published on 11th September 2020, 12:06 PM | Coastal News | Don't Miss |

ಮಂಗಳೂರು :  ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರವೂ  ಮಳೆ ಮುಂದುವರಿದಿದೆ.

ಇನ್ನೂ ಮೂರು ದನಗಳ ಕಾಲ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಪ್ರಸ್ತುತ ಹವಾವಾನದ ಸ್ಥಿತಿಗತಿ ಪ್ರಕಾರ ಶನಿವಾರ ಮುಂಜಾನೆವರೆಗೆ ರೆಡ್ ಅಲರ್ಟ್ ಇರಲಿದ್ದು, ಬಳಿಕ ಆರೆಂಜ್ ಅಲರ್ಟ್ ಮುಂದುವರಿಯಲಿದೆ.

‘ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಕರಾವಳಿಯಲ್ಲಿ ಎರಡು ದಿನ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಶನಿವಾರದಿಂದ ಮತ್ತೆ ಸಹಜ ಸ್ಥಿತಿಗೆ ಮರಳಬಹುದು’ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್ ಗಾವಸ್ಕರ್ ತಿಳಿಸಿದ್ದಾರೆ.

ಅಂಗಡಿ-ಮನೆಗಳಿಗೆ ನೀರು: ಮಂಗಳೂರು ನಗರದಲ್ಲಿ ಕೃತಕ ನೆರೆಗೆ ತಗ್ಗು ಪ್ರದೇಶಗಳ ಜನ ಸಂಕಷ್ಟ ಅನುಭವಿಸಿದರು. ಅಳಕೆ, ಕುದ್ರೋಳಿ, ಕೊಟ್ಟಾರ ಚೌಕಿ, ಮಾಲೆಮಾರ್, ಮಣ್ಣಗುಡ್ಡ, ಕೊಡಿಯಾಲ್‌ಬೈಲ್ ಮೊದಲಾದೆಡೆ ರಾಜಕಾಲುವೆ, ತೋಡುಗಳಲ್ಲಿ ಹೂಳು ತುಂಬಿದ್ದರಿಂದ ನೀರು ಹರಿಯಲು ಸಾಧ್ಯವಾಗದೆ ರಸ್ತೆಗಳಲ್ಲಿ ಹರಿದು ಅಂಗಡಿ, ಮನೆಗಳಿಗೂ ನುಗ್ಗಿತು.
ಮಂಗಳೂರು, ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದೆ. ಬೆಳಗ್ಗಿನಿಂದ ಸಾಯಂಕಾಲದವರೆಗಿನ ಅಂಕಿ ಅಂಶದಂತೆ ಮೂಡುಬಿದಿರೆಯಲ್ಲಿ ಅತ್ಯಧಿಕ 69.5 ಮಿ.ಮೀ., ಬೆಳ್ತಂಗಡಿಯ ನಾವೂರಿನಲ್ಲಿ 64.5 ಮಿ.ಮೀ. ಮಳೆ ಸುರಿದಿದೆ. ಗ್ರಾಮಾಂತರ ಭಾಗದಲ್ಲಿ ತೋಡು, ತೊರೆಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕೆಲವೆಡೆ ಪ್ರವಾಹ ಭೀತಿಯೂ ಉಂಟಾಗಿದೆ.

ಮೀನುಗಾರರಿಗೆ, ಸಾರ್ವಜನಿಕರಿಗೆ ಎಚ್ಚರಿಕೆ: ಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ, ಮೀನುಗಾರಿಕೆಗೆ ತೆರಳಬಾರದು. ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು. ಭಾರಿ ಮಳೆ ಸುರಿಯುತ್ತಿರುವುದರಿಂದ ಜನ ಎಚ್ಚರಿಕೆಯಿಂದ ಇರುವಂತೆ ದ.ಕ, ಉಡುಪಿ ಜಿಲ್ಲಾಡಳಿತಗಳು ಸೂಚಿಸಿವೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ತೆರಳಬಾರದು. ಎಲ್ಲ ಪಿಡಿಒ ಮತ್ತು ಗ್ರಾಮಕರಣಿಕರು ತಮ್ಮ ವ್ಯಾಪ್ತಿಯಲ್ಲಿ ಸನ್ನದ್ಧರಿದ್ದು, ವಿಪತ್ತಿನ ಸಂದರ್ಭ ತಕ್ಷಣ ಸ್ಪಂದಿಸಬೇಕು. ಅಪಾಯದ ಸಂದರ್ಭ ಜನ ಜಿಲ್ಲಾ ಕಂಟ್ರೋಲ್ ರೂಂ 1077 ಅಥವಾ ವಾಟ್ಸಾೃಪ್ ಸಂಖ್ಯೆ 9483908000 ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...