ಮೊಬೈಲ್‌ ಬಳಸದಂತೆ ಬುದ್ಧಿ ಹೇಳಿದ್ದಕ್ಕೆ ತಾಯಿಯ ಕೊಲೆ: ಬಿಬಿಎಂ ವಿದ್ಯಾರ್ಥಿ ಬಂಧನ

Source: Prajavani | Published on 1st August 2020, 12:46 AM | State News | Don't Miss |

 


ಮಂಡ್ಯ: ಮೊಬೈಲ್‌ ಫೋನ್‌ ಹೆಚ್ಚು ಬಳಕೆ ಮಾಡದಂತೆ ಬುದ್ಧಿ ಹೇಳಿದ ತಾಯಿಯನ್ನೇ ಪುತ್ರ, ಬಿಬಿಎಂ ವಿದ್ಯಾರ್ಥಿಯೊಬ್ಬ ಚಕ್ಕುಲಿ ಹೊರಳಿನಿಂದ ಹೊಡೆದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾನಗರ ಕೆ.ಆರ್‌.ರಸ್ತೆಯ ಮನೆಯೊಂದರ ಔಟ್‌ಹೌಸ್‌ನಲ್ಲಿ ವಾಸವಿದ್ದ ಲಕ್ಷ್ಮಿ (46) ಕೊಲೆಯಾದ ಮಹಿಳೆ. ಮನು ಶರ್ಮಾ (21) ತಾಯಿಯನ್ನೇ ಕೊಲೆ ಮಾಡಿದ ವಿದ್ಯಾರ್ಥಿ. ಘಟನೆ ಜುಲೈ 29ರಂದು ನಡೆದಿದ್ದು ಜುಲೈ 30ರಂದು ಬೆಳಕಿಗೆ ಬಂದಿದೆ. ಮನೆಯ ಮಾಲೀಕ ರಮೇಶ್‌ ಜುಲೈ 30ರಂದು ನೀಡಿದ್ದ ದೂರಿನನ್ವರ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಆರೋಪಿಯ ಬೆನ್ನತ್ತಿದ ಪೊಲೀಸರು ಮನುಶರ್ಮಾನನ್ನು ಶುಕ್ರವಾರ ಬಂಧಿಸುವಲ್ಲಿ ಯಶಸ್ವಿಯಾದರು.
ತಾಯಿಯು ಮೊಬೈಲ್‌ ಬಳಸದಂತೆ ನಿರ್ಬಂಧ ವಿಧಿಸಿದ್ದರು. ಮನೆಯಿಂದ ಹೊರಗೆ ಹೋಗದಂತೆ ಬುದ್ಧಿ ಹೇಳುತ್ತಿದ್ದರು. ಇದರಿಂದ ಕೋಪಗೊಂಡು ಚಕ್ಕಲಿ ಹೊರಳಿನಿಂದ ತಲೆಗೆ ಹೊಡೆದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ಧಾನೆ ಎಂದು ಪೊಲೀಸರು ತಿಳಿಸಿದರು. ಪ್ರಕರಣ ಪಶ್ಚಿಮ ಠಾಣೆಯಲ್ಲಿ ದಾಖಲಾಗಿದೆ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...