ಕೃಷಿಗೆ ಸಂಬಂಧಿಸಿದ ಭವಿಷ್ಯದ ಸವಾಲುಗಳಿಗೆ ಸಿದ್ದರಾಗಿ.ಸೇವಾ ಸುಧಾರಣೆಗಾಗಿ ಬದ್ದತೆ ಇರಲಿ: ನೂತನ ಪದವಿಧರರಿಗೆ ನೀತಿ ಪಾಠ ಹೇಳಿದ ಡಾ.ಹಿಮಾಂಶು ಪಾಠಕ್

Source: SO News | By Laxmi Tanaya | Published on 12th June 2023, 9:56 PM | State News | Don't Miss |

ಧಾರವಾಡ :  ಕೃಷಿ ಅಭಿವೃದ್ಧಿ ಆಗದೇ ಭಾರತ ಅಭಿವೃದ್ದಿ ದೇಶವಾಗದು, ನೈಸರ್ಗಿಕ ಬದಲಾವಣೆಗಳಿಂದಾಗಿ ಭವಿಷ್ಯದಲ್ಲಿ ಕೃಷಿಗೆ ಅನೇಕ ಸವಾಲುಗಳು ಎದುರಾಗುತ್ತವೆ. ಅವುಗಳನ್ನು ಪರಿಹರಿಸಿ, ಅಭಿವೃದ್ಧಿ ಸಾಧಿಸಲು ನೂತನ ಪದವಿಧರರು ಬದ್ದತೆ ತೋರಬೇಕು ಎಂದು ಭಾರತ ಸರಕಾರದ ಕೃಷಿ ಸಂಶೋಧನೆ ಹಾಗೂ ಶಿಕ್ಷಣ ವಿಭಾಗದ ಕಾರ್ಯದರ್ಶಿ ಹಾಗೂ ಭಾರತೀಯ ಕೃಷಿ ಅನುಸಂದಾನ ಪರಿಷತ್ತಿನ ಮಹಾನಿರ್ದೇಶಕ ಡಾ. ಹಿಮಾಂಶು ಪಾಠಕ್ ಹೇಳಿದರು.

ಅವರು ಸೋಮವಾರ ಬೆಳಿಗ್ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯವು ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ್ದ 36 ನೇ  ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತಮ್ಮ ಘಟಿಕೋತ್ಸವ ಭಾಷಣದಲ್ಲಿ ಈ ರೀತಿ ಹೇಳಿದರು.

ಸಮಾಜದ ಸೇವೆ ಮತ್ತು ಪ್ರಚಲಿತದಲ್ಲಿನ ಪದ್ದತಿಗಳನ್ನು ಸುಧಾರಿಸಿ, ಕೃಷಿ ಲಾಭದಾಯಕವಾಗಿ ಮಾಡುವುದು ಕೃಷಿ ಶಿಕ್ಷಣದ ಉದ್ದೇಶವಾಗಿದೆ. ನೂತನ ತಂತ್ರಜ್ಞಾನ ಬಳಕೆ ಹೆಚ್ಚಬೇಕು. ಪ್ರಾಯೋಗಿಕ ಪಾಠದ ಶಿಕ್ಷಣ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಅವರು ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ಸಾಧನೆ ಹಾಗೂ ಸಂಶೋಧನೆಗಳ ಬಗ್ಗೆ ಮಾತನಾಡಿ, ತಮ್ಮ ಮೆಚ್ವುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಪದವಿ ಪಡೆದ ನಂತರ ಕಲಿತ ಶಿಕ್ಷಣ, ಪಡೆದ ಜ್ಞಾನವನ್ನು ಬಳಸಿಕೊಂಡು ತಾವೂ ಬೆಳೆಯಬೇಕು ಮತ್ತು ರಾಷ್ಟ್ರವನ್ನು ಬೆಳೆಸಬೇಕೆಂದು ಡಾ.ಹಿಮಾಶು ಪಾಠಕ್ ಸಲಹೆ ನೀಡಿದರು. 

ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲ ಹಾಗೂ ಕೃಷಿ ವಿಶ್ವವಿದ್ಯಾಲಯದ ಕುಲಾಧಿಪತಿಯಾದ ಗೌರವಾನ್ವಿತ ಥಾವರ್‌ಚಂದ್ ಗೆಹ್ಲೋಟ್  ಅವರು ಮಾತನಾಡಿ, ಕೃಷಿ ಪದವಿಧರರು ಆತ್ಮನಿರ್ಭರ ಭಾರತಕ್ಕೆ ಕೈ ಜೋಡಿಸಬೇಕು. ಕಲಿತ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳಬೇಕು ಎಂದು ಅವರು ಹೇಳಿದರು.

ಭಾರತ ಕೃಷಿ ಪ್ರಧಾನ ರಾಷ್ಟ್ರ. ದೇಶದ ಅರ್ಥವ್ಯವಸ್ಥೆಗೆ ಕೃಷಿ ಮುಖ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೃಷಿ, ಕೃಷಿಕರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ರಾಜ್ಯಪಾಲರು ತಿಳಿಸಿದರು.

ವಿಶ್ವಶಾಂತಿ ಹಾಗೂ ವಿಶ್ವಕಲ್ಯಾಣಕ್ಕಾಗಿ ಭಾರತ ಮುಂದಾಳತ್ವ ವಹಿಸುತ್ತಿದೆ. ಯುವ ಪಿಳಿಗೆಯ ಜನರು, ಯುವ ನಾಯಕರು ಕೃಷಿ ದೃಷ್ಟಿಯಿಂದ ಹೆಚ್ಚು  ಆಧ್ಯತೆಯಿಂದ ಶ್ರಮಿಸಬೇಕೆಂದು ಅವರು ಹೇಳಿದರು.

ಕೃಷಿ ಸಚಿವ ಮತ್ತು ಕೃಷಿ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಎನ್. ಚೆಲುವರಾಯಸ್ವಾಮಿ ಅವರು ಮಾತನಾಡಿ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಶಿಕ್ಷಣ, ಸಂಶೋಧನೆ ಮತ್ತು ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಕೀರ್ತಿ, ಯಶಸ್ಸು ಗಳಿಸಿದೆ. ಕೃಷಿ ಇಲಾಖೆ, ಕೃಷಿವಿವಿ ಮತ್ತು ಸಂಶೋಧಕರು ರೈತರೊಂದಿಗೆ ನಿಲ್ಲಬೇಕು. ಹೊಸ ತಳಿಗಳನ್ನು ಸಂಶೋಧಿಸಿ, ಕೃಷಿ ಲಾಭದಾಯವಾಗುವಂತೆ ಮಾಡಬೇಕು ಎಂದು ಅವರು ಹೇಳಿದರು.

ಪದವಿ ಪಡೆದು ವಿವಿಯಿಂದ ಹೊರ ಬರುತ್ತಿರುವ ಯುವ ಕೃಷಿಮಿತ್ರರು, ವಿಜ್ಞಾನಿಗಳು ತಾವು ಕಲಿಕೆಯಲ್ಲಿ ಪಡೆದ ಜ್ಞಾನವನ್ನು ರೈತರ ಜಮೀನುಗಳಲ್ಲಿ, ಕ್ಷೇತ್ರಮಟ್ಟದಲ್ಲಿ ಬಳಸಿ, ಬದಲಾವಣೆ ತರಬೇಕು ಎಂದು ಕೃಷಿ ಸಚಿವರು ತಿಳಿಸಿದರು.

ಕೃಷಿ ಆಧುನಿಕರಣಗೊಳಿಸಲು ಮತ್ತು ಹೆಚ್ಚು ಲಾಭದಾಯಕಗೊಳಿಸಲು ರಾಜ್ಯ ಮತ್ತು ಕೇಂದ್ರ ಸರಕಾರಗಳು ಅನೇಕ ಯೋಜನೆಗಳ ಮೂಲಕ ಪ್ರೋತ್ಸಾಹ ನೀಡುತ್ತಿವೆ. ರೈತರನ್ನು ಸಶಕ್ತರನ್ನಾಗಿ, ಸುಖಿಗಳನ್ನಾಗಿ ಮಾಡಲು ಪ್ರಾಮುಖ್ಯತೆ ನೀಡಬೇಕೆಂದು ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದರು.

ಕೃವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯರು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಪಿ.ಎಲ್.ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಗೌರವ ಡಾಕ್ಟರೇಟ್ ಪ್ರಧಾನ: ಕೃಷಿ ವಿಶ್ವವಿದ್ಯಾಲಯದ 36 ನೇ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದ ಪದ್ಮಶ್ರೀ ತುಳಸಿಗೌಡ ಮತ್ತು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ವಿಶ್ವಶಾಂತಿ ಕೃಷಿ ಸಂಶೋಧನಾ ಕೇಂದ್ರದ ಸಂಸ್ಥಾಪಕ ಪದ್ಮಶ್ರೀ ಅಬ್ದುಲಖಾದರ ಇಮಾಮ್‍ಸಾಬ ನಡಕಟ್ಟಿನ ಅವರಿಗೆ  ರಾಜ್ಯಪಾಲರು ಮತ್ತು ಕೃಷಿವಿವಿಯ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅವರು ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.

ಕೃಷಿ ವಿಶ್ವವಿದ್ಯಾಲಯದ ವಿವಿಧ ನಿಖಾಯಗಳ ಡೀನ್‍ರು ವಿವಿಧ ವಿಷಯಗಳ ಪಿಎಚ್‍ಡಿ, ಸ್ನಾತಕ, ಸ್ನಾತಕೋತ್ತರ ಪದವಿದರರ ಹೆಸರುಗಳನ್ನು ಸಮಾರಂಭದಲ್ಲಿ ಪ್ರಸ್ತುತಪಡಿಸಿದರು.

ಪಿಎಚ್‍ಡಿ, ಸ್ನಾತಕ, ಸ್ನಾತಕೋತ್ತರ  ಪದವಿ ಪ್ರಧಾನ: ಕೃವಿವಿ 36 ನೇ ಘಟಿಕೋತ್ಸವದಲ್ಲಿ 71 ಪಿಎಚ್ ಡಿ, 269 ಸ್ನಾತಕೋತ್ತರ, 626 ಸ್ನಾತಕ ಪದವಿ ಒಳಗೊಂಡಂತೆ ಒಟ್ಟು 966 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

ಘಟಿಕೋತ್ಸವದಲ್ಲಿ 404 ಕೃಷಿ, 66 ಕೃಷಿ ಮಾರುಕಟ್ಟೆ ಮತ್ತು ಸಹಕಾರ, 63 ಅರಣ್ಯ, 65 ಸಮುದಾಯ ವಿಜ್ಞಾನ, 28 ಬಿ.ಟೆಕ್ ಹೀಗೆ ಒಟ್ಟು 626 ಸ್ನಾತಕ ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.

ಚಿನ್ನದ ಪದಕ ವಿಜೇತ ಸ್ನಾತಕ ಪದವಿಧರರು: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಷಯದಲ್ಲಿ ಅಕ್ಷತಾ ಕೆ.ವಿ, ಅವರು ಹೆಚ್ಚು ಚಿನ್ನದ ಪದಕ ಪಡೆದು ಈ ವರ್ಷದ ಕೃವಿವಿ ಚಿನ್ನದ ಹುಡುಗಿ ಆದರು. ತೋಟಗಾರಿಕೆ ವಿಷಯದಲ್ಲಿ ರೇಣುಕಾ ಎ.ಶಹಪುರ, ಕೃಷಿ ಮಾರುಕಟ್ಟೆ ಮತ್ತು ಸಹಕಾರ ವಿಷಯದಲ್ಲಿ ವೀಣಾ ರವಿ ನಾಯ್ಕ ಅವರು ಚಿನ್ನದ ಪದಕ ಪಡೆದರು.

ಕೃಷಿ ವಿಶ್ವವಿದ್ಯಾಲಯ ಧಾರವಾಡ ಆವರಣದಲ್ಲಿನ ಕೃಷಿ ಹಾಗೂ ಕೃಷಿ ಮಾರುಕಟ್ಟೆ ಮತ್ತು ಸಹಕಾರ ಸ್ನಾತಕ ಪದವಿಗಳಲ್ಲಿ ಉತ್ತಮ ಕ್ರೀಡಾಪಟುವಿಗೆ ನೀಡುವ ನಗದು ಪುರಸ್ಕಾರವನ್ನು ಲೋಚನ ಬೊಪಣ್ಣ ಎಂ.ಎಸ್. ಮತ್ತು ವಿಜಯಪುರ ಕೃಷಿ ಮಹಾವಿದ್ಯಾಲಯದ ಆಶಾ ಬಿ.ಕಾಡಪ್ಪಗೋಳ, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದ ನಿಶ್ಚಿತಾ ಜಿ.ಪಿ., ಶಿರಸಿ ಅರಣ್ಯ ಮಹಾವಿದ್ಯಾಲಯದ ರಘು ಅಂಗಡಿ, ಧಾರವಾಡ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಎಂ.ಎಸ್ಸಿ ಮತ್ತು ಬಿ.ಟೆಕ್ ದಲ್ಲಿ ಅತಿ ಹೆಚ್ವು ಅಂಕಗಳಿಸಿದ ಕೀರ್ತಿ ಶಿರಿಯಣ್ಣವರ ಚಿನ್ನದ ಪದಕ ಸ್ವೀಕರಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...