ಹೊಸದಿಲ್ಲಿ: ಭಿಕ್ಷಾಟನೆ ನಿಷೇಧ ಸಾಧ್ಯವಿಲ್ಲ: ಸುಪ್ರೀಂ

Source: VB | Published on 28th July 2021, 1:18 PM | National News |

ಹೊಸದಿಲ್ಲಿ: ಭಿಕ್ಷಾಟನೆಯು ಸಾಮಾಜಿಕ ಹಾಗೂ ಆರ್ಥಿಕ ಸಮಸ್ಯೆಯಾಗಿದೆ ಯಾದರೂ ಅದನ್ನು ನಿಷೇಧಿಸಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ಮಂಗಳವಾರ ಅಭಿಪ್ರಾಯಿಸಿದೆ. ಶಿಕ್ಷಣ ಹಾಗೂ ಉದ್ಯೋಗದ ಕೊರತೆಯಿಂದಾಗಿ ಅನಿವಾರ್ಯವಾಗಿ ಜನರು ಭಿಕ್ಷೆ ಬೇಡುತ್ತಿದ್ದಾರೆ ಎಂದು ಅದು ಹೇಳಿದೆ.

ಕೋವಿಡ್-19 ಹಾವಳಿ ಹಿನ್ನೆಲೆಯಲ್ಲಿ ನಿರ್ವಸಿತರು, ಭಿಕ್ಷುಕರು ಹಾಗೂ ಅಲೆಮಾರಿಗಳನ್ನು ಲಸಿಕೀಕರಣಗೊಳಿಸಬೇಕು ಹಾಗೂ ಅವರನ್ನು ಸಾರ್ವಜನಿಕ ಸ್ಥಳಗಳಿಂದ ತೆರವುಗೊಳಿಸಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯ ಆಲಿಕೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಹಾಗೂ ಎಂ.ಆರ್.ಶಾ ಅವರಿದ್ದ ನ್ಯಾಯಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

“ತಮ್ಮ ಪ್ರಾಥಮಿಕ ಜೀವನನಿರ್ವಹಣೆಗಾಗಿ ಈ ಜನರು ಭಿಕ್ಷೆ ಬೇಡಲು ಬೀದಿಗಿಳಿಯುತ್ತಾರೆ. ಇದೊಂದು ಸಾಮಾಜಿಕ-ಆರ್ಥಿಕ ಸಮಸ್ಯೆಯಾಗಿದೆ. ಹೀಗಾಗಿ ಭಿಕ್ಷುಕರನ್ನು ಸಾರ್ವಜನಿಕ ಸ್ಥಳಗಳಿಂದ ತೆರವುಗೊಳಿಸಲು ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲವೆಂದು ನ್ಯಾಯಪೀಠ ತಿಳಿಸಿತು.

ಕೋವಿಡ್-19 ಸಾಂಕ್ರಾಮಿಕ ದೇಶಾದ್ಯಂತ ಹರಡುವುದನ್ನು ತಪ್ಪಿಸಲು ಬೀದಿಗಳು, ಟ್ರಾಫಿಕ್ ಜಂಕ್ಷನ್‌ಗಳು ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಕರು, ನಿರ್ವಸಿತರು ಹಾಗೂ ಅಲೆಮಾರಿಗಳು ಭಿಕ್ಷೆ ಬೇಡುವುದನ್ನು ನಿಷೇಧಿಸಬೇಕೆಂದು ಕೋರಿ ನ್ಯಾಯವಾದಿ ಕುಶ್ ಕಾಲ್ರಾ ಅವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು.

ಭಿಕ್ಷಾಟನೆಯಂತಹ ಮಾನವೀಯ ಸಮಸ್ಯೆಯನ್ನು ನಿಭಾಯಿಸಲು ಕೈಗೊಳ್ಳಲಾದ ಕ್ರಮಗಳ ಬಗ್ಗೆ ತನಗೆ ಎರಡು ವಾರಗಳೊಳಗೆ ಮಾಹಿತಿ ನೀಡುವಂತೆ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಹಾಗೂ ದಿಲ್ಲಿ ಸರಕಾರಕ್ಕೆ ಸೂಚಿಸಿತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...