ಭಿಕ್ಷಾಟನೆ CCB ಕಾರ್ಯಾಚರಣೆ; 47 ಮಕ್ಕಳ ರಕ್ಷಣೆ

Source: sonews | By MV Bhatkal | Published on 14th April 2024, 11:39 PM | State News |

ಬೆಂಗಳೂರ: ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 47 ಮಕ್ಕಳನ್ನು ರಕ್ಷಿಸಿ, 37 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಸಿಬಿಯ ಮಹಿಳಾ ಸಂರಕ್ಷಣಾ ದಳ, ವಿಶೇಷ ವಿಚಾರಣ ದಳ, ಪುಲಕೇಶಿ ನಗರ ಉಪ ವಿಭಾಗದ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ. ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಜೀಸರ್ ಇಸ್ಮಾಯಿಲ್ ಸೈಟ್ ಮಜೀದ್ ಬಳಿ ಸೇರಿದಂತೆ ಸುತ್ತಮತ್ತಲ ಸ್ಥಳಗಳ ಬೀದಿ ಬದಿಯಲ್ಲಿ ಈ ಮಕ್ಕಳು ಭಿಕ್ಷಾಟಣೆಯಲ್ಲಿ ತೊಡಗಿದ್ದರು. ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸಿದ್ದ 37 ಮಹಿಳೆಯರನ್ನು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆ.

Read These Next

ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣಗಳು ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ; ಪರಮೇಶ್ವ‌ರ್

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ...

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ | ಹುಬ್ಬಳ್ಳಿಯಲ್ಲಿ ನಡೆದ ಎರಡನೇ ಬರ್ಬರ ಕೃತ್ಯ

ಹುಬ್ಬಳ್ಳಿಯ ನೇಹಾ ಹಿರೇಮಠ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮೀನಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ...