ಬೆಳಗಾವಿ ಇಂಟರನೆಟ್ ಆಫ್ ತಿಂಗ್ಸ್ ಮತ್ತು ರೊಬೊಟಿಕ್ಸ್ ಕಾರ್ಯಾಗಾರ

Source: S.O. News Service | Published on 21st September 2019, 9:47 PM | State News | Don't Miss |

ಬೆಳಗಾವಿ:ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಮೌಲ್ಯಮಾಪನ ಘಟಕದ ನೇತೃತ್ವದಲ್ಲಿ, ಭೌತಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕಯಂತ್ರ ವಿಜ್ಞಾನ ಹಾಗೂ ಸತ್ಯಕಿ ಸಲ್ಯುಷನ್ಸ್ ಪ್ರೈ.ಲಿ.ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಇಂಟರನೆಟ್ ಆಫ್ ತಿಂಗ್ಸ್ ಮತ್ತು ರೊಬೊಟಿಕ್ಸ್” ವಿಷಯದ ಕುರಿತು ಒಂದು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಸರ್.ಸಿ.ವ್ಹಿ. ರಾಮನ್ ಸಭಾಂಗಣದಲ್ಲಿ ಜರುಗಿತು.
ಸಮಾರಂಭದ ಮುಖ್ಯ ಅತಿಥಿಗಳು ಹಾಗೂ ಸತ್ಯಕಿ ಸಲ್ಯುಷನ್ಸ್ ಪ್ರೈ.ಲಿ.ನ ತಾಂತ್ರಿಕ ನಿರ್ದೇಶಕರಾದ  ಶ್ರೀ. ಕೆ.ಎಸ್. ಆನಂದಕುಮಾರ ಅವರು ಮಾತನಾಡುತ್ತಾ, ಆಧುನಿಕ ಸಮಾಜದಲ್ಲಿ ಅವಿಷ್ಕಾರಗಳ ಅಗತ್ಯತೆಯನ್ನು ಮತ್ತು ಯಂತ್ರೋಪಕರಣಗಳು ಹಾಗೂ ಅಂತರ್ಜಾಲ ಕ್ಷೇತ್ರವು ಕಾಲ ಬದಲಾದಂತೆ ನವೀಕರಣಗೊಳ್ಳುವ ಅವಶ್ಯಕತೆಯನ್ನು ಕುರಿತು ವಿವರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ವ್ಹಿ.ಡಿ. ಯಳಮಲಿ ಅವರು ಮಾತನಾಡುತ್ತಾ, ಆಧುನಿಕ ಜಗತ್ತಿನಲ್ಲಿ ಅಂತರ್ಜಾಲವು ಮೂಲಭೂತ ಅವಶ್ಯಕತೆಯಾಗಿದೆ ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಕೌಶಲ್ಯಾಭಿವೃದ್ಧಿ ಮಾಡಿಕೊಳ್ಳಬೇಕು.  ನಮ್ಮ ಮಹಾವಿದ್ಯಾಲಯ ಆವರಣದ ತಾಪಮಾನದ ಕುರಿತು ಆ್ಯಪ್‍ಗಳನ್ನು ಅಭಿವೃದ್ಧಿಪಡಿಸಬೇಕು.  ಅತ್ಯುತ್ತಮವಾದ ಆ್ಯಪ್‍ಗಳಿಗೆ ಬಹುಮಾನ ನೀಡಲಾಗುವುದೆಂದು ಘೋಷಿಸಿದರು.
ಪ್ರಾರಂಭದಲ್ಲಿ ಕುಮಾರಿ. ದರ್ಶನಾ ಬೆನಕೆ ಅವರು ಪ್ರಾರ್ಥನಾ ಗೀತೆ ಹಾಡಿದರು.  ಪ್ರೊ. ಆರ್.ಆರ್. ವಡಗಾವಿ ಅವರು ಸರ್ವರನ್ನು ಸ್ವಾಗತಿಸಿದರು.  ಡಾ. ವಿನಯಕುಮಾರ ಎಂ. ಅವರು ವಂದಿಸಿದರು.  ಕುಮಾರ ವಿವೇಕ ಮತ್ತು ಕುಮಾರಿ. ಅಪೂರ್ವ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಸುಮಾರು 80 ವಿದ್ಯಾರ್ಥಿಗಳು ಭಾಗವಹಿಸಿದ್ದು ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...