ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣ; ಬನ್ನಂಜೆ ರಾಜಾ ಸಹಿತ 9 ಮಂದಿ ದೋಷಿ ಎಂದ ಕೋರ್ಟ್; ಎ.4ರಂದು ಶಿಕ್ಷೆ ಪ್ರಮಾಣ ಪ್ರಕಟ

Source: Vb | By I.G. Bhatkali | Published on 31st March 2022, 6:45 AM | Coastal News | State News |

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಿಜೆಪಿ ನಾಯಕ ಹಾಗೂ ಉದ್ಯಮಿ ಆರ್.ಎನ್. ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋಕಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದ್ದು, ಭೂಗತ ಪಾತಕಿ ಬನ್ನಂಜೆ ರಾಜಾ ಸಹಿತ 9 ಮಂದಿ ದೋಷಿಗಳು ಎಂದು ಘೋಷಿಸಿದೆ. ಎಪ್ರಿಲ್ 4ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.

ಆರೋಪಿ ಬನ್ನಂಜೆ ರಾಜಾ ಪ್ರಸಕ್ತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ. ಆತನ ಮೇಲೆ ಒಟ್ಟು 48 ಉಡುಪಿ, ಮಂಗಳೂರು, ಉತ್ತರ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾತ್ರವಲ್ಲದೆ ಕೇರಳದಲ್ಲಿಯೂ ಹಫ್ತಾ ವಸೂಲಿ, ಸುಲಿಗೆ, ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣಗಳಿವೆ. ಆರ್.ಎನ್.ನಾಯಕ್ ಅವರನ್ನು 2013ರಲ್ಲಿ ಸುಪಾರಿ ನೀಡಿ ಕೊಲೆ ಮಾಡಿಸಿದ ಪ್ರಕರಣ ಈ ಪೈಕಿ ಅತ್ಯಂತ ಪ್ರಮುಖವಾಗಿದೆ.

ರಾಜಾನನ್ನು ಮೊರೊಕ್ಕೊದಲ್ಲಿ 2015 ಫೆಬ್ರವರಿ 12ರಂದು ನಕಲಿ ಪಾಸ್‌ಪೋರ್ಟ್ ಹೊಂದಿದ ಆರೋಪದಡಿ ಬಂಧಿಸಿದ್ದು, ಬಳಿಕ ಗಡಿಪಾರು ಮಾಡಲಾಗಿ ತ್ತು. ಅದೇ ವರ್ಷ ಆಗಸ್ಟ್ 14ರಂದು ಭಾರತಕ್ಕೆ ಕರೆತರಲಾಗಿತ್ತು. ಬೆಳಗಾವಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಚಾರಣೆಗಾಗಿ ಬೆಂಗಳೂರು, ಉಡುಪಿ ಹಾಗೂ ಮಂಗಳೂರಿಗೆ ಕರೆತರಲಾಗಿತ್ತು.

ಉದ್ಯಮಿಗಳನ್ನು ಬೆದರಿಸಿ ಹಫ್ತಾ ವಸೂಲಿ ದಂಧೆಯಲ್ಲಿ ತೊಡಗಿದ್ದ ಬನ್ನಂಜೆ ರಾಜಾ ಆರ್. ಎನ್. ನಾಯಕ್ ಅವರಿಗೆ 3 ಕೋಟಿ ರೂ. ಹಣ್ಣಾ ಹಣ ನೀಡುವಂತೆ ಬೆದರಿಸಿದ್ದ. ಹಣ ನೀಡಲು ನಿರಾಕರಿಸಿದ್ದರಿಂದ 2013 ಡಿಸೆಂಬರ್ 21ರಂದು ಅವರನ್ನು ಕೊಲೆ ಮಾಡಿಸಿದ್ದ ಆರೋಪ ಎದುರಿಸುತ್ತಿದ್ದನು.

ಈ ಕೊಲೆ ಪ್ರಕರಣದಲ್ಲಿ ಒಟ್ಟು 16 ಮಂದಿ ಆರೋಪಿಗಳನ್ನು ಗುರುತಿಸಲಾಗಿದ್ದು, ಬನ್ನಂಜೆ ರಾಜಾ ಸೇರಿದಂತೆ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿ ದ್ದು, ಸದ್ಯ ಬನ್ನಂಜೆ ರಾಜಾ ಜೈಲಿನಲ್ಲಿದ್ದಾನೆ. ಈ ಪ್ರಕರಣದಲ್ಲಿ ಬನ್ನಂಜೆ ರಾಜಾ 9ನೆ ಆರೋಪಿಯಾಗಿ ದ್ದ ಹಣ ನೀಡಿ ಕೊಲೆ ಮಾಡಿಸಿದ ಆರೋಪ ಈತನ ಮೇಲೆ ಇತ್ತು, 500 ಪುಟಗಳ ಚಾರ್ಜ್ ಶೀಟನ್ನು ಪೊಲೀಸರು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

2000 ಇಸವಿಯಲ್ಲಿ ರಚಿಸಿದ್ದ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ(ಕೋಕಾ)ಯನ್ನು 13 ವರ್ಷಗಳ ಬಳಿಕ ಮೊದಲ ಬಾರಿಗೆ ಈ ಪ್ರಕರಣದಲ್ಲಿ ಕರ್ನಾಟಕದ ಪಶ್ಚಿಮ ವಲಯದ ಪೊಲೀಸರು ಅನ್ವಯಿಸಿ ಪ್ರಕರಣ ದಾಖಲಿಸಿದ್ದರು. ಕೋಕಾ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಲಯಗಳು ಬೆಳಗಾವಿ, ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾತ್ರ ಇದ್ದು, ಬನ್ನಂಜೆ ರಾಜಾನ ಮೇಲೆ ಪೊಲೀಸರು ಆರ್. ಎನ್. ನಾಯಕ್ ಹತ್ಯೆ ಹಿನ್ನೆಲೆಯಲ್ಲಿ ಕೋಕಾ ಪ್ರಕರಣ ದಾಖಲು ಮಾಡಿರುವ ಜಿಲ್ಲೆ ಬೆಳಗಾವಿ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ರಾಜಾನನ್ನು ಬೆಳಗಾವಿ ನ್ಯಾಯಾಲಯಕ್ಕೆ 2015ಆ.14ರಂದು ಹಾಜರುಪಡಿಸಲಾಗಿತ್ತು.

Read These Next

ಭಟ್ಕಳದ ಅಂಜುಮನ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ; ಸಂವಿಧಾನದತ್ತವಾದ ಕರ್ತವ್ಯಗಳನ್ನು ನಿರ್ವಹಿಸುತ್ತ ಹಕ್ಕುಗಳನ್ನು ಪಡೆಯಬೇಕು

ಅಂಬೇಡ್ಕರ್ ಮೊದಲಾದ ಅನೇಕ ತಜ್ಞರು, ನಾನಾ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ರಚಿಸಿದ ನಮ್ಮ ಸಂವಿಧಾನ ಜಗತ್ತಿನಲ್ಲಿಯೇ ಅತ್ಯಂತ ...

ಹೆದ್ದಾರಿ ಅಗಲೀಕರಣ ಕಾಮಗಾರಿ ಸದ್ಯದಲ್ಲಿಯೇ ಮುಗಿಸುತ್ತೇವೆ, ಭಟ್ಕಳದಲ್ಲಿ ಜಿಲ್ಲಾಧಿಕಾರಿ ಹೇಳಿಕೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐಆರ್‍ಬಿ ಕಂಪನಿಯ ಅಧಿಕಾರಿಗಳೊಂದಿಗೆ ಸಭೆ ...

ಭಟ್ಕಳ: ಗುರು ಸುಧೀಂದ್ರ ಕಾಲೇಜಿನಲ್ಲಿ ನೂತನ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ 'ಸ್ವಾಗತ ಕಾರ್ಯಕ್ರಮ

ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ 2022-23 ನೇ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ 'ಸ್ವಾಗತ ...

ಸುರತ್ಕಲ್ ಟೋಲ್‌ಗೇಟ್ ಶುಲ್ಕ ಹೆಜಮಾಡಿಯಲ್ಲಿ ಸಂಗ್ರಹ; ರಾ. ಹೆದ್ದಾರಿ ಪ್ರಾಧಿಕಾರ ಆದೇಶ

ಸುರತ್ಕಲ್ ಟೋಲ್; ಗೇಟ್; ನ್ನು ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಟೋಲ್ ಗೇಟ್;ನ ದರವನ್ನು ...

ಕೋಲಾರ: ಚುನಾವಣಾ ವರ್ಷ-ಘೋಷಣೆಗಳಿಂದ ಸಾಲ ವಸೂಲಾತಿ ಮೇಲೆ ಪರಿಣಾಮ ಸಾಧ್ಯತೆ; ಗೋವಿಂದಗೌಡ

ಚುನಾವಣಾ ವರ್ಷವಾಗಿದ್ದು, ಬ್ಯಾಂಕ್ ಸಿಬ್ಬಂದಿಗೆ ಅಗ್ನಿಪರೀಕ್ಷೆಯ ಕಾಲ, ರಾಜಕೀಯ ಪಕ್ಷಗಳ ಘೋಷಣೆಗಳಿಂದಾಗಿ ಸಾಲ ವಸೂಲಾತಿ ಮೇಲೆ ...

ಮಂಗಳೂರು: ಆಟೊರಿಕ್ಷಾದಲ್ಲಿ ಸ್ಫೋಟ ಪ್ರಕರಣ; ಶಾರಿಕ್ ಆರೋಪಿ: ಎಡಿಜಿಪಿ, “ಗೋಡೆ ಬರಹ ಪ್ರಕರಣದಲ್ಲೂ ಶಾಮೀಲು'

ರಾಷ್ಟ್ರೀಯ ಹೆದ್ದಾರಿ75ರ ಪಂಪ್ ವೆಲ್ ಸಮೀಪದ ನಾಗುರಿ ಎಂಬಲ್ಲಿ ಶನಿವಾರ ಸಂಜೆ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ವೇಳೆ ...