ಬಳ್ಳಾರಿ ತಾಲೂಕು ಮಟ್ಟದ ಗ್ರಾಮೀಣ ಐಟಿ ಕ್ವಿಜ್.

Source: SO News | By Laxmi Tanaya | Published on 7th September 2021, 10:54 PM | State News | Don't Miss |

ಬಳ್ಳಾರಿ : ನಗರದ  ಕೆ.ಪಿ.ಎಸ್ ಬಾಲಕಿಯರ ಶಾಲೆಯಲ್ಲಿ ಬಳ್ಳಾರಿ ಪೂರ್ವ  ವಲಯದ ತಾಲೂಕು ಮಟ್ಟದ ಗ್ರಾಮೀಣ ಐಟಿ ಕ್ವಿಜ್ ಕಾರ್ಯಕ್ರಮ ಮತ್ತು 6 ಮತ್ತ 7ನೇ ತರಗತಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ ಕಾರ್ಯಕ್ರಮ ಸೋಮವಾರ ನಡೆಯಿತು.

ಸಾರ್ವಜನಿಕರ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಾಮಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಂದಿನ ಆಧುನಿಕ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ನಗರ ಪ್ರದೇಶದ ಮಕ್ಕಳೊಂದಿಗೆ ಶಿಕ್ಷಣ ತಂತ್ರಜ್ಞಾನದಲ್ಲಿ ಪೈಪೋಟಿ ನೀಡುವ ನಿಟ್ಟಿನಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಮತ್ತು ಈ ಮೂಲಕ ಉನ್ನತ ಸ್ಥಾನಕ್ಕೇರಬೇಕು ಎಂದರು.

ಕೆ.ಪಿ.ಎಸ್ ಬಾಲಕಿಯರ ಶಾಲೆಯ 6 ಮತ್ತು 7ನೇ ತರಗತಿಯ ಮಕ್ಕಳಿಗೆ ಇಲಾಖೆಯ ಉಚಿತ ಪಠ್ಯ ಪುಸ್ತಕಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ಪೂರ್ವ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ.ಸಿದ್ಧಲಿಂಗಮೂರ್ತಿ, ಬಿ.ಆರ್.ಸಿ. ಅಡ್ಡೇರು ಮಲ್ಲಪ್ಪ, ಮುಖ್ಯ ಗುರುಗಳಾದ ಕೇಶವಣ್ಣ, ಜಾಕೋಬ್ ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಜರಿದ್ದರು. ಸಂಯೋಜಕರಾದ ಗೂಳೆಪ್ಪ ನಿರೂಪಿಸಿದರು.

Read These Next

ಬೆಂಗಳೂರು: 2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ - ಸಚಿವ ಬಿ. ಶ್ರೀರಾಮುಲು

2021ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆರು ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ...

ಬೆಂಗಳೂರು: ಅಕ್ಟೋಬರ್ 24ರಿಂದ ಒಂದು ವಾರಗಳ ಕಾಲ ‘ಕನ್ನಡಕ್ಕಾಗಿ ನಾವು’ ಅಭಿಯಾನ - ಸಚಿವ ಸುನೀಲ್ ಕುಮಾರ್

ರಾಜ್ಯಾದಾದ್ಯಂತ 66ನೆ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ. ಎಂದಿನಂತೆ ನವೆಂಬರ್ ಒಂದರಂದು ಮಾತ್ರ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...