ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಬೆಂಗಳೂರು ಪೊಲೀಸರು ಕೇರಳದಲ್ಲಿ ವಶಕ್ಕೆ; ಬಿಡುಗಡೆ

Source: Vb | By I.G. Bhatkali | Published on 4th August 2023, 12:20 PM | State News | National News |

ಬೆಂಗಳೂರು: ಆನ್‌ಲೈನ್ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಬೇಡಿಕೆಯಿಟ್ಟ ಆರೋಪದಡಿ ಬೆಂಗಳೂರಿನ ಇನ್‌ಸ್ಪೆಕ್ಟರ್, ಮೂವರು ಸಿಬ್ಬಂದಿಯನ್ನು ಕೊಚ್ಚಿ ಸಮೀಪದ ಕಳಂಚೇರಿ ಠಾಣಾ ಪೊಲೀಸರು ವಶಕ್ಕೆ ಪಡೆದು ನೋಟಿಸ್‌ ಜಾರಿಗೊಳಿಸಿ ಬಿಡುಗಡೆಗೊಳಿಸಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ (ಸಿಇಎನ್) ಪೊಲೀಸ್ ಇನ್‌ಸ್ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್‌ಸ್ಟೇಬಲ್‌ಗಳಾದ ವಿಜಯ್ ಕುಮಾರ್, ಶಿವನಿ ಹಾಗೂ ಕಾನ್ಸ್ ಟೇಬಲ್ ಸಂದೇಶ್ ಎಂಬವರನ್ನು ಕಳಂಚೇರಿ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆನಂತರ, ನೋಟಿಸ್ ನೀಡಿ ಬಿಡುಗಡೆ ಗೊಳಿಸಿದ್ದಾರೆ ಎನ್ನಲಾಗಿದೆ.

ಜೂ.14ರಂದು ವೈಟ್‌ ಫೀಲ್ಡ್ ಸಿಇಎನ್ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಉದ್ಯೋಗ ವಿಚಾರವಾಗಿ 26 ಲಕ್ಷ ರೂ. ವಂಚನೆ ಗೈದಿರುವ ಆರೋಪದಡಿ ಪ್ರಕರಣ ದಾಖಲಾಗಿತ್ತು. ಆನಂತರ ತನಿಖೆಯ ವೇಳೆ ಮಡಿಕೇರಿಯ ಐಸಾಕ್ ಎಂಬಾತ ಐಸಿಐಸಿಐ ಬ್ಯಾಂಕ್ ಖಾತೆಗೆ 1 ಲಕ್ಷ ರೂ. ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು. ಜತೆಗೆ, ರಾಜೇಶ್ ಒತ್ತಾಯದಿಂದಾಗಿ ಕೇರಳದ ಪರೇಸ್ ಮತ್ತು ನಿಶಾಂತ್‌ಗೆ ಹಣ ವರ್ಗಾವಣೆ ಮಾಡಿದ್ದೆ ಎಂದು ಐಸಾಕ್ ಬಾಯಿಬಿಟ್ಟಿದ್ದ. ಈ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಿದಾಗ ಕೇರಳದ ಮನ್ನಾಪುರಂನ ನೌಶಾದ್ ಎಂಬಾತನೇ ಮೂಲ ಕಾರಣ ಎಂದು ಆರೋಪಿಗಳು ಹೇಳಿದ್ದರು.

ಇದರನ್ವಯ ವೈಟ್‌ ಫೀಲ್ಡ್ ಸಿಇಎನ್ ಪೊಲೀಸ್ ಇನ್‌ಸ್ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್‌ಸ್ಟೇಬಲ್‌ಗಳಾದ ವಿಜಯ್‌ ಕುಮಾರ್, ಶಿವನಿ ಹಾಗೂ ಕಾನ್‌ಸ್ಟೇಬಲ್ ಸಂದೇಶ್ ನೇತೃತ್ವದ ತಂಡ ಜುಲೈ 31ರಂದು ನೌಶಾದ್ ಪತ್ತೆಗೆ ಕೇರಳಕ್ಕೆ ತೆರಳಿದರು. ಮರುದಿಂದ ಆ.1ರಂದು ನೌಶಾದ್‌ನನ್ನು ಎಂಗಾರಾದಲ್ಲಿ ಕರೆದುಕೊಂಡು ಹೋಗಿ, ಈತನ ಪರಿಚಯಸ್ಥರಾದ ಎರ್ನಾಕುಲಂ ಮೂಲದ ನಿಖಿಲ್ ಮತ್ತು ಅಖಿಲ್ ಅವರನ್ನು ವಶಕ್ಕೆ ಪಡೆಯಲಾಗಿತ್ತು.

ಬಳಿಕ ಬುಧವಾರ ಶಿವಪ್ರಕಾಶ್, ವಿಜಯ್‌ ಕುಮಾರ್, ಶಿವನಿ ಹಾಗೂ ಸಂದೇಶ್ ತನ್ನಿಂದ 3 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂದು ಶಂಕಿತ ಆರೋಪಿ ಅಖಿಲ್ ತನ್ನ ವಕೀಲರ ಮೂಲಕ ಕಳಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಇದರನ್ವಯ ವಿಚಾರಣೆ ನಡೆಸಿದಾಗ ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣ ಸಂಬಂಧ ನಾಲ್ವರು ಪೊಲೀಸರ ವಿರುದ್ಧ ಸುಲಿಗೆ ಆರೋದಪಡಿ ಮೊಕದ್ದಮೆ ದಾಖಲಿಸಿ, ವಿಚಾರಣೆ ನಡೆಸಿ, ನೋಟಿಸ್‌ ನೀಡಿ ಬಿಡುಗಡೆಗೊಳಿಸಿದ್ದಾರೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...