ಇಂದು ರಾಜ್ಯಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೊ ಪಾದಯಾತ್ರೆ

Source: Vb | By I.G. Bhatkali | Published on 30th September 2022, 9:33 AM | State News | National News |

ಬೆಂಗಳೂರು: ಎಐಸಿಸಿ ಮುಖಂಡ ರಾಹುಲ್ ಗಾಂಧಿ ಕೈಗೊಂಡಿರುವ 'ಭಾರತ ಐಕ್ಯತಾ ಪಾದಯಾತ್ರೆ ಸೆ.30ಕ್ಕೆ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಲಿದ್ದು, ಯಾತ್ರೆಯ ಅದ್ದೂರಿ ಸ್ವಾಗತಕ್ಕೆ ಕಾಂಗ್ರೆಸ್ ಪಕ್ಷ ಸಕಲ ಸಿದ್ಧತೆ ಮಾಡಿಕೊಂಡಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಸೆ.7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ 'ಭಾರತ್ ಜೋಡೊ' ಪಾದಯಾತ್ರೆ ಯಶಸ್ವಿಗೆ ಈಗಾಗಲೇ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಸೆ.30ರಂದು ಕೇರಳದಿಂದ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಆಗಮಿಸಲಿದ್ದು, ಯಾತ್ರೆ ಸ್ವಾಗತಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ಶಾಸಕರು, ಮೇಲ್ಮನೆ ಸದಸ್ಯರು ಸೇರಿದಂತೆ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿನಿತ್ಯ 20ರಿಂದ 25 ಕಿ.ಮೀ ನಷ್ಟು ಪಾದಯಾತ್ರೆ ಸಾಗಲಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಒಟ್ಟು 511 ಕಿ.ಮೀ ಪಾದಯಾತ್ರೆ ಸಂಚರಿಸಲಿದೆ.

ಅ.19ರ ವರೆಗೆ ಒಟ್ಟು 21 ದಿನಗಳ ಕಾಲ 'ಭಾರತ್ ಜೋಡೋ' ಪಾದಯಾತ್ರೆ ರಾಜ್ಯದಲ್ಲಿ ನಡೆಯಲಿದೆ. ಅ.4 ಮತ್ತು 5ರಂದು ದಸರಾ ಉತ್ಸವದ ಹಿನ್ನೆಲೆಯಲ್ಲಿ ಯಾತ್ರೆಗೆ ವಿರಾಮ ನೀಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಬೃಹತ್‌ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿದ್ದು, ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಶಕ್ತಿಪ್ರದರ್ಶನ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...