ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ. ರಾಜ್ಯ ಸರ್ಕಾರಕ್ಕೆ ಸುಪ್ರಿಮ್ ನೋಟೀಸ್.

Source: SO News | By Laxmi Tanaya | Published on 12th October 2020, 6:39 PM | State News | Don't Miss |

ಉಡುಪಿ : 2016 ರಲ್ಲಿ ನಡೆದ ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

 ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು  ಪತ್ನಿ ರಾಜೇಶ್ವರಿ, ಮಗ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಂದಳಿಕೆಯ ನಿರಂಜನ ಭಟ್ ಸೇರಿಕೊಂಡು ಹತ್ಯೆ ಮಾಡಿ ಹೋಮ ಕುಂಡದಲ್ಲಿ ಶವವನ್ನು ಸುಟ್ಟು ಹಾಕಿದ್ದರು. ಪ್ರಕರಣದಲ್ಲಿ ಭಾಸ್ಕರ್  ಅವರ ಪತ್ನಿ ರಾಜೇಶ್ವರಿ ಹಾಗೂ ಜ್ಯೋತಿಷಿ ನಿರಂಜನ ಭಟ್ ಅವರು ಅನೈತಿಕ ಸಂಬಂಧ ಹೊಂದಿದ ಆರೋಪ ಕೂಡ ಕೇಳಿಬಂದಿತ್ತು. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ, ಮಗ ನವನೀತ್ ಶೆಟ್ಟಿ ಬಂಧನಕ್ಕೊಳಗಾಗಿದ್ದರು.  ಸಾಕ್ಷಿ ನಾಶದ ಆರೋಪ ಹಿನ್ನೆಲೆಯಲ್ಲಿ ಜೈಲು ಸೇರಿದ್ದ ನಿರಂಜನ ಭಟ್ ಹಾಗೂ ಅವರ ತಂದೆ ಶ್ರೀನಿವಾಸ ಭಟ್ ಹಾಗೂ ಚಾಲಕ ರಾಘವೇಂದ್ರ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರಕಿತ್ತು.

ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ನಿರಂಜನ ಭಟ್ ಗೆ ಜಾಮೀನು ಸಿಗದೇ ಇರೋದ್ರಿಂದ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ನಿರಂಜನ ಭಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ವಸ್ತುಗಳನ್ನು ವಶಕ್ಕೆ ಪಡೆದಿಲ್ಲ.  ಮಾತ್ರವಲ್ಲ ಹಲವು ಸಾಕ್ಷಿಗಳನ್ನು ಇನ್ನಷ್ಟೇ ವಿಚಾರಣೆ ಒಳಪಡಿಸಬೇಕಾಗಿದೆ. ಈ ಪ್ರಕ್ರಿಯೆಯನ್ನು ಮುಗಿಸಲು ಇನ್ನೂ ಆರು ತಿಂಗಳ ಕಾಲಾವಕಾಶ ಬೇಕಾಗಿದೆ. ಆ ನಂತರದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆಯನ್ನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿರಂಜನ ಭಟ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

 ಪ್ರಕರಣದ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಬೊಬ್ಡೆ
ಹಾಗೂ ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ, ವಿ. ರಾಮ ಸುಬ್ರಮಣ್ಯಂ ಅವರನ್ನು ಒಳಗೊಂಡ ನ್ಯಾಯಪೀಠವು ಜಾಮೀನು ಅರ್ಜಿಯ ಕುರಿತು ಎರಡು ವಾರದೊಳಗಾಗಿ ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...