ಉ.ಕ.ಜಿಲ್ಲೆಯ 15ಮೀನುಗಾರರನ್ನು ಬಂಧಿಸಿದ ಇರಾನ್ ಸರ್ಕಾರ

Source: S O News service | By Staff Correspondent | Published on 10th October 2018, 7:17 PM | Coastal News | Gulf News | Incidents | Don't Miss | State News |

* ದುಬೈಯಿಂದ ಮೀನುಗಾರಿಕೆಗೆ ತೆರಳಿದ್ದ ಭಟ್ಕಳ,ಮುರುಢೇಶ್ವರ, ಕುಮಟಾದ 15ಮಂದಿ ಮೀನುಗಾರರು

* ಬಂಧಿತ ಮೀನುಗಾರರ ಕುಟುಂಬದಲ್ಲಿ ಮನೆ ಮಾಡಿದ ಆತಂಕದ ಛಾಯೆ

ಭಟ್ಕಳ: ದುಬೈಯಿಂದ ಮೀನುಗಾರಿಕೆಗೆ ತೆರಳಿದ್ದ ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಮುರುಡೇಶ್ವರ, ಮಂಕಿಯ ಸುಮಾರು 15 ಮಂದಿ ಮೀನುಗಾರರನ್ನು ಇರಾನ್ ಗಡಿ ಪ್ರವೇಶಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಅಲ್ಲಿಯ ಸರ್ಕಾರ ಬಂಧಿಸಿದೆ ಎಂಬ ಸುದ್ದಿ ಭಟ್ಕಳ ಸೇರಿದಂತೆ ಜಿಲ್ಲಾದ್ಯಂತ ಹರಡಿದ್ದು ಬಂಧಿತ ಮೀನುಗಾರರ ಕುಟುಂಬದವರು ಆತಂಕಿತಗೊಂಡಿರುವ ವಿಷಯ ಬೆಳಕಿಗೆ ಬಂದಿದೆ. 

ಇರಾನ್ ಸರ್ಕಾರದಿಂದ ಬಂಧಿಸಲ್ಪಟ್ಟ ಮೀನುಗಾರರನ್ನು ಮುರುಢೇಶ್ವರದ ಇಬ್ರಾಹಿಂ ಮುಲ್ಲಾ ಫಖೀರಾ, ಮುಹಮ್ಮದ್ ಅನ್ಸಾರ್ ಇಸ್ಮಾಯಿಲ್ ಬಾಪು, ನಯೀಮ್ ಹಸನ್ ಭಾಂಡಿ, ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ತೆಂಗಿನಗುಂಡಿ ಪ್ರದೇಶದ ಖಲೀಲ್ ಪಾನಿಬುಡು, ಉಸ್ಮಾನ್ ಬೊಂಬಾಝ್‍ಕರ್ ಮುಹ್ಮದ್ ಇಸ್ಹಾಖ್, ಅಬ್ದುಲ್ ಮೊಹಮ್ಮದ್ ಹುಸೇನ್, ಮುಹಮ್ಮದ್ ಷರೀಫ್ ಯಸೂಫ್ ಬಾಪು, ಅಬ್ದುಲ್ಲಾ ಸುಲೈಮಾನ್ ಡಾಂಗಿ, ಕುಮಟಾ ತಾಲೂಕಿನ ಅತಿಖ್ ಸುಲೈಮಾನ್ ಧಾರು, ಯಾಖೂಬ್ ಇಸ್ಮಾಯಿಲ್ ಶಮು,ಇಲ್ಯಾಸ್ ಅಂಬಾಡಿ, ಇಲ್ಯಾಸ್ ಘರಿ, ಇನಾಯತ್ ಅಬ್ದುಲ್ ಖಾದಿರ್ ಶಮ್ಸು, ಖಾಸಿಮ್ ಶೇಖ್, ಅಜ್ಮಲ್ ಮೂಸಾ ಶಮು ಎಂದು ತಿಳಿದುಬಂದಿದ್ದು ಈ ಎಲ್ಲಾ 15 ಮಂದಿ ಮೀನುಗಾರರ ಕುಟುಂಬಸ್ಥರು ಈಗ ಆತಂಕದಲ್ಲಿದ್ದು ತಮ್ಮ ಕುಟುಂಬದ ಸದಸ್ಯರನ್ನು ಹೇಗಾದರು ಮಾಡಿ ಇರಾನ್ ಸರ್ಕಾರದಿಂದ ಬಿಡಿಸಿಕೊಂಡು ಭಾರತಕ್ಕೆ ಮರಳಿಸುವ ವ್ಯವಸ್ಥೆ ಮಾಡಬೇಕೆಂದು ತಂಝೀಮ್ ಸಂಸ್ಥೆಯಲ್ಲಿ ಮಾನವಿ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಈ ಕುರಿತಂತೆ ಭಟ್ಕಳದ ಮಜ್ಲಿಸೆ ಇಸ್ಲಾಹ್ ತಂಝೀಮ್ ನ ಉಪಾಧ್ಯಕ್ಷ ಹಾಗೂ ಜನತಾದಳ ಮುಖಂಡ ಇನಾಯತುಲ್ಲಾ ಶಾಬಂದ್ರಿಯವರನ್ನು ಸಂಪರ್ಕಿಸಿದ್ದು ಅವರು, ಕಳೆದ 2 ತಿಂಗಳ ಹಿಂದೆ ಮೀನುಗಾರಿಕೆಗೆ ತೆರಳಿದ ಜಿಲ್ಲೆಯ 15 ಮಂದಿ ಮೀನುಗಾರಿಕೆ ಮಾಡುತ್ತ ಇರಾನ್ ಗಡಿ ಸಮೀಪಿಸಿದ್ದು ಅಲ್ಲಿನ ಸರ್ಕಾರ ಒಂದು ಮೀನುಗಾರಿಕಾ ದೋಣಿಯಲ್ಲಿದ್ದವರನ್ನು ಬಂಧಿಸಿ ತಮ್ಮ ವಶದಲ್ಲಿರಿಸಿಕೊಂಡಿದ್ದಾರೆ. ಮತ್ತೊಂದು ದೋಣೀಯಲ್ಲಿದ್ದ ಮೀನುಗಾರರನ್ನು ಮರಳಿ ದುಬೈಗೆ ತೆರಳದಂತೆ ಸಮುದ್ರ ಮಧ್ಯದಲ್ಲೆ ನಿರ್ಭಂದವನ್ನು ಹೇರಿದ್ದು ಅಲ್ಲಿ ಅವರಿಗೆ ಊಟದ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ. ಈ ಕುರಿತುಂತೆ ಭಾರತ ಸರ್ಕಾರಕ್ಕೆ ಆ ಮೀನುಗಾರರನ್ನು ಮರಳಿ ದೇಶಕ್ಕೆ ಕರೆತರುವಂತೆ ಕೇಂದ್ರ ಸಚಿವೆ ಸುಶ್ಮಾ ಸ್ವರಾಜ್ ಅವರಲ್ಲಿ ಮನವಿ ಸಲ್ಲಿಸಲಾಗುವುದು ಎಂದೂ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...