ಗುಳ್ಮಿಯಲ್ಲಿ ಗಾಂಜಾ ಮಾರಾಟ; ಇಬ್ಬರ ಬಂಧನ,ಓರ್ವ ಪರಾರಿ 

Source: sonews | By Staff Correspondent | Published on 22nd July 2017, 10:59 PM | Coastal News | Don't Miss |

ಭಟ್ಕಳ: ಇಲ್ಲಿನ ಗುಳ್ಮಿಯಲ್ಲಿ  ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇನ್ನೋರ್ವ ಪರಾರಿಯಾಗಿದ್ದಾನೆ.
ಗುಳ್ಮಿಯ ಸಲ್ಮಾನ್ ಶೇಖ್ ಅಪ್ರೋಝ್ ಹಾಗೂ ಮುಗ್ದಂ ಕಾಲೋನಿಯ ಮೊಹ್ಮದ್ ಶಾಹೀರ್ ಶಬ್ಬೀರ್ ಎನ್ನುವವರು ಬಂಧಿತ ವ್ಯಕ್ತಿಗಳಾಗಿದ್ದು ಇನ್ನೋರ್ವ ಮುಗಳಿ ಹೊಂಡದ ಅಫಾನ್ ಅಲಿ ಜಬ್ಬಾಲಿ ಎಂಬಾತ ಪರಾರಿಯಾಗಿದ್ದಾನೆ. 
ಇವರು ಗುಳ್ಮಿಯ ವ್ಯಕ್ತಿಯೊಬ್ಬರ ಮನೆ ಎದುರು ಅನಧೀಕೃತವಾಗಿ ಮಾರಾಟಕ್ಕೆಂದು ಗಾಂಜಾ ಇಟ್ಟುಕೊಂಡ ಸಂದರ್ಭದಲ್ಲಿ ಖಚಿತ ಮಾಹಿತಿಯ ಮೇರೆಗೆ ನಗರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತ ಇಬ್ಬರು ಆರೋಪಿತರಿಂದ ೫೫ ಗ್ರಾಂ ತೂಕದ ಅಂದಾಜು ೨ ಸಾವಿರ ರೂಪಾಯಿ ಮೌಲ್ಯದ ನಾಲ್ಕು ಪ್ಯಾಕೇಟ್ ಗಾಂಜಾವನ್ನು  ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಅಫಾನ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ. 

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...