ಭಟ್ಕಳ: ರಸ್ತೆ ಅಪಘಾತ; ಮಹಿಳೆ ಸಾವು

Source: S O News service | By Staff Correspondent | Published on 7th March 2017, 3:54 PM | Coastal News | Technology | Don't Miss |

ಭಟ್ಕಳ: ಎರಡು ಬೈಕ್ ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು ಇಬ್ಬರು ಬೈಕ್ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆ ಸೇರಿದ ಘಟನೆ ಮಂಗಳವಾರ ಇಲ್ಲಿನ ಬಂದರ್ ರಸ್ತೆಯ ೩ನೇ ಕ್ರಾಸ್ ಬಳಿ ಜರಗಿದೆ. 
ಮೃತ ಮಹಿಳೆಯನ್ನು ಬಂದರ್ ರೋಡ್ ನಿವಾಸಿ ರಿಹಾನಾ ಅಶ್ಫಾಖ್ ದಾಮ್ದಾ(೪೮) ಎಂದು ಗುರುತಿಸಲಾಗಿದೆ.
ಇವರು ತಮ್ಮ ಪತಿ ಅಶ್ಫಾಖ್ ದಾಮ್ದಾರೊಂದಿಗೆ ಬೈಕ್‌ನಲ್ಲಿ ಬಂದರ್ ರೋಡ್ ಮೂರನೇ ಕ್ರಾಸ್ ದಾಟಿ ಆಸೀಯಾ ಆಸ್ಪತ್ರೆಗೆ ಹೋಗುತ್ತಿದ್ದಾಗ ಎದುರಿನಿಂದ ಅತ್ಯಂತ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರಿ ಮಾಡುತ್ತಿದ್ದ ಮಹಿಳೆ ಬೈಕ್ ನಿಂದ ಜಿಗಿದು ಬಿದ್ದಿದ್ದು ರಸ್ತೆ ಪಕ್ಕದಲ್ಲಿ ನಿಂತ ಲಾರಿಗೆ ಆಕೆಯ ತಲೆ ಜಜ್ಜಿದ್ದರಿಂದ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. 
ಪತಿ ಅಶ್ಫಾಖ್ ದಾಮ್ದಾ(೫೫) ಹಾಗೂ ಎದುರು ಬೈಕ್ ಸವಾರ ದಿಗಂಬರ ಸದಾನಂದ ನಾಯ್ಕ(೧೮) ಎಂಬುವವರಿಗೆ ಚಿಕ್ಕುಪುಟ್ಟ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
ಪ್ರಕರಣ ನಗರಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 

Read These Next

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟಿçÃಯ ಹೆದ್ದಾರಿ 66 ಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ...

ಹೊಸದಿಲ್ಲಿ: ಧೂಳು ತಿನ್ನುತ್ತಿರುವ5,500ಕ್ಕೂ ಅಧಿಕ ವೆಂಟಿಲೇಟರ್‌ಗಳು ಉ.ಪ್ರ., ಗುಜರಾತ್, ಕರ್ನಾಟಕ ಮುಂಚೂಣಿಯಲ್ಲಿ

ಕೊರೋನ ಎರಡನೇ ಅಲೆಯಲ್ಲಿ ವೆಂಟಿಲೇಟರ್‌ಗಳ ಕೊರತೆಯಿಂದಾಗಿ ಹಲವಾರು ರೋಗಿಗಳು ಸಾವನ್ನಪ್ಪಿದ್ದರೆ, ವಿವಿಧ ರಾಜ್ಯಗಳಲ್ಲಿ ಈ ಜೀವರಕ್ಷಕ ...

ಎ.ಜೆ.ಅಕಾಡೆಮಿ ಹಾಗೂ ನ್ಯೂಶಮ್ಸ್ ಸ್ಕೂಲ್ ವತಿಯಿಂದ ಭಟ್ಕಳ ತಾಲೂಕು ಮಟ್ಟದ ವಿಜ್ಞಾನ ಮತ್ತು ಸಂಶೋಧನೆ ಕುರಿತ ಸ್ಪರ್ಧೆ

ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಹಾಗೂ ಪರಿಸರ ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟಿçÃಯ ಹೆದ್ದಾರಿ 66 ಕ್ಕೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ...

ಜಿಲ್ಲೆಯನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ನೆರವು ; ಸಚಿವ ಮಂಕಾಳ ವೈದ್ಯ

ಕಾರವಾರ : ಜಿಲ್ಲೆಯನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ಬರುವ ಹೂಡಿಕೆದಾರರಿಗೆ ಎಲ್ಲಾ ...

ಭಟ್ಕಳ: ವಿಶ್ವ ಕುರಾನ್‌ ಪಠಣ ಸ್ಪರ್ಧೆಯಲ್ಲಿ ವಿಜೇತ ಇಬ್ರಾಹಿಂಗೆ ತಂಜೀಮ್ ಮತ್ತು ಫೆಡರೇಷನ್ ಮುಖಂಡರಿಂದ ಸ್ವಾಗತ

ಇತ್ತೀಚಿಗೆ ಸೌದಿಅರೇಬಿಯಾದಲ್ಲಿ ನಡೆದ ವಿಶ್ವ ಕುರಾನ್ ಪಠಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಇಲ್ಲಿನ ಕಾರಗದ್ದೆ ನಿವಾಸಿ ...