ಭಟ್ಕಳ:ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟನೆ

Source: varthabhavan | By Arshad Koppa | Published on 3rd August 2017, 8:16 AM | Coastal News | Guest Editorial |

ಭಟ್ಕಳ: ಅಳ್ವೇಕೋಡಿ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್, ಶ್ರೀ ದುರ್ಗಾಪರಮೇಶ್ವರಿ ಮಾರಿಜಾತ್ರಾ ಮಹೋತ್ಸವ ಸಮಿತಿ ಇವುಗಳ  ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಅತ್ತಾವರ ಇವರ ಸಹಯೋಗದೊಂದಿಗೆ ಎರ್ಪಡಿಸಲಾದ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ತಿಮ್ಮಪ್ಪ ಹೊನ್ನಿಮನೆ ಉದ್ಘಾಟಿಸಿದರು. 


ನಂತರ ಮಾತನಾಡಿದ ಅವರು ಅಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಉಚಿತ ವೈದ್ಯಕಿಯ ತಪಾಸಣಾ ಶಿಬಿರವನ್ನು ನಡೆಸಲಾಗಿದ್ದು ಈ ಹಿಂದೆ ಕೂಡಾ ಅನೇಕ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಜನತೆಗೆ ದೂರ ದೂರದ ಊರಿಗೆ ಹೋಗಿ ಆರೋಗ್ಯ  ತಪಾಸಣೆಯನ್ನು ಮಾಡಿಕೊಂಡು ಬರುವುದಕ್ಕೆ ಸಾಧ್ಯವಿಲ್ಲವಾದ್ದರಿಂದ ನಾವು ಇಲ್ಲಿಯೇ ಅವರಿಗೆ ತಪಾಸಣೆ, ಚಿಕಿತ್ಸೆಗೆ ಅನುವು ಮಾಡಿಕೊಟ್ಟಿದ್ದೇವೆ. ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಅತಿಹೆಚ್ಚಿನ ಸಂಖ್ಯೆಯಲ್ಲಿ ಬಂದು  ಉಚಿತ ವೈದ್ಯಕಿಯ ತಪಾಸಣಾ ಶಿಬಿರವನ್ನು ಯಶಸ್ವಿಗೋಳಿಸಬೇಕು ಎಂದು ಹೇಳಿದರು.
ಶ್ರೀ ಮಾರಿಜಾತ್ರಾ ಮಹೋತ್ಸವ ಸಮಿತಿ ಅಳ್ವೇಕೋಡಿಯ ಅಧ್ಯಕ್ಷ ರಾಮಾ ಮೊಗೇರ ಮಾತನಾಡಿ ತಾಲೂಕಿನ ಜನತೆಗೆ ಆರೋಗ್ಯ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏರ್ಪಡಿಸುತ್ತಿದ್ದು, ಈ ಶಿಬಿರದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು.  ದೇಶದಲ್ಲಿ ರೋಗಮುಕ್ತ ಸಮಾಜವು ನಿರ್ಮಾಣವಾಗಬೇಕಿದೆ  ಸಾರ್ವಜನಿಕರು ಕಾಯಿಲೆ ಇರಲಿ ಇಲ್ಲದಿರಲಿ ಪ್ರತಿಯೋಬ್ಬರು ವೈದ್ಯಕಿಯ ತಪಾಸಣೆ ಮಾಡಿಕೋಳ್ಳಬೇಕಿದೆ  ಶ್ರೀ ದೇವಸ್ಥಾನದ ವತಿಯಿಂದ ಜನತೆಗೆ ಅನೇಕ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು ಮುಂದಿನ ದಿನಗಳಲ್ಲಿ ಜನತೆಗೆ ಅನುಕೂಲವಾಗುವಂತೆ ಆರೋಗ್ಯದ ಕುರಿತು ಇನ್ನಷ್ಟು ಶಿಬಿರಗಳನ್ನು ಎರ್ಪಡಿಸಲು ಚಿಂತಿಸಲಾಗಿದ್ದು ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಎಲ್ಲ ಜನತೆ ಪಡೆಯುವಂತಾಗಲಿ ಎಂದು ಹೇಳಿದರು. 
ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿ ನಾರಾಯಣ ದೈಮನೆ, ಹನುಮಂತ ನಾಯ್ಕ, ಡಾ: ಆರ್.ವಿ ಸರಾಪ್ ಬಾಬು ಮೋಗೆರ್, ಅರವಿಂದ ಪೈ, ಮುಂತಾದವರು ಉಪಸ್ಥಿತರಿದ್ದರು. ಶಿಬಿರದಲ್ಲಿ ಕೆ.ಎಂ.ಸಿ. ಅತ್ತಾವರದ ವೈದ್ಯಕೀಯ ಸಿಬ್ಬಂದಿ, ಸಹಾಯಕ ಸಿಬ್ಬಂದಿಗಳು ಭಾಗವಹಿಸಿದ್ದರು. 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...