ಅಂಜುಮನ್ ಶಿಕ್ಷಣ ಮಹಾವಿದ್ಯಲಯದಲ್ಲಿ ವಾಷೀಕೋತ್ಸವ ಸಮಾರಂಭ

Source: sonews | By Staff Correspondent | Published on 26th November 2018, 5:17 PM | Coastal News | Don't Miss |

ಭಟ್ಕಳ: ಇಲ್ಲಿನ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷೀಕೋತ್ಸವ ಸಮಾರಂಭ ಜರಗಿತು.

ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಮಾತನಾಡಿ, ಶಿಕ್ಷಕ ತರಬೇತಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿ, ಶಿಕ್ಷಕ ತರಬೇತಿ ಪಡೆದವರು ಕೇವಲ ಶಿಕ್ಷಕ ವೃತ್ತಿಯೊಂದನ್ನೇ ಅವಲಂಬಿಸದೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದರ ಮೂಲಕ ಉನ್ನತ ಹುದ್ದೆಗಳನ್ನೂ ಅಲಂಕರಿಸಬಹುದಾಗಿದೆ ಎಂದ ಅವರು, ಮಗು 9 ತಿಂಗಳು ತಾಯಿಯ ಗರ್ಭದಲ್ಲಿ ಹೇಗೆ ಪರಿಪೂರ್ಣವಾಗಿ ಭೂಮಿಗೆ ಕಾಲಿಡುತ್ತಾನೋ ಅದೇ ರೀತಿ ಪ್ರಶಿಕ್ಷಣಾರ್ಥಿಯಾದವರು ತಮ್ಮ ಶಿಕ್ಷಕ ತರಬೇತಿಯನ್ನು ಪೂರ್ಣಗೊಳಿಸಿ ಪರಿಪೂರ್ಣನಾಗಿ ಸಮಾಜದ ಮುಂದೆ ಹೋಗುತ್ತಾನೆ. ಬದುಕು ಸುಲಭವಲ್ಲ. ಇಂದಿನ ಸ್ಪರ್ಧಾಯುಗದಲ್ಲಿ ಕೇವಲ ಅಂಕಗಳಿಕೆ ಮಾತ್ರ ಮಾನದಂಡವಾಗದೆ ವ್ಯಕ್ತಿಯಲ್ಲಿ ಎಲ್ಲ ರೀತಿಯ ಪ್ರತಿಭೆಗಳನ್ನು ಬೆಳೆಸಿಕೊಂಡಾಗ ಮಾತ್ರ ಉನ್ನತ ಹುದ್ದೆಗಳು ಸಿಗಲಿಕ್ಕೆ ಸಾಧ್ಯ ಎಂದರು. 

ಉಪನಿದೇರ್ಶಕ ನಾರಾಯಣ ನಾಯಕ ಮಾತನಾಡಿ,  ಸಮಾಜ ಉತ್ತಮ ಶಿಕ್ಷಕರನ್ನು ಗೌರವಿಸುತ್ತದೆ. ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಸಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದ ಅವರು, ಬಿಇಡ್ ತರಗತಿಯಲ್ಲಿ ಕಲಿತದನ್ನು ಶಿಕ್ಷಣ ಕ್ಷೇತ್ರದಲ್ಲಿ ಪ್ರಯೋಗಿಕವಾಗಿ  ಮಾಡಿ ತೋರಿಸಬೇಕು. ಇಂದಿನ ವಿದ್ಯಾರ್ಥಿಗÀಳು ಪ್ರತಿಭಾವಂತರಾಗಿದ್ದಾರೆ. ಹಿಂದಿನ ಮತ್ತು ಇಂದಿನ ಮಕ್ಕಳಿಗೆ ಹೋಲಿಕೆ ಮಾಡಿದಾಗ ಇಂದಿನ ಮಕ್ಕಳು ಹೆಚ್ಚು ಬುದ್ದಿವಂತರಾಗಿರುವುದನ್ನು ನಾವು ಕಾಣುತ್ತೇವೆ. ಇಂತಹ ವಿದ್ಯರ್ಥಿಗಳೊಂದಿಗೆ ಶಿಕ್ಷಕರಾದವರು ಹೇಗೆ ಪಾಠ ಮಾಡಬೇಕು, ಅದಕ್ಕೆ ಹೇಗೆ ಸಿದ್ದತೆ ನಡೆಸಬೇಕು ಎಂಬುದನ್ನು ಅರಿತುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. 

ಸಂಸ್ಥೆಯ ಪದವಿ ಕಾಲೇಜ್ ಬೋರ್ಡ್  ಕಾರ್ಯದರ್ಶಿ  ಮೋಹಸಿನ್ ಶಾಬಂದ್ರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿದ್ದಿಖ್ ಇಸ್ಮಾಯಿಲ್, ಕಾಲೇಜಿನ ಪ್ರಾಂಶುಪಾಲೆ ಡಾ.ಝಕಿಯಾ, ಕಾಲೇಜ್ ಬೋರ್ಡ್ ಕಾರ್ಯದರ್ಶಿ ಆಫ್ತಾಬ್ ಖಮರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಪ್ರಶಿಕ್ಷಣಾರ್ಥಿಗಳಾದ ಸಬಾ ಆಫ್ರೀನ್ ಸ್ವಾಗತಿಸಿದರು. ಪ್ರತೀಕ್ಷ ಮತ್ತು ಸುಚಿತ್ರ ನಾಯ್ಕ ಅತಿಥಿಗಳನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ವರ್ಷದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯನ್ನು ಪ್ರಶಿಕ್ಷಣಾರ್ಥಿ ಅಲ್ಮಾಸ್ ನೂರ್‍ಗೆ ಪ್ರದಾನಿಸಲಾಯಿತು. 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...