ಭಟ್ಕಳ: ನಾಯಕತ್ವ ಗುಣ ಬೆಳೆಯಲು ಎನ್‍ಎಸ್‍ಎಸ್ ಸಹಕಾರಿ : ಇನಾಯತುಲ್ಲಾ ಶಾಬಂದ್ರಿ

Source: S O News | By I.G. Bhatkali | Published on 17th January 2024, 12:58 AM | Coastal News |


ಭಟ್ಕಳ: ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವಲ್ಲಿ ಮತ್ತು ಎಲ್ಲ ರೀತಿಯ ಅಡೆತಡೆಗಳನ್ನು ಮೀರಿ ಮಾನವೀಯ ಮೌಲ್ಯವನ್ನು ಅಳವಡಿಸಿಕೊಳ್ಳುವಲ್ಲಿ ರಾಷ್ಟಿçÃಯ ಸೇವಾ ಯೋಜನಾ ಘಟಕವು ತುಂಬಾ ಸಹಕಾರಿ ಎಂದು, ಅಂಜುಮನ್ ಆಡಳಿತ ಸಂಸ್ಥೆಯ ಸದಸ್ಯರಾದ ಇನಾಯತುಲ್ಲಾ ಶಾಬಂದ್ರಿ ಹೇಳಿದರು.

ಅವರು ಭಟ್ಕಳ ತಾಲೂಕಿನ ಹಡೀಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಾಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಪ್ರತಿಭೆ ಇದ್ದೇ ಇರುತ್ತದೆ, ಅಂತಹ ಪ್ರತಿಭೆ ಅನಾವರಣಗೊಳ್ಳಲು ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅವಶ್ಯ ಎಂದರು. 

ಅಧ್ಯಕ್ಷತೆ ವಹಿಸಿದ ಉಪಪ್ರಾಂಶುಪಾಲ ಪ್ರೊ. ಮೊಹಮ್ಮದ್ ಹಿಬ್ಬಾನ್ ಇಂತಹ ಶಿಬಿರಗಳು ಜಾತಿ ಮತ ಪಂಥಗಳನ್ನು ಮೀರಿ ನಾವೆಲ್ಲ ಒಂದು ಎಂಬ ಭಾವ ಬೆಳೆಯುವಲ್ಲಿ ತುಂಬಾ ಉಪಯುಕ್ತವಾಗುತ್ತದೆ ಎಂದರು. 

ಕಾಲೇಜಿನ ಹಿರಿಯ ಪ್ರಾಧ್ಯಾಪಕ ಪ್ರೊ. ಎಸ್. ಎ. ಇಂಡಿಕರ್,  ಶಾಲೆಯ ಮುಖ್ಯ ಶಿಕ್ಷಕ ರಾಮ ಗೌಡ ಶಾಲಾಭಿವೃದ್ಧಿ ಸಮೀತಿಯ ಅಧ್ಯಕ್ಷ ಶಂಕರ ನಾಯ್ಕ ಮಾತನಾಡಿದರು. 

ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಪ್ರೊ. ಆರ್. ಎಸ್. ನಾಯಕ ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಕೊನೆಯಲ್ಲಿ ಶ್ರೇಯಸ್ ನಾಯಕ ವಂದಿಸಿದರು. ಕುಮಾರಿ ಅಮೃತಾ ನಾಯಕ ಮತ್ತು ತಂಡ ಕಾರ್ಯಕ್ರಮ ನಿರ್ವಹಿಸಿದರು. ಶಾಲೆಯ ಪುಟ್ಟ ಮಕ್ಕಳು ಸ್ವಾಗತ ಗೀತೆ ಹಾಡಿದರು.  

Read These Next