ಉ.ಕ.ಜಿಲ್ಲೆಯನ್ನು ಶರಾವತಿ ಅಭಯಾರಣ್ಯಕ್ಕೆ ಸೇರ್ಪಡೆ ವಿರೋಧಿಸಿ ಅರಣ್ಯ ಅತಿಕ್ರಮಣದಾರರಿಂದ ಬೃಹತ್ ಪ್ರತಿಭಟನೆ

Source: sonews | By Staff Correspondent | Published on 10th October 2019, 11:10 PM | Coastal News | Don't Miss |

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾರಗಾರರ ವೇದಿಕೆ ವತಿಯಿಂದ ಅರಣ್ಯ ಅತಿಕ್ರಮಣದಾರರ ಬೃಹತ್ ಪ್ರತಿಭಟನೆ ಹಾಗೂ ಸಮಾವೇಶ ಅರಣ್ಯ ಹಕ್ಕು ಜಿಲ್ಲಾ ಸಮಿತಿಯ ಅಧ್ಯಕ್ಷ  ರವೀಂದ್ರನಾಥ ನಾಯ್ಕ ಅವರ ನೇತೃತ್ವದಲ್ಲಿ ನಡೆಯಿತು. 

ಸಮಾವೇಶದಲ್ಲಿ ಉಪಸ್ಥಿತರಿದ್ದ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆಯನ್ನು ಶರಾವತಿ ಅಭಯಾರಣ್ಯ ಪ್ರದೇಶಕ್ಕೆ ಸೇರ್ಪಡೆ ಮಾಡಿರುವುದನ್ನು ಕೈಬಿಡಬೇಕು ಹಾಗೂ ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆಯಿಂದ ಆಗುತ್ತಿರುವ ಕಿರುಕುಳ, ದೌರ್ಜನ್ಯ ನಿಲ್ಲಬೇಕು, ಹಾಗೂ ದೌರ್ಜನ್ಯ ಎಸಗುತ್ತಿರುವ ಅರಣ್ಯಾಧಿಕಾರಿಗಳು, ಸಿಬ್ಬಂದಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 

ತಾಲೂಕಿನ  ಹಾಗೂ ಉತ್ತರ ಕನ್ನಡ ಜಿಲ್ಲೆಯ 87 ಗ್ರಾಮಗಳನ್ನು ಸ್ಥಳೀಯ ಸಂಸ್ಥೆಗಳ, ಜನಪ್ರತಿನಿಧಿಗಳ ಮತ್ತು ಜನರ ಅಭಿಪ್ರಾಯ ಸಂಗ್ರಹಿಸದೇ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗಿದೆ. ಇದರಿಂದ ಅರಣ್ಯಭೂಮಿಯಲ್ಲಿ ವಾಸಿಸುತ್ತಿರುವ ಅತಿಕ್ರಮಣದಾರರ ಸ್ವತಂತ್ರ ಜೀವನಕ್ಕೆ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲೆಯನ್ನು ಅಭಯಾರಣ್ಯ ಪ್ರದೇಶಕ್ಕೆ ಸೇರಿಸಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದ ಅವರು  ಅತಿಕ್ರಮಣದಾರರ ಅರ್ಜಿ ಇನ್ನೂ ಇತ್ಯರ್ಥಗೊಳ್ಳದೇ ಇರುವಾಗಲೇ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅತಿಕ್ರಮಣ ಜಾಗದಲ್ಲಿರುವ ಮನೆಯನ್ನು ಖುಲ್ಲಾ ಪಡಿಸುತ್ತಿರುವುದಲ್ಲದೇ ಅತಿಕ್ರಮಣದಾರರಿಗೆ ಕಿರುಕುಳ, ದೌರ್ಜನ್ಯ ಹಾಗೂ ಗೂಂಡಾಗಿರಿಯ ಪ್ರದರ್ಶನ ಮಾಡುತ್ತಿದ್ದಾರೆ.  ಅರಣ್ಯ ಇಲಾಖೆಯವರು ಅತಿಕ್ರಮಣದಾರರ ಮೇಲೆ ಶೋಷಣೆ ನಿಲ್ಲಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಪರಿಣಾಮ  ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು. 

ತಾಲೂಕಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡು ಮುಂಚಿತವಾಗಿ ತಿಳಿಸಿದ್ದರೂ ಸಹ ಅರಣ್ಯ ಇಲಾಖೆಯ ಯಾವೊಬ್ಬ ಅಧಿಕಾರಿಯು ಇಲ್ಲಿ ಹಾಜರಿಲ್ಲದಿರುವುದು ಖಂಡನೀಯ ಅಲ್ಲದೇ ತಮ್ಮ ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿರುವುದು ಜವಾಬ್ದಾರಿಯುತ ಅಧಿಕಾರಿಗಳ ಲಕ್ಷಣವಲ್ಲ

 

-ರವಿಂದ್ರನಾಥ ನಾಯ್ಕ, ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆಯ ಜಿಲ್ಲಾ ಅಧ್ಯಕ್ಷ.

ಸಭೆಯಲ್ಲಿ ಜೆ.ಡಿ.ಎಸ್. ಮುಖಂಡ ಇನಾಯತುಲ್ಲಾ ಶಾಬಂದ್ರಿ,  ಸಮಿತಿಯ ಜಿಲ್ಲಾ ಕಾರ್ಯದರ್ಶಿ ದೇವರಾಜ ಮರಾಠಿ, ಶಿವು ಮರಾಠಿ  ಮುಂತಾದವರು ಮಾತನಾಡಿದರು. 

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯಾಧಿಕಾರಿ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲುಗಳನ್ನು ಕೇಳಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರೂ ಕೂಡಾ ಸಭೆಗೆ ಬಾರದೇ ತಪ್ಪಿಸಿಕೊಂಡಿರುವುದು ನೆರೆದಿದ್ದ ಪ್ರತಿಭಟನಾಕಾರರನ್ನು ಇನ್ನಷ್ಟು ಕೆರಳಿಸಿತು. 

ನಂತರ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಹಾಯ ಆಯುಕ್ತ  ಸಾಜೀದ್ ಅಹಮ್ಮದ್ ಮುಲ್ಲಾ ಅವರು ಪ್ರತಿಭಟನಾ ನಿರತರ ಮನವಿ ಸ್ವೀಕರಿಸಿದರು. ನಂತರ ನೆರೆದಿದ್ದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಹಳೆಯ ಅತಿಕ್ರಮಣದಾರರ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ.  ಅರಣ್ಯ ಹಕ್ಕು ಕಾಯ್ದೆಯಡಿ ಅತಿಕ್ರಮಣದಾರರಿಗೆ ಪಟ್ಟಾ ನೀಡುವ ಬಗ್ಗೆ ಮತ್ತು ನಿಯಮಾವಳಿ ಪ್ರಕಾರ ಕ್ರಮ ಜರುಗಿಸಲಾಗುವುದು. ಅತಕ್ರಮಣ ಜಾಗಾ ತೆರವುಗೊಳಿಸುವ ಕುರಿತು ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸುವ ಭರವಸೆಯನ್ನು ನೀಡಿದರು. 

ಪ್ರತಿಭಟನೆಯನ್ನು ಉಪಸ್ಥಿತರಿದ್ದ ಹಲವು ಮಹಿಳೆಯರು ತಮಗಾದ ಕಿರುಕುಳ ಮತ್ತು ದೌರ್ಜನ್ಯದ ಬಗ್ಗೆ ಸಹಾಯಕ ಆಯುಕ್ತರಲ್ಲಿ ಅತ್ಯಂತ ದು:ಖದಿಂದ ಹೇಳಿಕೊಳ್ಳುತ್ತಿರುವುದು ಮನ ಕಲುಕುವಂತಿತ್ತು.  ಪ್ರತಿಭಟನೆಯಲ್ಲಿ ತಂಝೀಂ ಅಧ್ಯಕ್ಷ ಎಸ್. ಎಂ. ಪರ್ವೇಜ್, ಮಾಜಿ ಅಧ್ಯಕ್ಷ ಮುಜಾಮಿಲ್ ಖಾಜೀಯಾ, ಜಿಲ್ಲಾ ಸಂಚಾಲಕ ದೇವರಾಜ ಮರಾಠಿ,  ರಿಜ್ವಾನ್ ಸಾಬ್, ಖಯ್ಯೂಂ, ಪಾಂಡುರಂಗ ನಾಯ್ಕ ಗೊರ್ಟೆ, ಮಾದೇವ ನಾಯ್ಕ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಕೂಡಾ ಭಾಗವಹಿಸಿದ್ದರು. 

ತಾಲೂಕಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡು ಮುಂಚಿತವಾಗಿ ತಿಳಿಸಿದ್ದರೂ ಸಹ ಅರಣ್ಯ ಇಲಾಖೆಯ ಯಾವೊಬ್ಬ ಅಧಿಕಾರಿಯು ಇಲ್ಲಿ ಹಾಜರಿಲ್ಲದಿರುವುದು ಖಂಡನೀಯ ಅಲ್ಲದೇ ತಮ್ಮ ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿರುವುದು ಜವಾಬ್ದಾರಿಯುತ ಅಧಿಕಾರಿಗಳ ಲಕ್ಷಣವಲ್ಲ-ರವಿಂದ್ರನಾಥ ನಾಯ್ಕ, ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆಯ ಜಿಲ್ಲಾ ಅಧ್ಯಕ್ಷ. 


 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...