ಬೇಂಗ್ರೆ ಮಾವಿನಕಟ್ಟೆ ರಾ.ಹೆ.66ರಲ್ಲಿ  ಲಿಂಕ್ ರೋಡ್ ಗೆ ಆಗ್ರಹಿಸಿ ಸಹಾಯಕ ಆಯುಕ್ತರಿಗೆ ಮನವಿ

Source: sonews | By Staff Correspondent | Published on 12th November 2019, 5:36 PM | Coastal News | Don't Miss |

ಭಟ್ಕಳ: ತಾಲೂಕಿನ ಬೇಂಗ್ರೆ ಪಂಚಾಯತ್ ವ್ಯಾಪ್ತಿಯ ಬೆಂಗ್ರೆ ಮಾವಿನಕಟ್ಟೆ ಭಾಗದಲ್ಲಿ ರಾ.ಹೆ.66ರಲ್ಲಿ ಲಿಂಕ್ ರೋಡ್ ನಿರ್ಮಾಣಕ್ಕೆ ಆಗ್ರಹಿಸಿ ಆ ಭಾಗದ ಗ್ರಾಮಸ್ಥರು ಇಲ್ಲಿನ ಸಹಾಯಕ ಆಯುಕ್ತರಿಗೆ ಮನವಿ ಅರ್ಪಿಸಿದರು. 

ಹೆದ್ದಾರಿ 66ಕ್ಕೆ ಹೊಂದಿಕೊಂಡಂತೆ ಈ ಭಾಗದಲ್ಲಿ ಸುಮಾರು 8000ಕ್ಕೆ ಅಧಿಕ ಜನರು ವಾಸಿಸುತ್ತಿದ್ದು ನಿತ್ಯದ ಕೆಲಸ ಕಾರ್ಯಗಳಿಗಾಗಿ ಸಾರ್ವಜನಿಕರು, ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ದಿನವೂ ಸಂಚರಿಸುತ್ತಿದ್ದು ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಲಿಂಕ್ ರೋಡ್ ನಿರ್ಮಾಣದಿಂದ ಇಲ್ಲಿನ ಜನರಿಗೆ ಸೌಕರ್ಯ ಕಲ್ಪಿಸಿದಂತಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. 

ಈ ಭಾಗದಲ್ಲಿ  ಬಸ್ ನಿಲ್ದಾಣ, ಚರಂಡಿ ವ್ಯವಸ್ಥೆಯೂ ಇಲ್ಲದೆ ವಾಹನಗಳು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನುಗ್ಗುತ್ತಿದ್ದು ಜನಸಾಮನ್ಯರು ಕಷ್ಟವನ್ನು ಪಡುವಂತಾಗಿದೆ. ನೂತನ ಹೆದ್ದಾರಿ ಕಾಮಗಾರಿ ಆರಂಭಗೊಂಡ ನಂತರ ಈ ಭಾಗದಲ್ಲಿ ಮತ್ತಷ್ಟು ಸಮಸ್ಯೆಗಳು ತಲೆದೂರುತ್ತಿವೆ. ಮಾವಿನಕಟ್ಟೆ ಪ್ರದೇಶವು ಈ ಭಾಗದ ಜನರ ಸರ್ಕಲ್ ಆಗಿದ್ದು ಈಗ ಕ್ರಾಸಿಂಗ್ ರಸ್ತೆ ಇಲ್ಲದ ಕಾರಣ ಜನರು ರಸ್ತೆಯನ್ನು ದಾಟಲು ಪರದಾಡುವಂತಾಗಿದೆ. ಹದ್ದಾರಿಯ ಇಕ್ಕೆಲಗಳಲ್ಲಿ ಸಾಕಷ್ಟು ಕೃಷಿ ಭೂಮಿಯನ್ನು ಮಾಡಿಕೊಂಡಿದ್ದು ರೈತರಿಗೆ ಹೆದ್ದಾರಿಯಿಂದಾಗಿ ತೊಂದರೆಯಾಗುತ್ತಿದೆ. ಲಿಂಕ್ ರೋಡ್ ನಿರ್ಮಾಣದಿಂದಾಗಿ ಎಲ್ಲ ರೀತಿಯ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಟ್ಟಂತಾಗುತ್ತದೆ ಎಂದು ಮನವಿಪತ್ರದಲ್ಲಿ ವಿನಂತಿಸಿಕೊಳ್ಳಲಾಗಿದೆ. 

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ವಿಷ್ಣು ದೇವಾಡಿಗ, ಅನಂತ್ ನಾಯ್ಕ, ಗಣಪತಿ ನಾಯ್ಕ, ಅಣ್ಣಪ್ಪ ದೇವಾಡಿಗ, ಪುಂಡಲಿಕ ನಾಯ್ಕ, ಸದಾನಂದ ನಾಯ್ಕ ಸೇರಿದಂತೆ ಗ್ರಾಮಸ್ಥರು ಉಪಸ್ತಿತರಿದ್ದರು. 
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...