ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕರೆ

Source: sonews | By Staff Correspondent | Published on 28th August 2018, 12:08 AM | Coastal News | Sports News | Don't Miss |

ಭಟ್ಕಳ:  ವಿದ್ಯಾರ್ಥಿಗಳು  ಪಟ್ಯಪುಸ್ತಕದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿದ್ದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ  ಎಂ.ಆರ್. ಮುಂಜಿ ಹೇಳಿದರು. 

ಅವರು ಸೋಮವಾರ ಸಾಗರ ರಸ್ತೆಯ ಶ್ರೀ ಗುರುಸುದೀಂದ್ರ ಕಾಲೇಜಿನ ಮೈದಾನದಲ್ಲಿ ನಡೆದ ಭಟ್ಕಳ ವಲಯ ಮಟ್ಟದ ಪೌಢ ಶಾಲೆಗಳ ಇಲಾಖಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ವ್ಯಾಯಾಮ, ಕ್ರೀಡಾ ಚಟುವಟಿಕೆಗಳಂತಹ ಪಠ್ಯೇತರ ಚಟುವಟಿಕೆಗಳು ಅತಿ ಅವಶ್ಯಕ ಎಂಬುದನ್ನು ಮನಗಂಡು   ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಮೂಲಕ ರಾಜ್ಯದೆಲ್ಲಡೆ ಶಾಲಾ, ವಲಯ, ತಾಲೂಕು, ರಾಜ್ಯ ಹಾಗೂ ರಾಷ್ಟ್ರ ಮಟ್ಟದ  ಕ್ರೀಡಾಕೂಟವನ್ನು ನಡೆಸುತ್ತಿದ್ದು ವಿದ್ಯಾರ್ಥಿಗಳು ಇಂತಹ ಕ್ರೀಡಾಕೂಟದಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ. ಇದು ಅವರ ಕಲಿಕೆಗೆ ಸಹಾಯವಾಗುತ್ತದೆ ಎಂದರು. ಈ ಕೂಟದಲ್ಲಿ ಭಾಗವಹಿಸಿದಂತಹ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ  ಸಾಧನೆ ಮಾಡುವಂತಾಗಬೇಕು ಎಂದರು.
 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ   ಅರ್ಬನ್ ಬ್ಯಾಂಕ ನಿರ್ದೇಶಕ ಶ್ರೀಧರ ನಾಯ್ಕï, ವಿದ್ಯಾರ್ಥಿಗಳು ಕೇವಲ ಪುಸ್ತಕದಲ್ಲಿ   ಮಗ್ನರಾಗದೇ ತಮ್ಮ ದೈಹಿಕ ಬೆಳವಣಿಗೆಗೆ ಸಹಾಯಕವಾಗುವಂತಹ ಕ್ರೀಡೆಯಲ್ಲಿ ತೊಡಗಿಕೊಂಡು ಚುಟುವಟಿಕೆ ಯಿಂದ ಇರಬೇಕು .ಇದು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಸಹಾಯವಾಗುತ್ತದೆ  ಈ ಕೀಡೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕ್ರೀಡಾಮನೋಭಾವನೆಯಿಂದ ಸ್ಪರ್ಧಿಸಿ  ಊರಿಗೆ ಹಾಗೂ ತಾವು ಕಲಿತ ಶಾಲೆಗೆ ಹೆಸರು ತರುವಂತಾಗಬೇಕು ಎಂದರು. 

ವೇದಿಕೆಯಲ್ಲಿ  ಕ್ಷೇತ್ರ ಸಂಪನ್ಮೂಲ ಅಧಿಕಾರಿ  ಯಲ್ಲಮ್ಮ,   ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮನಮೋಹನ ನಾಯ್ಕ, ಮುಖ್ಯೋಪಾಧ್ಯಾಯ  ವಿನಾಯಕ  ಔದಾನಿ, ಶಾಲಾಭಿವೃದ್ದಿ ಸಮಿತಿಯ  ವೆಂಕಟೇಶ ನಾಯ್ಕ, ಶ್ರೀಧರ ನಾಯ್ಕ ಹುರುಳಿಸಾಲ್, ಸುಕ್ರಪ್ಪ ನಾಯ್ಕ, ಪ್ರಕಾಶ ನಾಯ್ಕ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಕಾಂತ ನಾಯಕ, ಗೀತಾ ನಾಯ್ಕ, ಅನಿತಾ ಪಾಲನಕರ ಮತ್ತಿತರರು ಉಪಸ್ಥಿತರಿದ್ದರು. 

ಪ್ರಾರಂಭದಲ್ಲಿ  ಕುಮಾರಿ ಸುಧಾ ಸಂಗಡಿಕರು ಪ್ರಾರ್ಥನೆ ಹಾಡಿದರು.ಸೋನಾರಕೇರಿ ಪೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಮ್‍ಷಾದ್ ಬೇಗಂ ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕ ಮಂಜುನಾಥ್ ನಾಯ್ಕ ಕÁರ್ಯಕ್ರಮ ನಿವರೂಪಿಸಿದರು.  ಶಿಕ್ಷಕಿ ಸವಿತಾ ನಾಯ್ಕ ವಂದನಾರ್ಪಣೆ ಸಲ್ಲಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...