ಭಟ್ಕಳ: ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಭಟ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಪಾಲರಿಗೆ ಮನವಿ

Source: sonews | By MV Bhatkal | Published on 1st September 2021, 7:34 PM | Coastal News | Don't Miss |

ಭಟ್ಕಳ: ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಭಟ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ(ಸೆ.1) ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ ಅವರ ಮೂಲಕ ರಾಜ್ಯಪಾಲ ಥಾವರ್ ಚಂದ ಗೇಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಮಹಿಳೆಯರು, ಮಕ್ಕಳು ಧೈರ್ಯದಿಂದ ತಿರುಗಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ ಕಾರಣ ಜನರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ರಾಜ್ಯ ಗೃಹಮಂತ್ರಿಗಳು ಸೇರಿದಂತೆ ಸರ್ಕಾರದ ಅನೇಕ ಮಂತ್ರಿಗಳು ಮಹಿಳೆಯರ ಬಗ್ಗೆ ನಿರ್ಲಕ್ಷ್ಯದ ಭಾವನೆಯನ್ನು ಹೊಂದಿದ್ದು, ಮನಬಂದಂತೆ ಉಡಾಫೆ ಹೇಳಿಕೆ ನೀಡುತ್ತಿದ್ದಾರೆ.

ಮೈಸೂರಿನಲ್ಲಿ ಅತ್ಯಾಚ್ಯಾರ ಎಸಗಿದ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಹಾಗೂ ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆದೇಶಿಸುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.

ಭಟ್ಕಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಜಯಲಕ್ಷ್ಮೀ ಗೊಂಡ, ಮಾಜಿ ಜಿ.ಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್, ತಾ.ಪಂ. ಉಪಾಧ್ಯಕ್ಷೆ ರಾಧಾ ವೈದ್ಯ, ಶಮೀಮ್ ಬಾನು ಇದ್ದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...