ನಮ್ಮ ಸಂವಿಧಾನ ಹಕ್ಕುಗಳೊಂದಿಗೆ ಕರ್ತವ್ಯವನ್ನು ತಿಳಿಸುತ್ತದೆ-ಮಮತಾ ದೇವಿ ಜಿ.ಎಸ್

Source: SOnews | By Staff Correspondent | Published on 26th January 2023, 2:13 PM | Coastal News | Don't Miss |

ಭಟ್ಕಳ: ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಟ ಸಂವಿಧಾನ ನಮ್ಮದು. ಇದು ನಾಗರೀಕರ ಹಕ್ಕುಗಳೇನು ಎನ್ನುವುದರ ಜೊತೆಗೆ ನಾಗರೀಕರ ಕರ್ತವ್ಯವನ್ನೂ ಹೇಳಿಕೊಡುತ್ತದೆ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಹೇಳಿದರು. 

ಅವರು ಗುರುವಾರ ಇಲ್ಲಿನ ತಾಲೂಕು ಕ್ರಿಡಾಂಗಣದಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು. 

ರಾಷ್ಟç ನಿರ್ಮಾಣದಲ್ಲಿ ನಮ್ಮ ಪಾತ್ರವೇನು? ಎಂಬುದರ ಕುರಿತಂತೆ ಇಂದು ನಾವೂ ಆಲೋಚನೆಯನ್ನು ಮಾಡಬೇಕಾಗಿದೆ. ಸಂವಿಧಾನದ ಆದರ್ಶ, ಮೌಲ್ಯ ಹಾಗೂ ಆಶಯಗಳನ್ನು ಎತ್ತಿ ಹಿಡಿಯುವ ಕಾರ್ಯ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ಮಮತಾ ದೇವಿ ಕರೆ ನೀಡಿದರು. 

ಶಾಸಕ ಸುನಿಲ್ ನಾಯ್ಕ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಶ್ಚಿಮ ಘಟ್ಟ ಸರಂಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿದರು. 

ತಹಸಿಲ್ದಾರ್ ಅಶೋಕ್ ಭಟ್ ಸ್ವಾಗತಿ ಪ್ರಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶ್ರೀಧರ್ ಶೇಟ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ರವೀಂದ್ರ ನಾಯ್ಕ ಧನ್ಯವಾದ ಅರ್ಪಿಸಿದರು. 

ಭಟ್ಕಳ ಪುರಸಭೆ ಅಧ್ಯಕ್ಷ ಪರ್ವೇಝ್ ಕಾಶಿಮಜಿ, ಭಟ್ಕಳ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ನಾಯ್ಕ, ಪೊಲೀಸ್ ಅಧೀಕ್ಷಕ ಶ್ರೀಕಾಂತ್, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಪ್ರಭಾಕರ್ ಚಿಕ್ಕನಮನೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ಸ್ಮರಣಿಕೆ ಮತ್ತು ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಕವಾಯತು, ಮನೋರಂಜನಾ ಕಾರ್ಯಕ್ರಮ ನಡೆಯಿತು. 

 
ಹಾಸು ಇಲ್ಲದೆ ನೆಲದ ಮೇಲೆ ಬರಿಗಾಲಲ್ಲಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಸಾರ್ವಜನಿಕರಿಂದ ಅಸಮಧಾನ

ಗುರುವಾರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳು ಮನೋರಂಜನಾ ಕಾರ್ಯಕ್ರಮ ನೀಡಿದ್ದು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತಿವಾಯಿತು. ಆದರೆ ವಿದ್ಯಾರ್ಥಿಗಳು ಉರಿಬಿಸಿಲಿನಲ್ಲಿ ನೆಲ ಹಾಸು ಇಲ್ಲದೆ ಬರಿಗಾಲಿನಲ್ಲಿ ನೃತ್ಯ, ಪಿರಾಮಿಡ್ ಮತ್ತಿತರ ಕಸರತ್ತು ಪ್ರದರ್ಶನ ಮಾಡಿದ್ದು ತಾಲೂಕಾಡಳಿತವು ನೆಲಹಾಸು ವ್ಯವಸ್ಥೆ ಮಾಡುವಲ್ಲಿ ನಿರ್ಲಕ್ಷ÷್ಯ ತಾಳಿದೆ ಎಂದು ಕಾರ್ಯಕ್ರಮ ವೀಕ್ಷಿಸುತ್ತಿದ್ದ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದರು. ಸುಮಾರು ೨ಗಂಟೆ ನಡೆದ ಮನೋರಂಜನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನೆಲದ ಮೇಲೆಯೇ ಪ್ರದರ್ಶನ ನೀಡಿದರು. ಕೆಲವೊಂದ ನೃತ್ಯಗಳು ನೆಲದ ಮೇಲೆ ಮಲಗಿಕೊಂಡು ಮಾಡಿದ್ದು ವಿದ್ಯಾರ್ಥಿಗಳ ಬಟ್ಟೆ, ದೇಹಕ್ಕೆ ಮಣ್ಣು ಮುತ್ತಿಕೊಂಡು ಅಂದಗೆಡಿಸಿತ್ತು. ಇದರಿಂದಾಗಿ ಕಾರ್ಯಕ್ರಮದಲ್ಲಿ ಹಾಜರಿದ್ದ ಪಾಲಕರು ಸೇರಿದಂತೆ ಸಾರ್ವಜನಿಕರು ಮಾಧ್ಯಮಗಳ ಮುಂದೆ ತಾಲೂಕಾಡಳಿತದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು. 
 

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...