ಡಾ.ಟಿ.ಎಂ.ಪಿ.ರಾಜ್‍ಕುಮಾರ್ ವಿಟಿಯು ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿ ನಾಮನಿರ್ದೇಶನ 

Source: sonews | By Staff Correspondent | Published on 26th August 2019, 11:22 PM | Coastal News |

ಭಟ್ಕಳ: ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಟಿ.ಎಂ.ಪಿ.ರಾಜ್‍ಕುಮಾರ್ ಅವರು ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ (ಇಸಿಇ) ಮತ್ತು ದೂರಸಂಪರ್ಕ ಎಂಜಿನಿಯರಿಂಗ್ (ಟಿಇ) ಯಲ್ಲಿ ಅಧ್ಯಯನ ಮಂಡಳಿ (ಬೋರ್ಡ್ ಆಫ್ ಸ್ಟಡೀಸ್) ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ. 

ಪಠ್ಯಕ್ರಮದ ಚೌಕಟ್ಟು ಮತ್ತು ಪರಿಷ್ಕರಣೆ ಸೇರಿದಂತೆ ವಿಶ್ವವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳಿಗೆ ಅಧ್ಯಯನ ಮಂಡಳಿ ಜವಾಬ್ದಾರವಾಗಿರುತ್ತದೆ.

ಡಾ. ಟಿ. ಎಂ. ಪಿ. ರಾಜ್‍ಕುಮಾರ್ 1989 ರಿಂದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‍ಮೆಂಟ್‍ನಲ್ಲಿ ಹಿರಿಂiÀi ಪ್ರಾಧ್ಯಾಪಕರಾಗಿ ಸೇವೆಸಲ್ಲಿಸುತ್ತಿದ್ದಾರೆ. 

ಈ ಮಾನ್ಯತೆಗಾಗಿ ಆಡಳಿತ ಮಂಡಳಿಯ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಮ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅವರನ್ನು  ಅಭಿನಂದಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...