ನಿಷಾತ್ ನರ್ಸಿಂಗ್ ಹೋಂ ನ ಖ್ಯಾತ ವೈದ್ಯ ಡಾ.ಜಲಾಲುದ್ದೀನ್ ನಿಧನ

Source: sonews | By Staff Correspondent | Published on 17th December 2020, 6:04 PM | Coastal News | National News | Don't Miss |

ಭಟ್ಕಳ: ನಗರದ ಖ್ಯಾತ ವೈದ್ಯ, ಹಾಗೂ ಇಲ್ಲಿನ ಪ್ರತಿಷ್ಟಿತ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿದ್ದ ಡಾ.ಜಲಾಲುದ್ದೀನ್ (೮೫) ಗುರುವಾರ ಬೆಳಿಗ್ಗೆ ನಿಧನರಾದರು.ಇವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ೪ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗನ್ನು ಅಗಲಿದ್ದಾರೆ.

ಕಳೆದ ೫೩ ವರ್ಷಗಳ ಸುದೀರ್ಘ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಇವರು ಭಟ್ಕಳ ತಾಲೂಕಿನ ಜನಪ್ರೀಯ ವ್ಯಕ್ತಿಯಾಗಿದ್ದರು. ಭಟ್ಕಳ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಸೇವೆ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ ಇವರು ನಂತರ ಸರ್ಕಾರಿ ಹುದ್ದೆಯನ್ನು ತ್ಯಜಿಸಿ ತಮ್ಮದೆ ಸ್ವಂತ ಕ್ಲಿನಿಕ್ ಸ್ಥಾಪಿಸಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡರು. ನಂತರ ರಾ.ಹೆ. ೬೬ರಲ್ಲಿ ನಿಷಾತ್ ನರ್ಸಿಂಗ್ ಹೋಂ ಸ್ಥಾಪಿಸಿ ತಮ್ಮ ಸೇವಾ ಕಾರ್ಯವನ್ನು ವಿಸ್ತರಿಸಿಕೊಂಡಿದ್ದರು. ಭಟ್ಕಳ ವೈದ್ಯಕೀಯ ಸಂಘದ ಅಧ್ಯಕ್ಷರಾಗಿಯೂ ಇವರು ಹಲವು ವರ್ಷಗಳ ಕಾಲ ಸೇವೆಸಲ್ಲಿದ್ದಾರೆ. ಇವರ ಇಬ್ಬರು ಪುತ್ರರು ವ್ಯದ್ಯರಾಗಿದ್ದು  ಡಾ.ಸಮಿಯುಲ್ಲಾ ನಿಷಾತ್ ನರ್ಸಿಂಗ್ ಹೋಂ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದ್ದಾರೆ. 

ಗುರುವಾರ  ಜಾಮೀಯಾ ಮಸೀದಿಯಲ್ಲಿ ಝೋಹರ್ ನಮಾಝ್ ಬಳಿಕ ಜನಾಝಾ ನಮಾಜ್ ನಿರ್ವಹಿಸಿದ್ದು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು ನಂತರ ಪ್ರಾಚೀನ ಖಬರಸ್ತಾನದಲ್ಲಿ ಇವರ ಅಂತ್ಯಕ್ರಿಯೆ ನೆರವೇರಿಸಲಾಯಿತು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...