ಭಟ್ಕಳದ ಮೀನುಗಾರ ಚಂದ್ರಶೇಖರ್ ಚಿಕಿತ್ಸೆಗೆ ಸ್ಪಂದಿಸದೆ ಸಾವು

Source: so news | By MV Bhatkal | Published on 17th May 2019, 1:24 AM | Coastal News | Don't Miss |

ಭಟ್ಕಳ: ಮೂರು ದಿನಗಳಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಭಟ್ಕಳದ ಮೀನುಗಾರ ಚಂದ್ರಶೇಖರ್ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ್ ಅವರು ಸುವರ್ಣ ತ್ರಿಭುಜ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ರಮೇಶ್ ಅವರ ಸಹೋದರ.
ಸುವರ್ಣ ತ್ರಿಭುಜ ಭೋಟ್‌ ನಾಪತ್ತೆಯಾದ ಬಳಿಕ ಚಂದ್ರಶೇಖರ್ ಮಾನಸಿಕ ಖಿನ್ನತೆಗೆ ಜಾರಿದ್ದರು. ಮೀನುಗಾರಿಕೆಗೆ ತೆರಳುವುದನ್ನು ಬಿಟ್ಟು ಒಂಟಿಯಾಗಿ ಅಲೆಯುತ್ತಿದ್ದರು. ಈಚೆಗೆ ಸುವರ್ಣ ತ್ರಿಭುಜ ಬೋಟ್ ಅವಶೇಷಗಳು ಪತ್ತೆಯಾದ ಬಳಿಕ ತೀವ್ರ ಮನನೊಂದು ಇಲಿ ಪಾಶಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಹೆಚ್ಚಿನ ಚಿಕಿತ್ಸೆಗೆ ಸೋಮವಾರ ರಾತ್ರಿ ಚಂದ್ರಶೇಖರ್ ಅವರನ್ನು ಭಟ್ಕಳದಿಂದ ಉಡುಪಿಗೆ  ಸಾಗಿಸಲಾಗಿತ್ತು. ವಿಷ ದೇಹಕ್ಕೆ ವ್ಯಾಪಿಸಿ ಲಿವರ್ ವೈಫಲ್ಯವಾಗಿತ್ತು. ಕಿಡ್ನಿಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲ. ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಶೇಖರ್ ಗುರುವಾರ ಅಸುನೀಗಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...