ಮೇ ೧೫ರಿಂದ ೩೦ ವರೆಗೆ ಎಜೆ ಆಸ್ಪತ್ರೆಯಲ್ಲಿ ಕಿಡ್ನಿ ಕಾಯಿಲೆ ಉಚಿತ ತಪಾಸಣೆ

Source: S O News service | By Staff Correspondent | Published on 13th May 2017, 4:30 PM | Coastal News | State News | Don't Miss |

ಭಟ್ಕಳ: ಮಂಗಳೂರು ಎಜೆ ಆಸ್ಪತ್ರೆಯು ಮೇ.೧೫ ರಿಂದ ೩೦ರ ತನಕ  ಉಚಿತ ಮೂತ್ರಪಿಂಡ(ಕಿಡ್ನಿ) ತಪಾಸಣಾ ಶಿಬಿರವನ್ನು ಆಯೋಜಿಸಿದೆ ಎಂದು ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೆಜರ್ ಶಿವಪ್ರಸಾದ್ ಶೆಟ್ಟಿ ತಿಳಿಸಿದರು. 
ಅವರು ಶನಿವಾರ ಇಲ್ಲಿನ ಹೊಟೇಲ್ ರಾಯಲ್ ಓಕ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದರು. 
ಎಜೆ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರವು ಕಳೆದ ಹಲವು ವರ್ಷಗಳಿಂದ ಅನೇಕ ಆರೋಗ್ಯ ತಪಾಸಣಾ ಶಿಬಿರಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸುತ್ತ ಬಂದಿದ್ದು ಸಾವಿರಾರು ರೋಗಿಗಳು ಇದರಿಂದ ಪ್ರಯೋಜನ ಪಡೆದುಕೊಂಡಿದ್ದಾರೆ. ಇ ನಿಟ್ಟಿನಲ್ಲಿ ಕಿಡ್ನಿ ತಪಾಸಣಾ ಶಿಬಿರದ ಪ್ರಯೋಜವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. ಶಿಬಿರದಲ್ಲಿ, ಮೂತ್ರಪಿಂಡದಲ್ಲಿ ಕಲ್ಲು, ಪ್ರೋಸ್ಟೇಟ್ ಗ್ರಂಥಿ ಸಂಬಂಧಿ ತೊಂದರೆ, ಮೂತ್ರಪಿಂಡ ವೈಫಲ್ಯತೆ ಹಾಗೂ ಮೂತ್ರಪಿಂಡಕ್ಕೆ ಸಂಬಂಧಿಸಿದ ವಿವಿಧ ತೊಂದರೆಗಳಿಗೆ ಉಚಿತವಾಗಿ ತಪಾಸಣೆ ಮಾಡುತ್ತಿದ್ದು ಚಿಕತ್ಸೆಯನ್ನು ಅತ್ಯಂತ ಕಡಿಮೆ ದರದಲ್ಲಿ ಮಾಡಲಾಗುವುದು, ಮೂತ್ರಪಿಂಡ ಕಸಿ ಅಗತ್ಯವಿದ್ದಲ್ಲಿ ಕಾನೂನುಬದ್ದವಾಗಿ ರೀಯಾಯಿತಿ ದರದಲ್ಲಿ ಮೂತ್ರಪಿಂಡ ಕಸಿಯನ್ನು ಮಡಲಾಗುವುದು ಎಂದು ಅವರು ತಿಳಿಸಿದರು. 
ಶಿಬರದಲ್ಲಿ ಬಾಗವಹಿಸಲು ತಮ್ಮ ಹೆಸರನ್ನು ಮುಂಚಿತವಾಗಿ ನೊಂದಾಯಿಸಕೊಳ್ಳಬೇಕಾಗಿದ್ದು ವಿವರಗಳಿಗೆ ೦೮೨೪-೬೬೧೩೨೫೨ ಅಥವಾ ೮೪೯೪೮೯೦೬೦೦ ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. 
ಈ ಸಂದರ್ಭದಲ್ಲಿ ಮುಹಮ್ಮದ್ ಅಶ್ರಫ್ ಸಾದಾ ಹಾಗೂ ಸಮಾಜ ಸೇವಕ ನಝೀರ್ ಕಾಶಮಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...