ಭಟ್ಕಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯಿಂದ ಕೊಲೆ ಬೆದರಿಕೆ:ದೂರು ದಾಖಲು

Source: so news | By MV Bhatkal | Published on 28th March 2023, 12:44 AM | Coastal News | Don't Miss |

ಭಟ್ಕಳ: ತಾಲೂಕಿನ ಆರೋಗ್ಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ  ಮೇಲೆ ಸ್ಥಳೀಯ ಯುವಕನೊರ್ವ ಅವಾಚ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಅಲ್ಲಿಂದ ಪರಾರಿಯಾದ ಘಟನೆ  ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಪಟ್ಟಣದ ಹನುಮಾನನಗರ ನಿವಾಸಿ ಸಂಜಯ ಯಶೋಧರ ಪೂಜಾರಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಮೇಲೆ ಹಲ್ಲೆ ನಡೆಸಿದ ಆರೋಪಿ. ಭಾನುವಾರ ಮದ್ಯಾಹ್ನ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅಪಘಾತಗೊಂಡ ವ್ಯಕ್ತಿಯೊರ್ವ ಚಿಕಿತ್ಸೆಗಾಗಿ ಆಗಮಿಸಿದ್ದ. ಅವನ ಚಿಕಿತ್ಸೆ ಪೂರ್ಣಂಡಿದ್ದು ಅವನನ್ನು ಶೂಷ್ರೂಷಕಿಯರು ಆರೈಕೆ ಮಾಡುತ್ತಿದ್ದರು. ಅಷ್ಟರಲ್ಲಿ ಆಸ್ಪತ್ರೆಗೆ ಬಂದ ಆರೋಪಿ ಮೊದಲು ಒಔಷಧಿ ವಿತರಣೆ ಮಾಡುವ ಯುವತಿ ಮೇಲೆ ಏರಿದ್ದಾನೆ. ಬಳಿಕ ಒಳಗೆ ನುಗ್ಗಿ ಶೂಷ್ರೂಷಕಿಯನ್ನು ನಿಂದಿಸಿ ಹಲ್ಲೆಗೆ ಮುಂದಾಗಿದ್ದ. ಅದನ್ನು ಕೇಳಿದ ವೈದ್ಯ ಡಾ. ಲಕ್ಷಿö್ಮÃಶ ನಾಯ್ಕ ಮೇಲೂ ಹಲ್ಲೆ ನಡೆಸಲೂ ಯತ್ನಿಸಿ ಆಸ್ಪತ್ರೆಯಲ್ಲಿ ಬೀತಿಯ ವಾತವರಣವನ್ನೆ ನಿರ್ಮಿಸಿದ್ದ. ಬಳಿಕ ಅಲ್ಲಿದ್ದ್ ಸಿಬ್ಬಂದ ತಾಲೂಕು ಆರೋಗ್ಯ ವೈದ್ಯಾಧಿಕಾರಿಯಾಗಿರುವ ಡಾ. ಸವಿತಾ ಕಾಮತ ಅವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಡಾ. ಸವಿತಾ ಕಾಮತ ಅವರ ಮೇಲೆ ಏರಗು ಹೋಗಿ ಕೊಲೆ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದರಿಂದ ಆಸ್ಪತ್ರೆಯ ಆವರಣದಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಯಾಗಿದ್ದು ರೋಗಿಗಳಿಗೂ ತೊಂದರೆ ಅನುಭವಿಸಿದರು. ಇವೆಲ್ಲಾ ಘಟನೆಗಳು ಆಸ್ಪತ್ರೆಯ ಸಿಸಿಟಿವಿಯಲ್ಲಿ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...