ಭಟ್ಕಳ: ಜಾಲಿ ಪಟ್ಟಣ ಪಂಚಾಯ್ತಿ ಚುನಾವಣೆ ಡಿ.27ರಂದು

Source: S O News | By I.G. Bhatkali | Published on 30th November 2021, 9:44 AM | Coastal News | Don't Miss |

ಭಟ್ಕಳ: ತಾಲ್ಲೂಕಿನ ಜಾಲಿ ಪಟ್ಟಣ ಪಂಚಾಯಿತಿಯ ಎಲ್ಲ 20 ವಾರ್ಡ್‌ಗಳಿಗೆ ಡಿ.27ರಂದು ಚುನಾವಣೆ ನಡೆಯಲಿದೆ. ದಾಂಡೇಲಿ, ನಗರಸಭೆಯ 18ನೇ ವಾರ್ಡ್‌ಗೆ ಉಪ ಚುನಾವಣೆಯೂ ಅಂದೇ ನಿಗದಿಯಾಗಿದೆ. ಡಿ.30ರಂದು ಮತ ಎಣಿಕೆ ಮಾಡಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗವು ಸೋಮವಾರ ಪ್ರಕಟಣೆ ಹೊರಡಿಸಿದೆ.

ಪ್ರತಿಷ್ಠಿತ ಕನ್ನಡ ಪತ್ರಿಕೆ ಪ್ರಜಾವಾಣಿಯಲ್ಲಿ ಪ್ರಕಟವಾದ ವರದಿಯ ಪ್ರಕಾರ ಚುನಾವಣೆಯ ಸಂಬಂಧ ಜಿಲ್ಲಾಧಿಕಾರಿ ಡಿ.8ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಡಿ.15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.16ರಂದು ಉಮೇದುವಾರಿಕೆ ಪರಿಶೀಲನೆ ನಡೆಯಲಿದೆ. 18ರೊಳಗೆ ನಾಮಪತ್ರ ಹಿಂಪಡೆಯಬಹುದು. ಡಿ.27ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ಹಮ್ಮಿಕೊಳ್ಳಲಾಗುವುದು. ಮತ ಎಣಿಕೆಯನ್ನು ಆಯಾ ತಾಲ್ಲೂಕು ಕೇಂದ್ರದಲ್ಲಿ ಮಾಡಲಾಗುವುದು.

ವರದಿಯ ಪ್ರಕಾರ ಜಾಲಿ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿ ಹಾಗೂ ದಾಂಡೇಲಿಯ 18ನೇ  ವಾರ್ಡ್ ವ್ಯಾಪ್ತಿಯಲ್ಲಿ ಡಿ.8ರಿಂದ 30ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ಆಯೋಗವು ತಿಳಿಸಿದೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...