ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಇನಾಯತುಲ್ಲಾ ಶಾಂಬಂದ್ರಿ ಸೂಕ್ತ ಅಭ್ಯರ್ಥಿ: ಜೆಡಿ‌ಎಸ್ ವೀಕ್ಷಕರ ಅಭಿಮತ

Source: sonews | By Staff Correspondent | Published on 25th May 2017, 6:57 PM | Coastal News | State News | Don't Miss |

ಭಟ್ಕಳ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಬಾರಿ ಅತಿ ಕಡಿಮೆ ಅಂತರದಿಂದ ಎರಡನೇ ಸ್ಥಾನದಲ್ಲಿ ಇನಾಯತುಲ್ಲಾ ಶಾಬಂದ್ರಿಯೇ ಮುಂದಿನ ಚುನಾವಣೆಗೆ ಸೂಕ್ತ ಅಭ್ಯರ್ಥಿ ಎಂದು ಜೆ.ಡಿ.ಎಸ್. ವೀಕ್ಷಕ ವಿಧಾನಪರಿಷತ್ ಉಪಸಭಾಪತಿ ಮರಿತಿಪ್ಪೆಗೌಡ ಹೇಳಿದರು. 

ಅವರು ಬುಧವಾರ ಸಂಜೆ ಇಲ್ಲಿನ ಖಾಸಗಿ ಹೋಟೇಲ್ ನಲ್ಲಿ ಕಾರ್ಯಕರ್ತರ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. 

ಉತ್ತರಕನ್ನಡ ಜಿಲ್ಲೆಯ ಆರು ಕ್ಷೇತ್ರಗಳಿಗೆ ಜೆಡಿ‌ಎಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದು ಕನಿಷ್ಠ ನಾಲ್ಕು ಕ್ಷೇತ್ರದಲ್ಲಿ ಗೆಲುವು ಸಾಧಿಸಬಲ್ಲದು ಎಂದ ಅವರು ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಜೆ.ಡಿ.ಎಸ್. ಮುಖಂಡ ಇನಾಯತುಲ್ಲಾ ಶಾಬಂದ್ರಿಯೇ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಅಭಿಪ್ರಾಯಿಸಿದರು. 
ಉತ್ತರಕನ್ನಡ ಜಿಲ್ಲೆಯಲ್ಲಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ್ ಸ್ವಾಮಿಯವರ ಅಪಾರ ಅಭಿಮಾನಿಗಳು, ಕಾರ್ಯಕರ್ತರಿದ್ದು ಈ ಜಿಲ್ಲೆ ನಾಯಕತ್ವದ ಕೊರತೆಯನ್ನು ಅನುಭವಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಭಟ್ಕಳದಲ್ಲಿ ಗೆಲ್ಲುವ ಅಭ್ಯರ್ಥಿ ಇನಾಯತುಲ್ಲಾ ಶಾಬಂದ್ರಿಯವರ ಸೋಲಿಗೆ ಜೆ.ಡಿ.ಎಸ್ ಮುಖಂಡರ ನಿಷ್ಕಾಳಜಿಯೆ ಕಾರಣವಾಗಿದೆ ಎಂದು ಒಪ್ಪಿಕೊಂಡ ಅವರು, ಈ ಬಾರಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಉತ್ತರಕನ್ನಡ ಜಿಲ್ಲೆಯನ್ನು ಕೇಂದ್ರವಾಗಿಟ್ಟುಕೊಂಡು ಚುನಾವಣೆಯನ್ನು ಎದುರಿಸಲಿದ್ದಾರೆ. ಇದಕ್ಕಾಗಿ ಈಗಿಂದಲೆ ಸಕಲ ಸಿದ್ದತೆಗಳನ್ನು ನಡೆಸುತ್ತಿದ್ದು ಜೂನ್ ತಿಂಗಳ ಅಂತ್ಯದೊಳಗೆ ಸುಮಾರು ೨೦ ರಿಂದ ೨೪ ಸಾವಿರ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು, ಬೂತ್ ಮಟ್ಟದಿಂದ ಗ್ರಾಮ, ತಾಲೂಕು, ಜಿಲ್ಲಾ, ವಾರ್ಡುವಾರು ಪದಾಧಿಕಾರಿಗಳನ್ನು ನೇಮಿಸಿ ಪ್ರತಿ ಮನೆಗೆ ಭೇಟಿ ನೀಡುವುದರ ಮೂಲಕ ಮತದಾರರನ್ನು ಸೆಳೆಯುವ ತಂತ್ರವನ್ನು ರೂಪಿಸಲಾಗುವುದು ಎಂದರು. 

ಪ್ರಾದೇಶಿಕ ಪಕ್ಷಗಳಿಗೆ ದಕ್ಷಿಣ ಭಾರತದಲ್ಲಿ ಭಾರಿ ಬೇಡಿಕೆಯಿದ್ದು ರಾಷ್ಟ್ರೀಯ ಪಕ್ಷಗಳ ರಾಜಕರಣದಿಂದ ಜನ ಬೇಸತ್ತಿದ್ದಾರೆ ಎಂದ ಅವರು ರಾಷ್ಟ್ರೀಯ ಪಕ್ಷಗಳು ಕೇವಲ ಹಗರಣಗಳಲ್ಲಿ ತಲ್ಲೀನರಾಗಿದ್ದು ಜನರ ಸಮಸ್ಯೆಗಳಿಗೆ ಕಿಂಚಿತ್ತೂ ಬೆಲೆ ನೀಡದೆ ಭ್ರಷ್ಟಚಾರದಲ್ಲಿ ಕಾಲಕಳೆಯುತ್ತಿವೆ ಎಂದು ಆರೋಪಿಸಿದರು. 

ಉತ್ತರಕನ್ನಡ ಜಿಲ್ಲೆಯ ಇಬ್ಬರು ಜೆ.ಡಿ.ಎಸ್. ಶಾಸಕರು ಪಕ್ಷವನ್ನು ತೊರೆದು ಬೇರೆ ಪಕ್ಷ ಸೇರಿದ್ದರ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಬಿಟ್ಟವರು ತಮ್ಮ ಶಾಸಕತ್ವವನ್ನು ಎಂಜಾಯ್ ಮಾಡಿದ್ದಾರೆ. ಪಕ್ಷದಿಂದ ಗರಿಷ್ಠಮಟ್ಟದ ಲಾಭಗಳಿಸಿಕೊಂಡ ಅವರು ಪಕ್ಷವನ್ನು ಬಿಟ್ಟಿದ್ದು ಅವರ ಮನಸಾಕ್ಷಿಯನ್ನು ತೋರಿಸುತ್ತದೆ. ಇದಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಜೆ.ಡಿ.ಎಸ್ ಸೇರುತ್ತಾರೆಂಬ ಪ್ರಶ್ನೆಗೆ, ಇದು ನಮ್ಮ ಗಮನಕ್ಕೆ ಬಂದಿಲ್ಲ. ಇದನ್ನು ಪಕ್ಷದ ಮುಖಂಡರು ನಿರ್ಣಯಿಸುತ್ತಾರೆ ಎಂದರು. 

ಈ ಸಂದರ್ಭದಲ್ಲಿ ಪಕ್ಷದ ವೀಕ್ಷಕರಾದ ಯೋಗೇಂದ್ರ, ಬಿ.ಆರ್. ನಾಯ್ಕ, ತ್ರೀವೇಣಿ ಆನಂದ ಗೌಡ, ಗಣಪಯ್ಯ ಗೌಡ, ಮುಖಂಡರಾದ ಇನಾಯತುಲ್ಲಾ ಶಾಬಂದ್ರಿ, ಎಂ.ಡಿ.ನಾಯ್ಕ, ಡಾ.ಫಾರೂಖ್, ರಾಜೇಶ್ವರಿ ಹೆಗಡೆ, ಜೆ.ಎನ್.ಗೌಡ ಮತ್ತಿತರರು ಉಪಸ್ಥಿತರಿದ್ದರು.

 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...