ಭಟ್ಕಳ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸರಕಾರಿ ಹಾಡಿ ಅತಿಕ್ರಮಣ ತೆರವು

Source: so news | Published on 1st August 2020, 1:29 AM | Coastal News | Don't Miss |

 

ಭಟ್ಕಳ:ತಾಲೂಕಿನ ಜಾಲಿಪಟ್ಟಣ ಪಂಚಾಯತ ವ್ಯಾಪ್ತಿಯ ವಿವಿದೆಡೆ ಸರಕಾರಿ ಹಾಡಿಯನ್ನು ಅತಿಕ್ರಮಿಸಿಕೊಂಡು ನಿರ್ಮಿಸಲಾದ ಮನೆ ಹಾಗೂ ಅಳವಡಿಸಲಾದ ತಂತಿ ಬೇಲಿಯನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿರುವ ಘಟನೆ ನಡೆದಿದೆ.
ಜಾಲಿ ಪಟ್ಟಣ ಪಂಚಾಯತ ಸರಕಾರಿ ಭೂಮಿ ಸರ್ವೇ ನಂಬರ್ 116ರಲ್ಲಿ ಮನೆಯನ್ನು ನಿರ್ಮಿಸಲಾಗಿದ್ದರೆ, ಸ.ನಂ.246ರಲ್ಲಿ ಮನೆಗೆ ಅಡಿಪಾಯ ತೆಗೆಯುವ ಪ್ರಯತ್ನ ನಡೆದಿತ್ತು. ಅಲ್ಲದೇ ಸರ್ವೇ ನಂಬರ್ 105ರಲ್ಲಿ ಸರಕಾರಿ ಭೂಮಿಯ ಸುತ್ತ ತಂತಿ ಬೇಲಿಯನ್ನು ಅಳವಡಿಸಿ ಜಾಗವನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆದಿತ್ತು. ಈ ಕುರಿತು ಬಂದ ದೂರುಗಳನ್ನು ಆಧರಿಸಿ ಸಹಾಯಕ ಆಯುಕ್ತ ಭರತ್ ಹಾಗೂ ತಹಸೀಲ್ದಾರ ಎಸ್.ರವಿಚಂದ್ರ, ಸದರಿ ಭೂಮಿ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪ್ರಭಾರ ಕಂದಾಯ ನಿರೀಕ್ಷಕ ವಿಶ್ವನಾಥ ಗಾಂವಕರ್, ಸಿಬ್ಬಂದಿಗಳೊಡನೆ ಸ್ಥಳಕ್ಕೆ ತೆರಳಿ ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಚಾರಣೆಗೆ ಚಾಲನೆ ನೀಡಿದರು. ಪದೇ ಪದೇ ಎಚ್ಚರಿಕೆ ನೀಡಿದರೂ ಸರಕಾರಿ ಭೂಮಿಯನ್ನು ಅತಿಕ್ರಮಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ, ತೆರವಿಗಾಗಿ ಇಲಾಖೆ ಸಾವಿರಾರು ರುಪಾಯಿಯನ್ನು ವ್ಯಯಿಸಬೇಕಾಗುತ್ತದೆ. ಇದು ಹೀಗೆಯೇ ಮುಂದುವರೆದರೆ ಅತಿಕ್ರಮಣದಾರರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಕಂದಾಯ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಜಾಲಿ ಗ್ರಾಮಲೆಕ್ಕಿಗ ಮನೋಜ್ 
ಗ್ರಾಮಸಹಾಯಕರು ಆದ ಮಾಸ್ತಯ್ಯ ನಾಯ್ಕ,ವಾಸು ಶೆಟ್ಟಿ 
ರೊಹೀದಾಸ ನಾಯ್ಕ,ಉದಯ ನಾಯ್ಕ,
ಮುಂತಾದವರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...