ಕುಮಟಾ ಶಾಸಕ ಪತ್ರಕರ್ತರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಭಟ್ಕಳ ಕಾರ್ಯನಿರತ ಪತ್ರಕರ್ತ ಸಂಘದಿಂದ ಮನವಿ

Source: so news | Published on 17th August 2020, 10:12 PM | Coastal News | Don't Miss |

 

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಪತ್ರಕರ್ತರ ವಿರುದ್ಧ ಅವಹೇಳನಕಾರಿ ಮಾತನಾಡಿದ ಕುರಿತು ಹಾಗೂ ಬೆಂಗಳೂರಿನ ಗಲಭೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಭಟ್ಕಳ ಕಾರ್ಯನಿರತ ಪತ್ರಕರ್ತ ಸಂಘದಿಂದ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಸೋಮವಾರದಂದು ಮನವಿ ಸಲ್ಲಿಸಿದರು.
ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಕುಮಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉತ್ತರ ಕನ್ನಡ ಜಿಲ್ಲೆ ಪತ್ರಕರ್ತರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು ಖಂಡನೀಯವಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಉತ್ತರಕನ್ನಡ ಜಿಲ್ಲಾ ಎಲ್ಲಾ ಪತ್ರಕರ್ತರು ಪತ್ರಿಕಾಗೋಷ್ಠಿಗೆ ಹಣ ಕೇಳುತ್ತಾರೆ ಎನ್ನುವುದಲ್ಲದೆ, ಬೇರೆಯವರ ಹಣದಿಂದಲೇ ಬದುಕುತ್ತಿದ್ದಾರೆ ಎನ್ನುವ ಮೂಲಕ ಜಿಲ್ಲೆಯ ಪತ್ರಕರ್ತರನ್ನು ಅವಹೇಳನ ಮಾಡುವ ಮೂಲಕ ತಮ್ಮ ಕೀಳುಮಟ್ಟದ ಮನಸ್ಥಿತಿಯನ್ನು ತೋರಿಸಿದ್ದಾರೆ. ಇದರಿಂದ ಕಳೆದ ನೂರಾರು ವರ್ಷಗಳಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ ಜಿಲ್ಲೆಯ ಅತ್ಯಂತ ಪ್ರಾಮಾಣಿಕ ಪತ್ರಕರ್ತರಿಗೆ ಹಾಗೂ ಹಾಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಪತ್ರಕರ್ತರಿಗೆ ತೀವ್ರ ನೋವಾಗಿದ್ದು ತಾವು ತಕ್ಷಣ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಇಂತಹ ಕೀಳುಮಟ್ಟದ ಹೇಳಿಕೆಯನ್ನು ನೀಡುವುದನ್ನು ನಿಲ್ಲಿಸುವಂತೆ ತಾಕೀತು ಮಾಡಬೇಕು ಎಂದು ಆಗ್ರಹಿಸಿದರು.
ಇಂತಹ ಹೇಳಿಕೆಗಳನ್ನು ನೀಡುವುದರಿಂದ ಪತ್ರಕರ್ತರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ತೊಂದರೆಯಾಗುವುದಲ್ಲದೇ ಸಮಾಜದಲ್ಲಿ ಗೌರವಯುತವಾಗಿ ನಡೆದುಕೊಳ್ಳುವುದು ಕಷ್ಟವಾಗುತ್ತದೆ. ಸದಾ ಜನರ ಮಧ್ಯದಲ್ಲಿಯೇ ಕಾರ್ಯನಿರ್ವಹಿಸುವ ನಮಗೆ ಇಂತಹ ಹೇಳಿಕೆಗಳಿಂದ ತೊಂದರೆಯಾಗುವುದಲ್ಲದೇ ಕೆಲವೊಂದು ಕಡೆಗಳಲ್ಲಿ ದುಷ್ಕರ್ಮಿಗಳು ದುರುಪಯೋಗ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯೂ ಇರುತ್ತದೆ.
ಅದೇ ರೀತಿಯಾಗಿ ಕಳೆದ ಆಗಸ್ಟ್ 11 ರಂದು ಬೆಂಗಳೂರಿನಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ಪತ್ರಕರ್ತರನ್ನೇ ಗುರಿಯಾಗಿಸಿ ಹಲ್ಲೆ ಮಾಡುವುದು ಖಂಡನೀಯವಾಗಿದ್ದು ರಾಜ್ಯದಲ್ಲಿ ಪತ್ರಕರ್ತರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಅಧ್ಯಕ್‌ರಾಧ ರಾಧಾಕೃಷ್ಣ ಭಟ್,ತಾಲೂಕು ಅಧ್ಯಕ್ಷರಾಧ ಭಾಸ್ಕರ ನಾಯ್ಕ,ಮುಂದಾದರು ಉಪಸ್ಥಿತರಿದ್ದರು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...