ಭಟ್ಕಳ: ಪುಸ್ತಕದ ಸಾಂಗತ್ಯ ಅತ್ಯಂತ ಶ್ರೇಷ್ಠ -ಜಿ.ಪಂ.ಅಧ್ಯಕ್ಷೆ ಜಯಶ್ರೀ ಮೊಗೇರ್ ಅಭಿಮತ

Source: varthabhavan | By Arshad Koppa | Published on 24th August 2017, 8:41 AM | Coastal News | Special Report |

ಪುಸ್ತಕಗಳು ಮನುಷ್ಯನ ಬದುಕಿಗೆ ನಿಜವಾಗಿ ಆಸರೆಯಾಗುವ ಸಂಗಾತಿ. ಅಂತಹ ಪುಸ್ತಕದ ಸಾಂಗತ್ಯ ಅತ್ಯಂತ ಶ್ರೇಷ್ಠವಾದುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್ ನುಡಿದರು. ಅವರು ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದೀಪಾ ಬುಕ್ ಹೌಸ್ ಪುತ್ತೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ಪುಸ್ತಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ನಂತರ ಮಾತನಾಡಿದ ಅವರು ಪುಸ್ತಕದದ ಓದು ನೀಡುವ ಖುಷಿಯಾಗಲಿ ಮಾನಸಿಕ ವಿಕಾಸವಾಗಲಿ ಮೊಬೈಲ್ ಅಥವಾ ಅಂತರ್ಜಾಲಗಳಿಂದಲಾಗಲಾರದು ಶಾಲಾ ಮಕ್ಕಳಿಂದ ಆದಿಯಾಗಿ ಎಲ್ಲರೂ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಂಡು ಹೆಚ್ಚಿಸಿಕೊಳ್ಳಬೇಕೆಂದರಲ್ಲದೇ ಈ ನೆಲೆಯಲ್ಲಿ ಕಸಾಪ ಭಟ್ಕಳ ಘಟಕ ಮತ್ತು ದೀಪಾ ಬುಕ್ ಹೌಸ್ ಪುತ್ತೂರು ಇವರ ಸಹಯೋಗದಲ್ಲಿ ನಡೆಯುತ್ತಿರುವ ಪುಸ್ತಕೋತ್ಸದ ಕುರಿತು ಅಭಿನಂದಿಸಿ ವಿದ್ಯಾವಂತರು, ಯುವಕ ಯುವತಿಯರು ಸಾರ್ವಜನಿಕರು ಸದುಪಯೋಗಪಡೆಸಿಕೊಳ್ಳುವಂತೆ ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಹೊತ್ತಗೆಯುನಮ್ಮ ಬದುಕಿನ ಎಲ್ಲ ಹೊತ್ತಿಗೆ ನಮ್ಮಜೊತೆಗೆ ಇರುವ ಮಿತೃ. ಯಾವ ಪ್ರತಿಫಲಾಪೇಕ್ಷೆ ಇಲ್ಲದೇ . ಇಟ್ಟಲ್ಲಿ ಇರುವ ಬೇಕೆಂದಾಗ ಕೈಗೆ ಬರುವ ಗೆಳೆಯ. ಯಾರು ಪುಸ್ತಕದ ಗೆಳೆತನ ಹೊಂದಿರುತ್ತಾರೋ ಆವರೆಂದೂ ಒಂಟಿತನ ಅನುಭವಿಸಲಾರರು ಎಂದರು. ಕಸಾಪ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಶಿರಾಲಿ ಎಲ್ಲರನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಸ.ಮಾ.ಕ.ಗಂಡು  ಮಕ್ಕಳ ಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕಿ ಮಾಲತಿ ಕೆ, ದೀಪಾ ಬುಕ್ ಹೌಸ್‍ನ ಸತ್ಯಮೂರ್ತಿ ಹೆಬ್ಬಾರ್ ,ಮಂಜುನಾಥ್ ಉಪಸ್ಥಿತರಿದ್ದು ಅತಿಥಿಗಳಿಗೆ ಪುಸ್ತಕವನ್ನು ನೆನಪಿನ ಕಾಣಿಕೆಯಾಗಿ ನೀಡಿದರು ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕಿ ಜಯಶ್ರೀ ಆಚಾರಿ, ಪ್ರೇಮಾ ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದರು. ನಂತರ ಜ.ಪಂ. ಅಧ್ಯಕ್ಷರು ಪುಸ್ತಕ ವೀಕ್ಷಣೆ ಮಾಡಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...