ಭಟ್ಕಳ: ಅಫಾನ್ ಜಬಾಲಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಹಮ್ಮದ್ ಇಕ್ಬಾಲ್ ಗೆ ಹೈಕೋರ್ಟ್ ನಿಂದ ಜಾಮೀನು

Source: sonews | By Staff Correspondent | Published on 24th August 2020, 11:40 PM | Coastal News | Don't Miss |

ಭಟ್ಕಳ: ಕಳೆದ ವರ್ಷ ಅಕ್ಟೋಬರ್ 19 ರಂದು ರಾ.ಹೆ.೬೬ರಲ್ಲಿನ ಶಾನುಭಾಗ ಲಾಡ್ಜ್‌ನಲ್ಲಿ ನಡೆದ ಮಹಮ್ಮದ್ ಅಫ್ಫಾನ್ ಜಬಾಲಿ ಬರ್ಬರ ಹತ್ಯಾಕಾಂಡ ಪ್ರಕರಣದ ಪ್ರಮುಖ ಆರೋಪಿ ಎಂದು ಬಂಧಿಸಲಾಗಿದ್ದ ಮುಹಮ್ಮದ್ ಇಕ್ಬಾಲ್‌ಗೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ನ್ಯಾಯಪೀಠ ಜಾಮೀನು ನೀಡಿದೆ.

ಈ ಹಿಂದೆ ಕಾರವಾರ ಸೆಷನ್ಸ್ ನ್ಯಾಯಾಲಯವು ಕೊಲೆ ಮತ್ತು ದೊಡ್ಡ ಮೊತ್ತದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತಹ ಅಪರಾಧದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಆರೋಪಿ ಇಕ್ಬಾಲ್ ಗೆ ಜಾಮೀನು ನೀಡಲು ನಿರಾಕರಿಸಿತು. ಹೈಕೋರ್ಟ್‌ನಲ್ಲಿ ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ಇಕ್ಬಾಲ್ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಹೈಕೋರ್ಟ್ ನ್ಯಾಯಾಧೀಶರು ಕೇವಲ ಸಾಂಕೇತಿಕ ಸಾಕ್ಷ್ಯಗಳು ಮತ್ತು ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಆಧಾರದ ಮೇಲೆ ಜಾಮೀನು ನಿರಾಕರಿಸುವುದು ಸೂಕ್ತವಲ್ಲ ಎಂದು ಹೇಳಿದರು. ಆದ್ದರಿಂದ, ಕಾರವಾರ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ತಿರಸ್ಕರಿಸಿ ಆರೋಪಿ ಇಕ್ಬಾಲ್ ಗೆ ಜಾಮೀನು ನೀಡಿ, ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಲಾಯಿತು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...