ಜು.29 ರಂದು  ಭಟ್ಕಳದಲ್ಲಿ ಲೋಕಾಯುಕ್ತ  ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Source: sonews | By Staff Correspondent | Published on 23rd July 2019, 10:56 PM | Coastal News | Don't Miss |

ಕಾರವಾರ  :  ಲೋಕಾಯುಕ್ತ ಕಾರವಾರ ಘಟಕದ ಪೊಲೀಸ್ ಅಧಿಕಾರಿಗಳು ಜುಲೈ 25 ರಿಂದ 31 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದು ಜು.29 ರಂದು ಬೆಳಿಗ್ಗೆ 11.00ರಿಂದ 12.30ರ ವರೆಗೆ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಆಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಜುಲೈ 25 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ರವರೆಗೆ ಕಾರವಾರ ಲೋಕಾಯುಕ್ತ ಪೊಲೀಸ್ ಅಧಿಕ್ಷಕರ ಕಚೇರಿಯಲ್ಲಿ, 26 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ಕುಮಟಾ ಹಾಗೂ ಮಧ್ಯಾಹ್ನ 2.30 ರಿಂದ 4 ರವರೆಗೆ ಹೊನ್ನಾವರ ಪ್ರವಾಸಿ ಮಂದಿರ, 29 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ಭಟ್ಕಳ ಪ್ರವಾಸಿ ಮಂದಿರ, 30 ರಂದು ಬೆಳಗ್ಗೆ   11 ರಿಂದ 12.30 ರವರೆಗೆ ಜೋಯಿಡಾ ಹಾಗೂ ಮಧ್ಯಾಹ್ನ 3 ರಿಂದ 4.30 ರವರೆಗೆ ಹಳಿಯಾಳ  ಪ್ರವಾಸಿ ಮಂದಿರ,  31 ರಂದು ಬೆಳಗ್ಗೆ   11 ರಿಂದ 12.30 ರವರೆಗೆ ಯಲ್ಲಾಪುರ ಹಾಗೂ ಮಧ್ಯಾಹ್ನ 3.30  ರಿಂದ ಸಂಜೆ 5 ರವರೆಗೆ ಶಿರಸಿ  ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು. 

ದೂರು ನೀಡುವವರು ಸಿವಿಲ್ ಮತ್ತು ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಹೊರತುಪಡಿಸಿ ಸಾರ್ವಜನಿಕ/ಸರ್ಕಾರಿ ನೌಕರರ ಕರ್ತವ್ಯ ಲೋಪಕ್ಕೆ ಸಂಬಂದಿಸಿದಂತೆ ಅರ್ಜಿ ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಆಫಿಡೆವಿಟ್ ಮಾಡಿ ಸಂಬಂದಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ದೂರು ಅರ್ಜಿಯನ್ನು ಜಿಲ್ಲಾ ಲೋಕಾಯುಕ್ತ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್.ಅಂಬೇಡ್ಕರ್ ಬೀದಿ ಬೆಂಗಳೂರ ರವರಿಗೂ ಸಹ ಸಲ್ಲಿಸಬಹುದಾಗಿದೆ. 

ಅನಾಮದೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಆದ್ದರಿಂದ ಅರ್ಜಿದಾರರು ಅರ್ಜಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ತಪ್ಪದೇ ನಮೂದಿಸುವುದು, ಹೆಚ್ಚಿನ ವಿವರಗಳಿಗಾಗಿ ಲೋಕಾಯುಕ್ತ ಕಛೇರಿ : ದೂರವಾಣಿ ಸಂಖ್ಯೆ: 08382-222202, 222250, 222022, 220198. ಸಂಪರ್ಕಿಸಬಹುದಾಗಿದೆ. 
                            
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...