ಭಟ್ಕಳ:ಸೆಪ್ಟಂಬರ್ 30ರಂದು ಮೆಗಾ ಲೋಕ್-ಅದಾಲತ್

Source: sonews | By MV Bhatkal | Published on 11th September 2021, 7:46 PM | Coastal News | Don't Miss |

ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ದಿನಾಂಕ ಸೆಪ್ಟಂಬರ್ 30ರಂದು ಮೆಗಾ ಲೋಕ್-ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಭಟ್ಕಳದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕೂಡಾ ಬ್ರಹತ್ ಲೋಕದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇಲ್ಲವೇ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿಗಳಿಗೆ ಆನ್‍ಲೈನ್ ಮೂಲಕ, ಈಮೇಲೆ ಮೂಲಕ ಇಲ್ಲವೇ ಖುದ್ದಾಗಿ ಹಾಜರಾಗಿ ಮಾಹಿತಿಯನ್ನು ಪಡೆದುಕೊಳ್ಳಬಹುದು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಕಾನೂನು ಸೇವೆಗಳ ಸಮಿತಿಯನ್ನು ಅಥವಾ ಖಾಯಂ ಜನತಾ ನ್ಯಾಯಾಲಯವನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಂಡು ಪ್ರಕರಣವನ್ನು ಬ್ರಹತ್ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದೂ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ಅಗತ್ಯವಾಗಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದೂ ತಿಳಿಸಲಾಗಿದ್ದು ಸಹಾಯವಾಣಿ 1800 425 90900ಗೆ ಸಂಪರ್ಕಿಸಬಹುದು ಎಂದೂ ತಿಳಿಸಲಾಗಿದೆ. 

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...