ಪೊಲೀಸರು ಬಿಗಿ ಕ್ರಮ ಕೈಗೊಂಡು ಜನರ ಅನಗತ್ಯ ತೀರುಗಾಟಕ್ಕೆ ನಿಯಂತ್ರಣ ಹಾಕಬೇಕು: ಶಾಸಕ ಸುನೀಲ್

Source: so news | By MV Bhatkal | Published on 7th May 2021, 11:42 PM | Coastal News |


ಭಟ್ಕಳ : ಕೋವಿಡ್ 2ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು, ವೈದ್ಯರು ಸೈನಿಕರಂತೆ ಕೆಲಸ ಮಾಡಬೇಕು. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವಾಗ ಅಧಿಕಾರಿಗಳು ಯಾರ ಒತ್ತಡಕ್ಕೂ ಮಣಿಯದೇ ನಿರ್ಧಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಭಟ್ಕಳ ಶಾಸಕ ಸುನೀಲ ನಾಯ್ಕ ಹೇಳಿದರು.
ಅವರು ಶುಕ್ರವಾರ ಕೋವಿಡ್ 2ನೇ ಅಲೆಯ ನಿಯಂತ್ರಣ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಲು ಭಟ್ಕಳ ಉಉವಿಭಾಗಾಧಿಕಾರಿಗಳ ಕಛೇರಿಯಲ್ಲಿ ಕರೇದ ಹೊನ್ನಾವರ ಹಾಗೂ ಭಟ್ಕಳ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಭಟ್ಕಳ ಹಾಗೂ ಹೊನ್ನಾವರ ತಾಲೂಕಿನಲ್ಲಿ ಇರುವ ಕೋವಿಡ್ ಸೋಂಕಿತರ ಮಾಹಿತಿ ಪಡೆದ ಅವರು ಆಸ್ಪತ್ರೆಯಲ್ಲಿರುವ ಆಮ್ಲಜನಕ ಸಂಗ್ರಹ, ಬೆಡ್ ಗಳ ವ್ಯವಸ್ಥೆಗಳ ವಿವರಣೆ ಕೇಳಿದರು. ತಾಲೂಕಿನಲ್ಲಿ ಬೆಡ್ ಗಳ ಕೊರತೆ ಕಂಡುಬಂದಲ್ಲಿ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಎರವಲು ಪಡೆಯುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರೀಯಿಸಿ ಡಾ! ಸವಿತಾ ಕಾಮತ್ ಬೆಡ್ ವ್ಯವಸ್ಥೆ ಮಾಡುವುದರಿಂದ ಎನೂ ಪ್ರಯೋಜನವಾಗುವುದಿಲ್ಲ. ಈ ಬಾರಿ ಸೋಂಕಿತರಿಗೆ ಬೆಡ್ ಗಳ ಜೊತೆ ಆಮ್ಲಜನಕ ಪೂರೈಕೆ ಕೂಡ ಮಾಡಬೇಕಾಗುತ್ತದೆ. ಅದು ಅಲ್ಲಿ ಸಾಧ್ಯವಾಗುವುದಿಲ್ಲ ಎಂದರು. ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ಜನರು ಅನಗತ್ಯವಾಗಿ ಓಡಾಟ ಮಾಡುತ್ತೀರುವುದು ನನ್ನ ಗಮನಕ್ಕೆ ಬಂದಿದೆ. ಇಂದು ಬಂದವರೇ ನಾಳೆ ಮಾರುಕಟ್ಟಯಲ್ಲಿರುತ್ತಾರೆ. ಭಟ್ಕಳ ಪಟ್ಟಣದಲ್ಲಿ ಬೆಳಿಗ್ಗೆ ಜನದಟ್ಟಣೆ ತುಂಬಿರುತ್ತದೆ. ಪೊಲೀಸರು ಬಿಗಿ ಕ್ರಮ ಕೈಗೊಂಡು ಜನರ ಅನಗತ್ಯ ತೀರುಗಾಟಕ್ಕೆ ನಿಯಂತ್ರಣ ಹಾಕಬೇಕು ಎಂದು ಶಾಸಕ ಸುನೀಲ್ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ಹೇಳಿದರು. ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿನ ಲಕ್ಷಣವುಳ್ಳವರಿಗೆ ಚಿಕಿತ್ಸೆ ನೀಡುತ್ತೀರುವ ಹಾಗೂ ಔಷಧಿ ಅಂಗಡಿಗಳಲ್ಲಿ ವೈದ್ಯರ ಚೀಟಿಯಿಲ್ಲದೇ ಔಷಧಿ ನೀಡುತ್ತೀರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ನೊಡೇಲ್ ಅಧಿಕಾರಿಗಳು ಪ್ರತಿದಿವಸ ಅಲ್ಲಿಗೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸುವಂತೆ ತಿಳಿಸಿದರು. ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ, ಭಟ್ಕಳ ತಹಶೀಲ್ದಾರ ರವಿಚಂದ್ರ, ಹೊನ್ನಾವರ ತಹಶೀಲ್ದಾರ ವಿವೇಕ, ಡಾ! ಬಾಲಚಂದ್ರ ಮೇಸ್ತ, ಹೊನ್ನಾವರ ಸಿಪಿಐ ಶ್ರೀಧರ ಎಸ್.ಆರ್, ಇದ್ದರು.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...